Metro pillar collapses: ಬೆಂಗಳೂರು: BMRCL ದಿವ್ಯ ನಿರ್ಲಕ್ಷ್ಯಕ್ಕೆ ಅಮಾಯಕ ಜೀವಗಳು ಬಲಿಯಾಗಿರುವ ಘಟನೆ ನಾಗವಾರ ಬಳಿ ನಡೆದಿದೆ. ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದು ತಾಯಿ-ಮಗು ಸಾವನ್ನಪ್ಪಿರುವ ಘಟನೆ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಎಚ್ ಬಿ ಆರ್ ಲೇಔಟ್ ಬಳಿ ಇಂದು ಬೆಳಗ್ಗೆ ನಡೆದಿದೆ.
ಇದನ್ನೂ ಓದಿ: ಸ್ಯಾಂಟ್ರೋ ರವಿ ಯಾರು ಎಂಬುದೇ ನನಗೆ ಗೊತ್ತಿಲ್ಲ: ಸಂಸದ ರಾಜಾ ಅಮರೇಶ್ವರ ನಾಯ್ಕ್
ತಾಯಿ ತೇಜಸ್ವಿನಿ ಹಾಗೂ ಮಗು ವಿಹಾನ್ ಮೃತ ದುರ್ದೈವಿಗಳು. ಇಂದು ಬೆಳಗ್ಗೆ 10.30 ರ ಸುಮಾರಿಗೆ ಪತಿ ಲೋಹಿತ್ ಜೊತೆ ತೇಜಸ್ವಿನಿ ಹಾಗೂ ಅವಳಿ ಮಕ್ಕಳು ತೆರಳುತ್ತಿದ್ದರು. ಈ ವೇಳೆ ಏಕಾಏಕಿಯಾಗಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಕುಟುಂಬದ ಮೇಲೆ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದು ಬಿದ್ದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ತೇಜಸ್ವಿನಿ ಹಾಗೂ ವಿಹಾನ್ ಮೃತಪಟ್ಟಿದ್ದಾರೆ.
ಸದ್ಯ ಲೋಹಿತ್ ಹಾಗೂ ಮತ್ತೊಂದು ಹೆಣ್ಣು ಮಗುವಿಗೆ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಘಟನಾ ಸ್ಥಳಕ್ಕೆ ಪೂರ್ವ ವಿಭಾಗ ಹೆಚ್ಚುವರಿ ಪೊಲೀಸ್ ಆಯುಕ್ತ ಚಂದ್ರಶೇಖರ್, ಡಿಸಿಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ ಕೋಲಾರ ಸ್ಪರ್ಧೆ ವಿಚಾರ: ಬಿಜೆಪಿ-ಜೆಡಿಎಸ್ ಲೆಕ್ಕಾಚಾರ ಏನು..?
ದುರಂತ ಹಿನ್ನೆಲೆ ನಾಗವಾರಕ್ಕೆ ಸಂಪರ್ಕಿಸುವ ಎಚ್ ಬಿ ಆರ್ ಲೇಔಟ್ ಬಳಿ ಮೆಟ್ರೋ ಪಿಲ್ಲರ್ ರಸ್ತೆ ಮೇಲೆ ಕುಸಿದು ಬೀಳುತ್ತಿದ್ದಂತೆ ಸಂಚಾರಕ್ಕೆ ಅಡಚಣೆಯಾಯಿತು. ಅಲ್ಲದೇ ಸುಮಾರು ಐದಾರು ಕಿಲೋಮಿಟರ್ ವರೆಗೂ ಸಂಚಾರ ದಟ್ಟಣೆಯಾಗಿತ್ತು. ಮೆಟ್ರೋ ಕಾರ್ಮಿಕರು ಹಾಗೂ ಸ್ಥಳೀಯರ ನೆರವಿನಿಂದ ಕಬ್ಬಿಣದ ರಾಡ್ ಗಳಿರುವ ಮೆಟ್ರೋ ಪಿಲ್ಲರ್ ತೆರವುಗೊಳಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.