CM Basavaraj Bommai: ಕೆಟ್ಟ ಸಂಸ್ಕೃತಿ ರಾಜಕಾರಣಕ್ಕೆ ಪ್ರವೇಶಿಸಲು ಕಾಂಗ್ರೆಸ್ ಮಹಾದ್ವಾರ: ಸಿಎಂ ಬೊಮ್ಮಾಯಿ

ಸ್ಯಾಂಟ್ರೋ ರವಿ ಬಿಜೆಪಿ ಕಾರ್ಯಕರ್ತ ಎನ್ನುವ ಬಗ್ಗೆ ಶಾಸಕ ದಿನೇಶ್ ಗುಂಡೂರಾವ್ ಮಾಡಿರುವ ಟ್ವೀಟ್ ಕುರಿತು ಪ್ರತಿಕ್ರಿಯೆ ನೀಡಿ, “ಕಾರ್ಯಕರ್ತ ಹೌದೋ  ಅಲ್ಲವೋ ಎಂದು  ಪರಿಶೀಲಿಸಲು ಸೂಚಿಸಲಾಗಿದೆ. ಕಾಂಗ್ರೆಸ್ ರಾಜಕೀಯವಾಗಿ ದಿವಾಳಿಯಾಗಿದೆ. ಕಾಂಗ್ರೆಸ್ ನಲ್ಲಿ ಎಂಥವರಿದ್ದಾರೆ ಎಂದು ದಿನೇಶ್ ಗುಂಡೂರಾವ್ ಅವರಿಗೆ ತಿಳಿದಿದೆ. ನಾನು ಅವರ ಮಟ್ಟಕ್ಕೆ ಇಳಿಯಲಾಗದು. ಮೊದಲು ಅವರ  ಮನೆ ಸ್ವಚ್ಛ ಮಾಡಿಕೊಳ್ಳುವುದನ್ನು ಕಲಿಯಲಿ” ಎಂದು ಕಟುವಾಗಿ ನುಡಿದರು.

Written by - Prashobh Devanahalli | Edited by - Bhavishya Shetty | Last Updated : Jan 12, 2023, 05:56 PM IST
    • ಕೆಟ್ಟ ಸಂಸ್ಕೃತಿಯು ರಾಜಕಾರಣ ಪ್ರವೇಶಿಸಲು ಕಾಂಗ್ರೆಸ್ ಮಹಾದ್ವಾರ
    • ಸ್ಯಾಂಟ್ರೋ ರವಿ ಬಂಧನವಾಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ
    • ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ
CM Basavaraj Bommai: ಕೆಟ್ಟ ಸಂಸ್ಕೃತಿ ರಾಜಕಾರಣಕ್ಕೆ ಪ್ರವೇಶಿಸಲು ಕಾಂಗ್ರೆಸ್ ಮಹಾದ್ವಾರ: ಸಿಎಂ ಬೊಮ್ಮಾಯಿ title=
Basavaraj Bommai

CM Basavaraj Bommai: ಹುಬ್ಬಳ್ಳಿ,:  ಕೆಟ್ಟ ಸಂಸ್ಕೃತಿಯು ರಾಜಕಾರಣ ಪ್ರವೇಶಿಸಲು ಕಾಂಗ್ರೆಸ್ ಮಹಾದ್ವಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುವ ಸಂದರ್ಭದಲ್ಲಿ ಈ ಹೇಳಿಕೆಯನ್ನು ನೀಡಿದ್ದಾರೆ.

ಇದನ್ನೂ ಓದಿ: ಇನ್ನು ರೇಷನ್ ಕಾರ್ಡ್ ದಾರರಿಗೆ ಸಿಗಲಿದೆ ಪ್ರತಿ ತಿಂಗಳು 35 ಕೆಜಿ ಉಚಿತ ಪಡಿತರ

“ಅವರ ಮನೆ ಸ್ವಚ್ಛ ಮಾಡಿಕೊಳ್ಳಲಿ”

ಸ್ಯಾಂಟ್ರೋ ರವಿ ಬಿಜೆಪಿ ಕಾರ್ಯಕರ್ತ ಎನ್ನುವ ಬಗ್ಗೆ ಶಾಸಕ ದಿನೇಶ್ ಗುಂಡೂರಾವ್ ಮಾಡಿರುವ ಟ್ವೀಟ್ ಕುರಿತು ಪ್ರತಿಕ್ರಿಯೆ ನೀಡಿ, “ಕಾರ್ಯಕರ್ತ ಹೌದೋ  ಅಲ್ಲವೋ ಎಂದು  ಪರಿಶೀಲಿಸಲು ಸೂಚಿಸಲಾಗಿದೆ. ಕಾಂಗ್ರೆಸ್ ರಾಜಕೀಯವಾಗಿ ದಿವಾಳಿಯಾಗಿದೆ. ಕಾಂಗ್ರೆಸ್ ನಲ್ಲಿ ಎಂಥವರಿದ್ದಾರೆ ಎಂದು ದಿನೇಶ್ ಗುಂಡೂರಾವ್ ಅವರಿಗೆ ತಿಳಿದಿದೆ. ನಾನು ಅವರ ಮಟ್ಟಕ್ಕೆ ಇಳಿಯಲಾಗದು. ಮೊದಲು ಅವರ  ಮನೆ ಸ್ವಚ್ಛ ಮಾಡಿಕೊಳ್ಳುವುದನ್ನು ಕಲಿಯಲಿ” ಎಂದು ಕಟುವಾಗಿ ನುಡಿದರು.

ಸ್ಯಾಂಟ್ರೋ ರವಿ ಬಂಧನವಾಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಇದನ್ನೂ ಓದಿ: Hair Care Tips: ತಲೆ ಕೂದಲು ಭಾರೀ ಉದುರುವುದಕ್ಕೆ ಸ್ನಾನ ಮಾಡುವಾಗ ಮಾಡುವ ಈ ತಪ್ಪುಗಳೇ ಕಾರಣ

ಡಿ.ಕೆ.ಶಿವಕುಮಾರ್ ಅವರು ಉಚಿತ ವಿದ್ಯುತ್ ನೀಡುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿದ ಅವರು “ಡಿ ಕೆ ಶಿವಕುಮಾರ್ ಹತಾಶರಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಈ ಹೇಳಿಕೆಗಳನ್ನು ಗಮನಿಸಿದರೆ, ಮುಂದೆ ಅನುಷ್ಠಾನ ಮಾಡುವ ಉದ್ದೇಶ ಅವರಿಗಿಲ್ಲ. ಹೇಗಾದರೂ ಮಾಡಿ, ಸುಳ್ಳು ಭರವಸೆ ನೀಡಿ  ಚುನಾವಣೆ ಗೆಲ್ಲಬೇಕೆನ್ನುವುದು ಸ್ಪಷ್ಟವಾಗಿದೆ. ಇಷ್ಟು ವರ್ಷ ಆಡಳಿತ ಮಾಡಿದ ಜವಾಬ್ದಾರಿಯುತ ಪಕ್ಷ ಕಾಂಗ್ರೆಸ್ ಹೀಗೆ ಹೇಳುವುದು ಸಲ್ಲದು. ಅರವಿಂದ ಕೇಜ್ರಿವಾಲ್ ಹೇಳಿದರೆ ನಡೆಯುತ್ತದೆ. ಅವರಿನ್ನೂ ಹೊಸಬರು. ಕಾಂಗ್ರೆಸ್  ಕಾಲದಲ್ಲಿ 6 ತಾಸು ವಿದ್ಯುತ್ ಸರಿಯಾಗಿ ನೀಡಲಾಗಲಿಲ್ಲ. ಇನ್ನು ಉಚಿತ ವಿದ್ಯುತ್ ಹೇಗೆ ನೀಡಲಿದ್ದಾರೆ” ಎಂದು ಮರುಪ್ರಶ್ನಿಸಿದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News