IND vs NZ: ಏಕದಿನ ತಂಡಕ್ಕೆ ಚೊಚ್ಚಲ ಬಾರಿಗೆ ಎಂಟ್ರಿ ಕೊಟ್ಟ ಈ ಆಟಗಾರ: ದಿಢೀರ್ ಆಗಿ ತೆರೆದ ಅದೃಷ್ಟದ ಬಾಗಿಲು

India VS New Zealand Odi Series: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾದಲ್ಲಿ ಯುವ ವಿಕೆಟ್ ಕೀಪರ್ ಕೆಎಸ್ ಭರತ್ ಸೇರ್ಪಡೆಗೊಂಡಿದ್ದಾರೆ. ಈ ಹಿಂದೆ ಕೆಎಸ್ ಭರತ್ ಟೆಸ್ಟ್ ತಂಡದಲ್ಲಿ ಮಾತ್ರ ಸ್ಥಾನ ಪಡೆಯಲು ಸಾಧ್ಯವಾಗಿತ್ತು. ಆದರೆ, ಟೀಂ ಇಂಡಿಯಾಗೆ ಪದಾರ್ಪಣೆ ಮಾಡಲು ಇನ್ನೂ ಸಾಧ್ಯವಾಗಿಲ್ಲ. ಟೆಸ್ಟ್ ತಂಡದಲ್ಲಿ ಬ್ಯಾಕಪ್ ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ಅವರನ್ನು ತಂಡದಲ್ಲಿ ಇರಿಸಲಾಗಿದೆ.

Written by - Bhavishya Shetty | Last Updated : Jan 14, 2023, 08:28 AM IST
    • ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕರನ್ನಾಗಿ ಮಾಡಲಾಗಿದೆ
    • ಏಕದಿನ ತಂಡಕ್ಕೆ ಆಯ್ಕೆಗಾರರು ಯುವ ಆಟಗಾರನನ್ನು ಸೇರಿಸಿಕೊಂಡಿದ್ದಾರೆ
    • ಟೀಂ ಇಂಡಿಯಾದಲ್ಲಿ ಯುವ ವಿಕೆಟ್ ಕೀಪರ್ ಕೆಎಸ್ ಭರತ್ ಸೇರ್ಪಡೆಗೊಂಡಿದ್ದಾರೆ
IND vs NZ: ಏಕದಿನ ತಂಡಕ್ಕೆ ಚೊಚ್ಚಲ ಬಾರಿಗೆ ಎಂಟ್ರಿ ಕೊಟ್ಟ ಈ ಆಟಗಾರ: ದಿಢೀರ್ ಆಗಿ ತೆರೆದ ಅದೃಷ್ಟದ ಬಾಗಿಲು title=
Cricket

India VS New Zealand Odi Series: ಟೀಂ ಇಂಡಿಯಾ ಜನವರಿ 18 ರಿಂದ ನ್ಯೂಜಿಲೆಂಡ್ ವಿರುದ್ಧ 3 ODI ಮತ್ತು T20 ಸರಣಿಗಳನ್ನು ಆಡಲಿದೆ. ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕರನ್ನಾಗಿ ಮಾಡಲಾಗಿದೆ. ಈ ಏಕದಿನ ಸರಣಿಗಾಗಿ ಭಾರತೀಯ ಆಯ್ಕೆಗಾರರು ಆಘಾತಕಾರಿ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಏಕದಿನ ತಂಡಕ್ಕೆ ಆಯ್ಕೆಗಾರರು ಯುವ ಆಟಗಾರನನ್ನು ಸೇರಿಸಿಕೊಂಡಿದ್ದಾರೆ. ಈ ಆಟಗಾರ ಕೆಲವು ಸಮಯದಿಂದ ನಿರಂತರವಾಗಿ ಟೆಸ್ಟ್ ತಂಡದ ಭಾಗವಾಗುತ್ತಿದ್ದಾರೆ.

ಇದನ್ನೂ ಓದಿ: IND vs NZ: ಅಂತ್ಯವಾಯಿತು ರೋಹಿತ್- ಕೊಹ್ಲಿ ಸುವರ್ಣಯುಗ: ಇನ್ಮುಂದೆ ಟೀಂ ಇಂಡಿಯಾ ಕ್ಯಾಪ್ಟನ್ ಈ ಆಟಗಾರ!

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾದಲ್ಲಿ ಯುವ ವಿಕೆಟ್ ಕೀಪರ್ ಕೆಎಸ್ ಭರತ್ ಸೇರ್ಪಡೆಗೊಂಡಿದ್ದಾರೆ. ಈ ಹಿಂದೆ ಕೆಎಸ್ ಭರತ್ ಟೆಸ್ಟ್ ತಂಡದಲ್ಲಿ ಮಾತ್ರ ಸ್ಥಾನ ಪಡೆಯಲು ಸಾಧ್ಯವಾಗಿತ್ತು. ಆದರೆ, ಟೀಂ ಇಂಡಿಯಾಗೆ ಪದಾರ್ಪಣೆ ಮಾಡಲು ಇನ್ನೂ ಸಾಧ್ಯವಾಗಿಲ್ಲ. ಟೆಸ್ಟ್ ತಂಡದಲ್ಲಿ ಬ್ಯಾಕಪ್ ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ಅವರನ್ನು ತಂಡದಲ್ಲಿ ಇರಿಸಲಾಗಿದೆ.

ಕೆಎಸ್ ಭರತ್ ಕೂಡ ಟೀಂ ಇಂಡಿಯಾ ಪರ ಪಂದ್ಯವೊಂದರಲ್ಲಿ ವಿಕೆಟ್ ಕೀಪಿಂಗ್ ಮಾಡಿದ್ದಾರೆ. ಟೆಸ್ಟ್ ಪಂದ್ಯವೊಂದರಲ್ಲಿ ಗಾಯಗೊಂಡಿರುವ ವೃದ್ಧಿಮಾನ್ ಸಹಾ ಬದಲಿಗೆ ಬದಲಿ ಆಟಗಾರನಾಗಿ ವಿಕೆಟ್ ಕೀಪಿಂಗ್ ನಿಭಾಯಿಸುವ ಮೂಲಕ ಕೆ.ಎಸ್.ಭರತ್ ಎಲ್ಲರ ಗಮನ ಸೆಳೆದಿದ್ದರು. ವಿಕೆಟ್ ಕೀಪಿಂಗ್ ಕೌಶಲ್ಯದಲ್ಲಿ ಕೆಎಸ್ ಭರತ್ ರಿಷಬ್ ಪಂತ್ ಗಿಂತ ಉತ್ತಮವಾಗಿ ಕಾಣುತ್ತಿದ್ದಾರೆ. ಇತ್ತೀಚೆಗೆ ಭಾರತ ಎ ಮತ್ತು ನ್ಯೂಜಿಲೆಂಡ್ ಎ ನಡುವೆ ನಡೆದ ಅನಧಿಕೃತ ಟೆಸ್ಟ್‌ನಲ್ಲಿ ಕೆಎಸ್ ಭರತ್ ಅದ್ಭುತ ಪ್ರದರ್ಶನ ನೀಡಿದ್ದರು.

ದೇಶಿ ಕ್ರಿಕೆಟ್‌ನಲ್ಲಿ ಇದುವರೆಗಿನ ಪ್ರದರ್ಶನ:

ಕೆಎಸ್ ಭರತ್ ದೇಶೀಯ ಕ್ರಿಕೆಟ್‌ನಲ್ಲಿ ಆಂಧ್ರಪ್ರದೇಶ ತಂಡದ ಪರ ಆಡುತ್ತಿದ್ದಾರೆ. ಕೆಎಸ್ ಭರತ್ 2013ರಲ್ಲಿ ಚೊಚ್ಚಲ ಪಂದ್ಯವನ್ನಾಡಿದ್ದರು. 86 ಪ್ರಥಮ ದರ್ಜೆ ಪಂದ್ಯಗಳಲ್ಲಿ 4707 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ 9 ಶತಕ ಮತ್ತು 27 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಲಿಸ್ಟ್ ಎ 64 ಪಂದ್ಯಗಳಲ್ಲಿ 1950 ರನ್ ಗಳಿಸಿದ್ದಾರೆ. ಈ ಮಾದರಿಯಲ್ಲಿ ಅವರು 5 ಶತಕ ಮತ್ತು 5 ಅರ್ಧ ಶತಕಗಳನ್ನು ಗಳಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಕುಲದೀಪ್ ಯಾದವ್ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್

ಇದನ್ನೂ ಓದಿ:  ನ್ಯೂಜಿಲೆಂಡ್ ಸರಣಿ: ಟೀಮ್ ಇಂಡಿಯಾ ಇಲೆವನ್ ಸದಸ್ಯರ ಪಟ್ಟಿ ಪ್ರಕಟ

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರಿತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯುಜ್ವೇಂದ್ರ ಸಿಂಗ್ ಚಾಹಲ್, ಅರ್ಷ್‌ದೀಪ್ ಚಾಹಲ್, ಉಮ್ರಾನ್ ಮಲಿಕ್, ಶಿವಂ ಮಾವಿ, ಪೃಥ್ವಿ ಶಾ, ಮುಖೇಶ್ ಕುಮಾರ್

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News