ಪಶ್ಚಿಮ ಬಂಗಾಳ : ಬಂಗಾಳದ ಬಿರ್ಭೂಮ್ನಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸಿದ್ಧಪಡಿಸಿದ ಊಟದಲ್ಲಿ ಹಾವು ಪತ್ತೆಯಾಗಿದೆ. ಈಗಾಗಲೇ ಆಹಾರ ಸೇವಿಸಿದ ಹಲವು ಶಾಲಾ ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಮಯೂರೇಶ್ವರ ಬ್ಲಾಕ್ನ ಪ್ರಾಥಮಿಕ ಶಾಲೆಯ ಸುಮಾರು 30 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಜಿಲ್ಲಾ ಪ್ರಾಥಮಿಕ ಶಾಲಾ ಕೌನ್ಸಿಲ್ ಅಧ್ಯಕ್ಷ ಪಿ.ನಾಯಕ್ ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರನ್ನು ಹೊರತುಪಡಿಸಿ ಉಳಿದೆಲ್ಲಾ ಮಕ್ಕಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನಾನು ಕೂಡ ಆಸ್ಪತ್ರೆಗೆ ತೆರಳಿ ಪೋಷಕರೊಂದಿಗೆ ಮಾತನಾಡಿದೆ. ಈಗ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ ಯಾವುದೇ ಭಯವಿಲ್ಲ ಎಂದು ನಾಯಕ್ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ʼನಿತ್ಯಾನಂದನ ಕೈಲಾಸʼ ದೇಶದ ಜೊತೆ USA ಒಪ್ಪಂದ..! ಯಾಕೆ ಗೊತ್ತಾ..?
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬ್ಲಾಕ್ ಅಭಿವೃದ್ಧಿ ಅಧಿಕಾರಿ ದೀಪಾಂಜನ್ ಜನಾ, ಮಧ್ಯಾಹ್ನದ ಊಟದ ನಂತರ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗುತ್ತಿರುವ ಬಗ್ಗೆ ಹಲವು ಗ್ರಾಮಗಳಿಂದ ದೂರುಗಳು ಬಂದಿವೆ. ಈ ಬಗ್ಗೆ ಪ್ರಾಥಮಿಕ ಶಾಲೆಗಳ ಜಿಲ್ಲಾ ನಿರೀಕ್ಷಕರಿಗೆ ತಿಳಿಸಲಾಗಿದೆ ಎಂದರು. ಇನ್ನು ಇದಕ್ಕೂ ಮುನ್ನ ಮತ್ತೊಂದು ಪ್ರಕರಣದಲ್ಲಿ ಮಾಲ್ಡಾದ ಶಾಲೆಯ ಊಟದಲ್ಲಿ ಇಲಿ ಹಾಗೂ ಹಲ್ಲಿ ಪತ್ತೆಯಾಗಿತ್ತು. ಈ ಭಾಗದ ಶಾಲೆಗಳಿಗೆ ಪೂರೈಕೆಯಾಗುವ ಆಹಾರದ ಗುಣಮಟ್ಟ ಭಯಾನಕವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದೇ ವೇಳೆ ಮಧ್ಯಾಹ್ನದ ಊಟದಲ್ಲಿ ಹಾವು ಪತ್ತೆಯಾದ ಘಟನೆಯ ಬಗ್ಗೆ ಸರ್ಕಾರ ತನಿಖೆಗೆ ಆದೇಶಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.