ಬೆಂಗಳೂರು : ವಿಭಿನ್ನ ಕಥಾಹಂದರ ಹೊಂದಿರುವ "ದಿಲ್ ಖುಷ್" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಕೊಡಗಿನ ಸೋಮವಾರಪೇಟೆ, ಶನಿವಾರಸಂತೆ ಮುಂತಾದ ಕಡೆ ಸಿನಿಮಾದ ಚಿತ್ರೀಕರಣ ನಡೆದಿದೆ. ಚಿತ್ರದ ಡಬ್ಬಿಂಗ್ ಕೂಡ ಪೂರ್ಣವಾಗಿದ್ದು, ಇದೀಗ ರೀರೆಕಾರ್ಡಿಂಗ್ ನಡೆಯುತ್ತಿದೆ.
"ದಿಲ್ ಖುಷ್", ಸಂಪೂರ್ಣ ಕುಟುಂಬ ಸಮೇತ ನೋಡಬಹುದಾದ ಚಿತ್ರ. ಈ ಚಿತ್ರದಲ್ಲಿ ಯುವಪ್ರತಿಭೆ ರಂಜಿತ್ ನಾಯಕನಾಗಿ, ಸ್ಪಂದನ ಸೋಮಣ್ಣ ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ನಾಯಕ, ನಾಯಕಿ ಪಾತ್ರ ಅಷ್ಟೆ ಅಲ್ಲದೆ ಎಲ್ಲಾ ಪಾತ್ರಕ್ಕೂ ಪ್ರಾಮುಖ್ಯತೆ ನೀಡಲಾಗಿದೆ. ನಮ್ಮ ಸುತ್ತ ಮುತ್ತ ನಡೆಯುವ ಕಥೆಯಾ ರೀತಿಯೇ ಸಾಗುತ್ತದೆ ಚಿತ್ರ ಕತೆ. ಕಾಮಿಡಿ ಹಾಗು ಎಮೋಷನಲ್ ಸನ್ನಿವೇಶಗಳಲ್ಲಿ ರಂಗಾಯಣ ರಘು, ರಘು ರಾಮನಕೊಪ್ಪ, ರವಿ ಭಟ್, ಧರ್ಮಣ್ಣ ಕಡೂರು ಅವರ ಪಾತ್ರಗಳು ಕಾಡುತ್ತವೆ ಎನ್ನುತ್ತಾರೆ ನಿರ್ದೇಶಕ ಪ್ರಮೋದ್ ಜಯ.
ಇದನ್ನೂ ಓದಿ : The Vaccine War: ಸಪ್ತಮಿ ಗೌಡ ನಟನೆಯ ಹಿಂದಿ ಸಿನಿಮಾ ಶೂಟಿಂಗ್ ವೇಳೆ ಅವಘಡ, ನಟಿಗೆ ಗಾಯ!
ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ ನಿರ್ಮಿಸಿರುವ ಈ ಚಿತ್ರದ ಪ್ರಥಮ ಪ್ರತಿ ಸದ್ಯದಲ್ಲೇ ಸಿದ್ದವಾಗಲಿದೆ. ಪ್ರಸಾದ್ ಕೆ ಶೆಟ್ಟಿ ಸಂಗೀತ ನೀಡಿರುವ ಐದು ಹಾಡುಗಳು ಚಿತ್ರದಲ್ಲಿದ್ದು, ಫೆಬ್ರವರಿ ನಂತರ ಒಂದಾದ ಮೇಲೆ ಒಂದು ಹಾಡು ಬಿಡುಗಡೆಯಾಗಲಿದೆ. ಆನಂತರ ಟ್ರೇಲರ್ ಕೂಡ ಹೊರ ಬರಲಿದೆ.
ರಂಜಿತ್ ಎಂಬ ನೂತನ ಪ್ರತಿಭೆ ಮೊದಲ ಬಾರಿಗೆ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಸ್ಪಂದನ ಸೋಮಣ್ಣ ಈ ಚಿತ್ರದ ನಾಯಕಿ. ರಂಗಾಯಣ ರಘು, ಧರ್ಮಣ್ಣ ಕಡೂರು, ರವಿ ಭಟ್, ಅರುಣ ಬಾಲರಾಜ್, ರಘು ರಾಮನಕೊಪ್ಪ, ಸೂರ್ಯ ಪ್ರವೀಣ್, ಮಧುಸೂದನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಇದನ್ನೂ ಓದಿ : Jr NTR with Cricketers : ಜೂ.ಎನ್‌ಟಿಆರ್ ಜೊತೆ ಟೀಂ ಇಂಡಿಯಾ ಆಟಗಾರರು.. ಈ ಭೇಟಿಯ ವಿಶೇಷವೇನು?
ನಿವಾಸ್ ನಾರಾಯಣ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಜ್ಞಾನೇಶ್ ಬಿ ಮಠದ್ ಸಂಕಲನ, ಹೈಟ್ ಮಂಜು ನೃತ್ಯ ನಿರ್ದೇಶನ ಹಾಗೂ ವಿಕ್ರಮ್, ಅಶೋಕ್ ಅವರ ಸಾಹಸ ನಿರ್ದೇಶನವಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.