/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

Most Runs in the first ODI: ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ 3-0 ಅಂತರದಲ್ಲಿ ಗೆಲುವು ಸಾಧಿಸಿದ ಭಾರತ ಇಂದಿನಿಂದ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ. ಟೀಮ್ ಇಂಡಿಯಾ ಈಗ ಮೂರು ಪಂದ್ಯಗಳ ODI ಸರಣಿಗಾಗಿ ನ್ಯೂಜಿಲೆಂಡ್‌ಗೆ ಆತಿಥ್ಯ ವಹಿಸಲಿದೆ. ಪಂದ್ಯವು ಇಂದಿನಿಂದ ಪ್ರಾರಂಭವಾಗಲಿದ್ದು, ಆರಂಭಿಕ ಪಂದ್ಯವು ಹೈದರಾಬಾದ್ ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ರೋಹಿತ್ ಶರ್ಮಾ ನಾಯಕತ್ವದಲ್ಲಿ ಮೆನ್ ಇನ್ ಬ್ಲೂ, ಶ್ರೀಲಂಕಾ ವಿರುದ್ಧದ ODI ಸರಣಿಯ ಗೆಲುವಿನಿಂದ ತಮ್ಮ ವೇಗವನ್ನು ಮುಂದುವರಿಸುವ ಗುರಿಯನ್ನು ಹೊಂದಿದೆ. ಆತಿಥೇಯರು ತಮ್ಮ ಏಷ್ಯನ್ ಪ್ರತಿಸ್ಪರ್ಧಿಗಳ ವಿರುದ್ಧ, ವಿಶೇಷವಾಗಿ ಏಕದಿನ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿರುವ ತಂಡದ ವಿರುದ್ಧ ಗೆಲುವು ಸಾಧಿಸಲು ಯೋಜನೆ ರೂಪಿಸುತ್ತಿದ್ದಾರೆ.  

ಇದನ್ನೂ ಓದಿ: Saina Nehwal: 'ಮೆದುಳು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ'.. ಆಘಾತಕಾರಿ ಹೇಳಿಕೆ ನೀಡಿದ ಸೈನಾ ನೆಹ್ವಾಲ್

ಮತ್ತೊಂದೆಡೆ, ನ್ಯೂಜಿಲೆಂಡ್ ತಂಡದಲ್ಲಿ ನಾಯಕ ಕೇನ್ ವಿಲಿಯಮ್ಸನ್ ಇಲ್ಲ. ಅವರು ಕೆಲಸದ ಹೊರೆ ನಿರ್ವಹಣೆಯಿಂದಾಗಿ ಸರಣಿಯಿಂದ ಹೊರಗುಳಿದಿದ್ದಾರೆ.

ಹೈದರಾಬಾದ್‌ನಲ್ಲಿ ಬುಧವಾರ ನಡೆಯುವ ಮೊದಲ ಏಕದಿನ ಪಂದ್ಯದಲ್ಲಿ ಶ್ರೇಷ್ಠ ಮೂವರು ಬ್ಯಾಟರ್‌ಗಳನ್ನು ನೋಡೋಣ. ಇವರು ಅತೀ ಹೆಚ್ಚು ರನ್ ಕಲೆ ಹಾಕುವ ಸಾಧ್ಯತೆ ಇದೆ.

ಶ್ರೀಲಂಕಾ ವಿರುದ್ಧದ ಯಶಸ್ವಿ ಸರಣಿಯೊಂದಿಗೆ ಶುಭಮನ್ ಗಿಲ್ ಶುಭಾಗಮನ ಮಾಡಿದ್ದಾರೆ. ಗುವಾಹಟಿಯಲ್ಲಿ 60 ಎಸೆತಕ್ಕೆ 70 ರನ್ ಬಾರಿಸಿದ್ದರು. ಬಳಿಕ ಮೂರನೇ ಪಂದ್ಯದಲ್ಲಿ 97 ಎಸೆತಕ್ಕೆ 116 ರನ್ ಶತಕ ಸಿಡಿಸಿ ಮಿಂಚಿದ್ದರು. ಈ ಬಾರಿಯೂ ಅಬ್ಬರಿಸುವ ಸಾಧ್ಯತೆ ಇದೆ. ಗಿಲ್ 69.00 ಸರಾಸರಿಯಲ್ಲಿ 207 ರನ್‌ಗಳೊಂದಿಗೆ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಸರಣಿಯನ್ನು ಕೊನೆಗೊಳಿಸಿದ್ದಾರೆ. ಬಲಗೈ ಆಟಗಾರನು ಕಿವೀಸ್ ವಿರುದ್ಧವೂ ತನ್ನ ಮೋಜಿನ ಓಟವನ್ನು ಮುಂದುವರಿಸುತ್ತಾರಾ ಎಂದು ಕಾದುನೋಡಬೇಕಿದೆ.

ಟಾಮ್ ಲ್ಯಾಥಮ್ : ಟಾಮ್ ಲ್ಯಾಥಮ್ ಭಾರತದ ವಿರುದ್ಧ ಬ್ಯಾಟಿಂಗ್ ಮಾಡಲು ಇಷ್ಟಪಡುತ್ತಾರೆ. ಅವರು 17 ODI ಇನ್ನಿಂಗ್ಸ್‌ಗಳಲ್ಲಿ ಮೆನ್ ಇನ್ ಬ್ಲೂ ವಿರುದ್ಧ 65.07 ಸರಾಸರಿಯನ್ನು ಹೊಂದಿದ್ದಾರೆ. ಭಾರತದ ವಿರುದ್ಧದ ಅವರ ಕೊನೆಯ ಇನ್ನಿಂಗ್ಸ್ ನವೆಂಬರ್‌ನಲ್ಲಿ ನಡೆದಿದ್ದು, ಅದರಲ್ಲಿ 104 ಎಸೆತಗಳಲ್ಲಿ ಅಜೇಯ 145 ರನ್ ಗಳಿಸಿದ್ದರು. ಇದೀಗ ಕೇನ್ ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ನಾಯಕತ್ವದ ಹೆಚ್ಚುವರಿ ಜವಾಬ್ದಾರಿಯನ್ನು ಟಾಮ್ ಹೊಂದಿರುತ್ತಾರೆ.

ವಿರಾಟ್ ಕೊಹ್ಲಿ ಇತ್ತೀಚೆಗೆ ಕ್ರಿಕೆಟ್ ಮೈದಾನದಲ್ಲಿ ಅಬ್ಬರಿಸುತ್ತಿದ್ದಾರೆ. ಮೂರು ಏಕದಿನ ಪಂದ್ಯದಲ್ಲಿ ಭರ್ಜರಿಯಾಗಿ ಆಟವಾಡಿದ ಕೊಹ್ಲಿ ದ್ವಿಶತಕ ಬಾರಿಸಿದ್ದಾರೆ. ಕಳೆದ ತಿಂಗಳು ಬಾಂಗ್ಲಾದೇಶದ ವಿರುದ್ಧ ತನ್ನ 44 ನೇ ODI ಶತಕವನ್ನು ಗಳಿಸಿದ ನಂತರ, 2023ರಲ್ಲಿ ಬ್ಯಾಕ್ ಟು ಬ್ಯಾಕ್ ಸೆಂಚುರಿ ಬಾರಿಸಿದ್ದಾರೆ.  

ಇದನ್ನೂ ಓದಿ:  Vinod Kambli: ಮೊದಲ 7 ಪಂದ್ಯಗಳಲ್ಲಿ 4 ಶತಕ ಸಿಡಿಸಿದ ಈ ಸ್ಟಾರ್ ಕ್ರಿಕೆಟಿಗ ಆಗಿದ್ದು 2 ಮದುವೆ! ‘ಕ್ರಿಕೆಟ್ ದೇವರ’ ಪ್ರಿಯ ಗೆಳಯನೀತ

ಈ ಮೂವರು ಆಟಗಾರರು ಭಾರತ ನ್ಯೂಜಿಲೆಂಡ್ ನಡುವಿನ ಮೂರು ಏಕದಿನ ಪಂದ್ಯಗಳಲ್ಲಿ ಅತೀ ಹೆಚ್ಚು ರನ್ ಗಳಿಸುವ ಸಾಧ್ಯತೆ ಇದೆ. ಸದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಹೈದರಾಬಾದ್ ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ ನಡೆಯಲಿದೆ.

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Section: 
English Title: 
These three Cricketers has the chance to score the most runs in the first ODI
News Source: 
Home Title: 

IND vs NZ 2023: ಮೊದಲ ಏಕದಿನ ಪಂದ್ಯದಲ್ಲಿ ಈ ಮೂವರಿಗಿದೆ ಅತೀ ಹೆಚ್ಚು ರನ್ ಗಳಿಸುವ ಅವಕಾಶ!

IND vs NZ 2023: ಮೊದಲ ಏಕದಿನ ಪಂದ್ಯದಲ್ಲಿ ಈ ಮೂವರಿಗಿದೆ ಅತೀ ಹೆಚ್ಚು ರನ್ ಗಳಿಸುವ ಅವಕಾಶ!
Caption: 
IND vs NZ
Yes
Is Blog?: 
No
Tags: 
Facebook Instant Article: 
Yes
Highlights: 
  • ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ 3-0 ಅಂತರದಲ್ಲಿ ಗೆಲುವು ಸಾಧಿಸಿದ ಭಾರತ
  • ಟೀಮ್ ಇಂಡಿಯಾ ಈಗ ಮೂರು ಪಂದ್ಯಗಳ ODI ಸರಣಿಗಾಗಿ ನ್ಯೂಜಿಲೆಂಡ್‌ಗೆ ಆತಿಥ್ಯ ವಹಿಸಲಿದೆ
  • ಆರಂಭಿಕ ಪಂದ್ಯವು ಹೈದರಾಬಾದ್ ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ
Mobile Title: 
IND vs NZ 2023: ಮೊದಲ ಏಕದಿನ ಪಂದ್ಯದಲ್ಲಿ ಈ ಮೂವರಿಗಿದೆ ಅತೀ ಹೆಚ್ಚು ರನ್ ಗಳಿಸುವ ಅವಕಾಶ!
Bhavishya Shetty
Publish Later: 
No
Publish At: 
Wednesday, January 18, 2023 - 12:19
Created By: 
Bhavishya Shetty
Updated By: 
Bhavishya Shetty
Published By: 
Bhavishya Shetty
Request Count: 
2
Is Breaking News: 
No