IND vs NZ : ಮೂರನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಪ್ಲೇಯಿಂಗ್ 11 ಹೀಗಿದೆ!

India vs New Zealand 3rd ODI : ಸಧ್ಯ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಅತ್ಯುತ್ತಮ ಫಾರ್ಮ್‌ನಲ್ಲಿ ಸಾಗುತ್ತಿದೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ ಈ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಮೂರನೇ ಏಕದಿನ ಪಂದ್ಯ ಜನವರಿ 24 ರಂದು ನಡೆಯಲಿದೆ.

Written by - Channabasava A Kashinakunti | Last Updated : Jan 22, 2023, 03:13 PM IST
  • ಮೂರನೇ ಏಕದಿನ ಪಂದ್ಯ ಜನವರಿ 24 ರಂದು ನಡೆಯಲಿದೆ
  • ಮಧ್ಯಮ ಕ್ರಮಾಂಕದಲ್ಲಿ ಸ್ಥಾನ ಪಡೆಯುತ್ತಾರಾ ಈ ಆಟಗಾರರು?
  • ಈ ಬೌಲರ್‌ಗಳಿಗೆ ಸಿಗಬಹುದು ಅವಕಾಶ
IND vs NZ : ಮೂರನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಪ್ಲೇಯಿಂಗ್ 11 ಹೀಗಿದೆ! title=

India vs New Zealand 3rd ODI : ಸಧ್ಯ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಅತ್ಯುತ್ತಮ ಫಾರ್ಮ್‌ನಲ್ಲಿ ಸಾಗುತ್ತಿದೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ ಈ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಮೂರನೇ ಏಕದಿನ ಪಂದ್ಯ ಜನವರಿ 24 ರಂದು ನಡೆಯಲಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡುವ ಗುರಿ ಹೊಂದಿದೆ. ಇದಕ್ಕಾಗಿ ಕ್ಯಾಪ್ಟನ್ ರೋಹಿತ್ ಶರ್ಮಾ ಪ್ಲೇಯಿಂಗ್ 11 ನಲ್ಲಿ ಬದಲಾವಣೆ ಮಾಡಬಹುದು ಎಂದು ಹೇಳಲಾಗುತ್ತಿದೆ. ಹಾಗಿದ್ರೆ, ಯಾರಿಗೆಲ್ಲ ಅವಕಾಶ ಸಿಗಲಿದೆ? ಈ ಕೆಳಗಿದೆ ನೋಡಿ..

ಟಾಪ್ ಆರ್ಡರ್ ಈ ರೀತಿ ಇದೆ

ಶುಭಮನ್ ಗಿಲ್ ಕಳೆದ ಐದು ಪಂದ್ಯಗಳಲ್ಲಿ ರೋಹಿತ್ ಶರ್ಮಾ ಅವರೊಂದಿಗೆ ಅತ್ಯುತ್ತಮ ಆರಂಭಿಕ ಜೊತೆಯಾಟಗಳನ್ನು ಆಡಿದ್ದಾರೆ. ಸಧ್ಯ ರೋಹಿತ್ ಮತ್ತು ಗಿಲ್ ಅತ್ಯುತ್ತಮ ಫಾರ್ಮ್‌ನಲ್ಲಿ ಮುನ್ನಡೆ ಸಾಧಿಸುತ್ತಿದ್ದಾರೆ. ಹೀಗಾಗಿ, ಈ ಇಬ್ಬರೂ ಆಟಗಾರರು ಓಪನರ್ ಆಗಿ ಕಣಕ್ಕೆ ಇಳಿಯುವುದು ಖಚಿತ ಎನಿಸುತ್ತಿದೆ. ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಬಿರುಸಿನ 51 ರನ್‌ಗಳ ಇನ್ನಿಂಗ್ಸ್ ಆಡಿದರು. ಅದೇ ಸಮಯದಲ್ಲಿ, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕಕ್ಕೆ ಇಳಿಯುವುದು ಖಚಿತವಾಗಿದೆ. 

ಇದನ್ನೂ ಓದಿ : ಸೇಮ್ MS Dhoni ಥರನೇ ಕ್ರಿಕೆಟ್ ಆಡ್ತಾರಂತೆ ಈ ಸ್ಟಾರ್ ಕ್ರಿಕೆಟಿಗನ ಮಗ: Team India ಕ್ಯಾಪ್ಟನ್ ಆಗ್ತಾರಾ?

ಮಧ್ಯಮ ಕ್ರಮಾಂಕದಲ್ಲಿ ಸ್ಥಾನ ಪಡೆಯುತ್ತಾರಾ ಈ ಆಟಗಾರರು?

ಇಶಾನ್ ಕಿಶನ್ ನಾಲ್ಕನೇ ಸ್ಥಾನಕ್ಕೆ ಇಳಿಯುವುದು ಖಚಿತ. ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನೂ ಅವರು ನಿರ್ವಹಿಸುವುದನ್ನು ಕಾಣಬಹುದು. ಅದೇ ಸಮಯದಲ್ಲಿ ಸೂರ್ಯಕುಮಾರ್ ಯಾದವ್ ಐದನೇ ಕ್ರಮಾಂಕದಲ್ಲಿ ಅವಕಾಶ ಪಡೆಯಬಹುದು. ಏಕದಿನ ಕ್ರಿಕೆಟ್‌ನಲ್ಲಿ ಸೂರ್ಯ ಅವರ ಹೆಸರಿಗೆ ತಕ್ಕಂತೆ ಪ್ರದರ್ಶನ ನೀಡಲು ಇನ್ನೂ ಸಾಧ್ಯವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಅವರು ಮೂರನೇ ಏಕದಿನ ಪಂದ್ಯದಲ್ಲಿ ದೊಡ್ಡ ಇನ್ನಿಂಗ್ಸ್ ಆಡಲು ಬಯಸಿದ್ದಾರೆ. ಅದೇ ಸಮಯದಲ್ಲಿ, ಹಾರ್ದಿಕ್ ಪಾಂಡ್ಯ ಆರನೇ ಕ್ರಮಾಂಕಕ್ಕೆ ಇಳಿಯುವುದು ಖಚಿತವಾಗಿದೆ. ಹಾರ್ದಿಕ್ ಬಾಲ್ ಮತ್ತು ಬ್ಯಾಟ್‌ನೊಂದಿಗೆ ಅತ್ಯುತ್ತಮ ಲಯದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಬೌಲರ್‌ಗಳಿಗೆ ಸಿಗಬಹುದು ಅವಕಾಶ 

ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ವೇಗದ ಬೌಲರ್‌ಗಳು ಅಮೋಘ ಆಟ ಪ್ರದರ್ಶಿಸಿದರು. ಇನಿಂಗ್ಸ್‌ನ ಆರಂಭದಲ್ಲಿ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಕಿಲ್ಲರ್ ಬೌಲಿಂಗ್ ಮಾಡಿದ್ದಾರೆ. ಅದೇ ಸಮಯದಲ್ಲಿ, ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಬದಲಿಗೆ ಉಮ್ರಾನ್ ಮಲಿಕ್‌ಗೆ ನಾಯಕ ರೋಹಿತ್ ಶರ್ಮಾ ಅವಕಾಶ ನೀಡಬಹುದು. ಉಮ್ರಾನ್ ಅತ್ಯುತ್ತಮ ಫಾರ್ಮ್‌ನಲ್ಲಿ ಓಡುತ್ತಿದ್ದು, ವೇಗವೇ ಅವರ ದೊಡ್ಡ ಶಕ್ತಿ. ಕುಲದೀಪ್ ಯಾದವ್ ಸ್ಪಿನ್ನರ್ ಆಗಿ ಅವಕಾಶ ಪಡೆಯಬಹುದು. ಅದೇ ಸಮಯದಲ್ಲಿ, ವಾಷಿಂಗ್ಟನ್ ಸುಂದರ್ ಔಂಡರ್ಗೆ ಸ್ಥಾನ ಪಡೆಯಬಹುದು.

ಮೂರನೇ ODIಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI:

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.

ಇದನ್ನೂ ಓದಿ : Shubman Gill Net Worth: 23 ವರ್ಷಕ್ಕೆ ಕೋಟ್ಯಾಧಿಪತಿಯಾದ ಶುಭ್ಮನ್: ರನ್ ಜೊತೆ ಏರುತ್ತಲೇ ಇದೆ ಗಿಲ್ ವಾರ್ಷಿಕ ಆದಾಯ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News