Health Tips: ಆರೋಗ್ಯ ತಜ್ಞರ ಪ್ರಕಾರ, ಶೀತ-ನೆಗಡಿ-ಕೆಮ್ಮು ಇರುವ ಸಂದರ್ಭದಲ್ಲಿ ಕೆಲವು ಹಣ್ಣುಗಳ ಸೇವನೆಯನ್ನು ತಪ್ಪಿಸುವುದು ಒಳ್ಳೆಯದು.
Health Tips: ಆರೋಗ್ಯ ತಜ್ಞರ ಪ್ರಕಾರ, ಶೀತ-ನೆಗಡಿ-ಕೆಮ್ಮು ಇರುವ ಸಂದರ್ಭದಲ್ಲಿ ಕೆಲವು ಹಣ್ಣುಗಳ ಸೇವನೆಯನ್ನು ತಪ್ಪಿಸುವುದು ಒಳ್ಳೆಯದು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಮಳೆಗಾಲ, ಚಳಿಗಾಲದಲ್ಲಿ ಸಾಮಾನ್ಯವಾಗಿ ಕಾಡುವ ಆರೋಗ್ಯ ಸಮಸ್ಯೆಗಳೆಂದರೆ ಶೀತ-ನೆಗಡಿ-ಕೆಮ್ಮು. ಈ ಸಮಯದಲ್ಲಿ ನಾವು ಆರೋಗ್ಯದ ಬಗ್ಗೆ ಸರಿಯಾಗಿ ಕಾಳಜಿ ವಹಿಸಬೇಕು. ಇಲ್ಲದಿದ್ದರೆ, ಆರೋಗ್ಯ ಸಮಸ್ಯೆಗಳು ಉಲ್ಬಣಿಸಬಹುದು. ಆರೋಗ್ಯ ತಜ್ಞರ ಪ್ರಕಾರ, ಶೀತ-ನೆಗಡಿ-ಕೆಮ್ಮು ಇರುವ ಸಂದರ್ಭದಲ್ಲಿ ಕೆಲವು ಹಣ್ಣುಗಳ ಸೇವನೆಯನ್ನು ತಪ್ಪಿಸುವುದು ಒಳ್ಳೆಯದು. ಆ ಹಣ್ಣುಗಳು ಯಾವುವು ತಿಳಿಯೋಣ...
ಪ್ರತಿ ಋತುವಿನಲ್ಲೂ ಸುಲಭವಾಗಿ ಲಭ್ಯವಾಗುವ ಬಾಳೆಹಣ್ಣು ತಿನ್ನಲು ರುಚಿಕರ ಮಾತ್ರವಲ್ಲ. ಪೋಷಕಾಂಶಗಳ ಆಗರವೂ ಹೌದು. ಆದರೆ, ಶೀತ-ನೆಗಡಿ ಇದ್ದಾಗ ಬಾಳೆಹಣ್ಣು ಸೇವಿಸುವುದರಿಂದ ಕಫ ಹೆಚ್ಚಾಗಬಹುದು.
ನಿಂಬೆ, ಕಿತ್ತಳೆಯಂತಹ ಸಿಟ್ರಸ್ ಹಣ್ಣುಗಳಲ್ಲಿ ವಿಟಮಿನ್ ಸಿ ಸಮೃದ್ಧವಾಗಿರುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎನ್ನುವುದರಲ್ಲಿ ಅನುಮಾನವಿಲ್ಲ. ಆದರೆ, ಶೀತ ಇದ್ದಾಗ ಈ ಹಣ್ಣುಗಳ ಸೇವನೆಯು ಕೆಮ್ಮಿನ ಸಮಸ್ಯೆಯನ್ನು ಉಲ್ಬಣಿಸುತ್ತದೆ.
ಪೋಷಕಾಂಶಗಳಿಂದ ಸಮೃದ್ಧವಾಗಿರುವ ಸೀಬೆ ಹಣ್ಣು ಆರೋಗ್ಯಕ್ಕೆ ತುಂಬಾ ಲಾಭದಾಯಕ. ಆದರೆ, ಇದು ಕೆಮ್ಮಿನ ಸಮಸ್ಯೆಯನ್ನು ಹೆಚ್ಚಿಸುತ್ತದೆ.
ಶೀತ ವಾತಾವರಣದಲ್ಲಿ ಕಬ್ಬಿನ ಜ್ಯೂಸ್ ಸೇವನೆಯು ಅದರಲ್ಲೂ ಶೀತ-ನೆಗಡಿ-ಕೆಮ್ಮು ಇರುವ ಸಂದರ್ಭದಲ್ಲಿ ಕಬ್ಬು ತಿನ್ನುವುದು ಆರೋಗ್ಯಕ್ಕೆ ಹಾನಿಕಾರಕ ಎಂದು ಸಾಬೀತುಪಡಿಸಬಹುದು. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಜ್ಞಾನವನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ಪಡೆಯಿರಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.