ಸಾಹಿತಿ ಬರಗೂರು ರಾಮಚಂದ್ರಪ್ಪ ಆರೋಗ್ಯದಲ್ಲಿ ಚೇತರಿಕೆ

ಹರಿಹರದಲ್ಲಿ ಆಧುನಿಕ ಕನ್ನಡ ಸಾಹಿತ್ಯ ಸಂವೇದನೆಯ ಬಹುರೂಪಿಗಳು ವಿಷಯದ ಮೇಲೆ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಾಹಿತಿ ಬರಗೂರು ರಾಮಚಂದ್ರಪ್ಪನವರು ಕಾರ್ಯಕ್ರಮ ಮುಗಿಸಿಕೊಂಡು ಹೋಗುವ ವೇಳೆ ಏಕಾಏಕಿ  ಕುಸಿದು ಬಿದ್ದಿದ್ದರಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Written by - Zee Kannada News Desk | Last Updated : Jan 29, 2023, 08:06 PM IST
  • ವಿಚಾರ ಸಂಕಿರಣ ಮತ್ತು ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ
  • ಕಾರ್ಯಕ್ರಮ ನಂತರ ಸಭಾಂಗಣದ ಹೊರಗೆ ಪೋಸ್ಟರ್ ಬಿಡುಗಡೆ ಮಾಡಲು ಹೋಗಿದ್ದೇ
  • ಎಸ್ಸಿ ಎಸ್ಟಿ ಸ್ಪರ್ಧಾ ಪರೀಕ್ಷೆಗೆ ಪೋಸ್ಟರ್ ಬಿಡುಗಡೆ ಮಾಡಿದ್ವಿ
 ಸಾಹಿತಿ ಬರಗೂರು ರಾಮಚಂದ್ರಪ್ಪ ಆರೋಗ್ಯದಲ್ಲಿ ಚೇತರಿಕೆ title=

ದಾವಣಗೇರಿ: ಹರಿಹರದಲ್ಲಿ ಆಧುನಿಕ ಕನ್ನಡ ಸಾಹಿತ್ಯ ಸಂವೇದನೆಯ ಬಹುರೂಪಿಗಳು ವಿಷಯದ ಮೇಲೆ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಾಹಿತಿ ಬರಗೂರು ರಾಮಚಂದ್ರಪ್ಪನವರು ಕಾರ್ಯಕ್ರಮ ಮುಗಿಸಿಕೊಂಡು ಹೋಗುವ ವೇಳೆ ಏಕಾಏಕಿ  ಕುಸಿದು ಬಿದ್ದಿದ್ದರಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತದನಂತರ ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.ಈಗ ಚೇತರಿಸಿಕೊಂಡಿರುವ ಬರಗೂರು ಅವರು ಮಾಧ್ಯಮಗಳ ಜೊತೆ ಮಾತನಾಡಿ ಈಗ ಯಾವುದೇ ತೊಂದರೆ ಇಲ್ಲ ಎಂದು ಹೇಳಿದರು.

ಇದನ್ನೂ ಓದಿ: ಸಾಹಸ ಸಿಂಹನಿಗೆ ʼಕರ್ನಾಟಕ ರತ್ನʼ ಗೌರವ ನೀಡುವ ಭರವಸೆ ನೀಡಿದ ಸಿಎಂ..!

"ವಿಚಾರ ಸಂಕಿರಣ ಮತ್ತು ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ,ಕಾರ್ಯಕ್ರಮ ನಂತರ ಸಭಾಂಗಣದ ಹೊರಗೆ ಪೋಸ್ಟರ್ ಬಿಡುಗಡೆ ಮಾಡಲು ಹೋಗಿದ್ದೇ.ಎಸ್ಸಿ ಎಸ್ಟಿ ಸ್ಪರ್ಧಾ ಪರೀಕ್ಷೆಗೆ ಪೋಸ್ಟರ್ ಬಿಡುಗಡೆ ಮಾಡಿದ್ವಿ.ಆಗ ತಲೆ ಸುತ್ತು ಬಂದ ಅನುಭವ ಆಯಿತು, ತಕ್ಷಣ ಕಾರಲ್ಲಿ ಕುಳಿತುಕೊಂಡೆ.ನಂತರ ಸ್ನೇಹಿತರು ಸ್ಥಳಿಯ ಆಸ್ಪತ್ರೆಗೆ ಕರೆದೊಯ್ದರು.ಕೆಲ ನಿಮಿಷಗಳ ಕಾಲ ನನಗೆ ಪ್ರಜ್ಞೆ ಇರಲಿಲ್ಲ.ನಗೆ ಬಿಪಿ, ಶುಗರ್ ಇಲ್ಲ, ಆದರೆ ಇದೆಲ್ಲ ಆಗಿರುವ ಹಿನ್ನಲೆ ಇಸಿಜಿ ಬಿಪಿ ಶುಗರ್ ಟೆಸ್ಟ್ ಮಾಡಿದ್ರು.ಹೆಚ್ಚು ಒತ್ತಡದಿಂದ ಈ ರೀತಿಯಾಗುತ್ತದೆ ಎಂದು ಹೇಳುತ್ತಾರೆ.ಡ್ರೀಪ್ಸ್ ಹಾಕಿದ್ರು ವಿಶ್ರಾಂತಿ ಪಡೆದು ಈಗ ಡಿಸ್ಚಾರ್ಚ್ ಆಗಿದ್ದೇನೆ.ಡಿಸ್ಚಾರ್ಜ್ ಆಗುವ ಮುನ್ನವೂ ಮತ್ತೊಮ್ಮೆ ತಪಾಸಣೆ ನಡೆಸಿದರು.ಅ ಕ್ಷಣದಲ್ಲಿ ಸ್ನೇಹಿತರಲ್ಲಿ ಆತಂಕ ಹುಟ್ಟಿಸಿದ್ದು ನಿಜ.ಕಾಳಜಿ ವಹಿಸಿದ ಸ್ನೇಹಿತರಿಗೂ ಮಾಧ್ಯಮ ಮಿತ್ರರಿಗೂ ಧನ್ಯವಾದಗಳು. ನನಗೆ ವೈದ್ಯರು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: IAF Fighter Jets Crash : ಯುದ್ದ ವಿಮಾನ ಅಪಘಾತದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹುತಾತ್ಮ!

ಇನ್ನೂ ಮುಂದುವರೆದು ಮಾತನಾಡಿ ಬೆಂಗಳೂರಿಗೆ ಹೋದ ಮೇಲೆ ಮತ್ತೊಮ್ಮೆ ಆರೋಗ್ಯ ತಪಾಸಣೆ ಮಾಡಿಸುತ್ತೇವೆ ವೈದ್ಯರು ವಿಶ್ರಾಂತಿ ಬೇಕು ಎಂದು ಹೇಳಿದ್ದಾರೆ ಎಂದು ಅವರು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

.

 

 

 

Trending News