Dangerous Fruits For Diabetics: ವೈದ್ಯರ ಪ್ರಕಾರ, ಡಯಾಬಿಟಿಸ್ ರೋಗಿಗಳು ಕೆಲವು ಹಣ್ಣುಗಳನ್ನು ಯಾವುದೇ ಕಾರಣಕ್ಕೂ ತಿನ್ನಲೇಬಾರದು. ಆ ಹಣ್ಣುಗಳು ಯಾವುವು ತಿಳಿಯೋಣ...
Dangerous Fruits For Diabetics: ಮಧುಮೇಹ ರೋಗಿಗಳು ತಮ್ಮ ಆಹಾರದ ಬಗ್ಗೆ ವಿಶೇಷ ಗಮನಹರಿಸಬೇಕು. ಇಲ್ಲದಿದ್ದರೆ, ಬ್ಲಡ್ ಶುಗರ್ ಲೆವೆಲ್ ಹೆಚ್ಚಾಗಿ ಆರೋಗ್ಯ ಸಮಸ್ಯೆಗಳು ಉಲ್ಬಣಿಸಬಹುದು. ವೈದ್ಯರ ಪ್ರಕಾರ, ಡಯಾಬಿಟಿಸ್ ರೋಗಿಗಳು ಕೆಲವು ಹಣ್ಣುಗಳನ್ನು ಯಾವುದೇ ಕಾರಣಕ್ಕೂ ತಿನ್ನಲೇಬಾರದು. ಆ ಹಣ್ಣುಗಳು ಯಾವುವು ತಿಳಿಯೋಣ...
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಹಣ್ಣುಗಳ ರಾಜ ಮಾವಿನ ಹಣ್ಣಿನ ಹೆಸರೇ ಬಾಯಿಯಲ್ಲಿ ನೀರೂರುವಂತೆ ಮಾಡುತ್ತದೆ. ಆದರೆ, ಡಯಾಬಿಟಿಸ್ ರೋಗಿಗಳಿಗೆ ಮಾವಿನ ಹಣ್ಣನ್ನು ಸೇವಿಸದಂತೆ ವೈದ್ಯರು ಸಲಹೆ ನೀಡುತ್ತಾರೆ.
ಕಾರ್ಬೋಹೈಡ್ರೇಟ್ಗಳಲ್ಲಿ ಸಮೃದ್ಧವಾಗಿರುವ ಬಾಳೆಹಣ್ಣನ್ನು ಡಯಾಬಿಟಿಸ್ ರೋಗಿಗಳಿಗೆ ಅಪಾಯಕಾರಿ ಎಂದು ಹೇಳಲಾಗುತ್ತದೆ.
ದ್ರಾಕ್ಷಿ ಸೇವನೆಯಿಂದ ಡಯಾಬಿಟಿಸ್ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗಬಹುದು. ಹಾಗಾಗಿ, ಮಧುಮೇಹಿಗಳಿಗೆ ದ್ರಾಕ್ಷಿ ಹಣ್ಣನ್ನು ತಿನ್ನದಂತೆ ಸಲಹೆ ನೀಡಲಾಗುತ್ತದೆ.
ಲಿಚ್ಚಿ ಹಣ್ಣಿನಲ್ಲಿ ನೈಸರ್ಗಿಕ ಸಕ್ಕರೆ ಮಾತ್ರವಲ್ಲ, ಇದು ಹೆಚ್ಚಿನ ಗ್ಲೈಸೆಮಿಕ್ ಇಂಡೆಕ್ಸ್ ಅನ್ನು ಹೊಂದಿರುತ್ತದೆ. ಹಾಗಾಗ, ಮಧುಮೇಹಿಗಳು ಈ ಹಣ್ಣಿನಿಂದ ದೂರ ಉಳಿಯುವುದು ಒಳಿತು.
ಅನಾನಸ್ ಅಧಿಕ ಕಾರ್ಬೋಹೈಡ್ರೇಟ್ಗಳಿಂದ ಸಮೃದ್ಧವಾಗಿರುವ ಹಣ್ಣು. ಇದರಲ್ಲಿ ನೈಸರ್ಗಿಕ ಸಕ್ಕರೆಯೂ ಹೆಚ್ಚಾಗಿರುವುದರಿಂದ ಮಧುಮೇಹಿಗಳು ಯಾವುದೇ ಕಾರಣಕ್ಕೂ ಅನಾನಸ್ ಹಣ್ಣನ್ನು ತಿನ್ನಬಾರದು ಎಂದು ಹೇಳಲಾಗುತ್ತದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಜ್ಞಾನವನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ಪಡೆಯಿರಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.