Amarinder Singh Wife : ಪಟಿಯಾಲ ಸಂಸದೆ ಹಾಗೂ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪತ್ನಿ ಪ್ರಣೀತ್ ಕೌರ್ ಅವರನ್ನು ಕಾಂಗ್ರೆಸ್ ನಿಂದ ಅಮಾನತುಗೊಳಿಸಲಾಗಿದೆ.
ಪ್ರಣೀತ್ ಕೌರ್ ತನ್ನ ವಾದವನ್ನು ಮಂಡಿಸಲು ಮೂರು ದಿನಗಳ ಕಾಲಾವಕಾಶ ನೀಡಲಾಗಿದೆ. ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಡಿಂಗ್ ಅವರ ದೂರಿನ ಮೇರೆಗೆ ಕಾಂಗ್ರೆಸ್ ಈ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ.
ಪ್ರಣೀತ್ ಕೌರ್ ಪಟಿಯಾಲ ಸಂಸದೆಯಾಗಿದ್ದಾರೆ. ಅವರ ಪತಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಆದರೆ ಪ್ರಣೀತ್ ಕೌರ್ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.
ಇದನ್ನೂ ಓದಿ : Perfume Bomb : ಜಮ್ಮು ಕಾಶ್ಮೀರದಲ್ಲಿ ಮೊದಲ ಬಾರಿಗೆ 'ಪರ್ಫ್ಯೂಮ್ ಬಾಂಬ್' ಪತ್ತೆ!
ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಡಿಂಗ್ ಅವರ ದೂರಿನ ನಂತರ ಕಾಂಗ್ರೆಸ್ ಈ ಕ್ರಮ ಕೈಗೊಂಡಿದೆ. ವಾಸ್ತವವಾಗಿ, ಪ್ರಣೀತ್ ಕೌರ್ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ ಎಂದು ರಾಜಾ ವಂದಿಗ್ ಆರೋಪಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಮುಂದೆ ಇತರ ನಾಯಕರು ಇದೇ ರೀತಿಯ ಅಭಿಪ್ರಾಯಗಳನ್ನು ಮಂಡಿಸಿದರು. ಇದಾದ ನಂತರ ದೂರನ್ನು ಶಿಸ್ತು ಸಮಿತಿಗೆ ಕಳುಹಿಸಲಾಗಿತ್ತು. ತನಿಖೆ ಬಳಿಕ ಪ್ರಣೀತ್ ಕೌರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.