IND vs AUS: ಮೊದಲ ಟೆಸ್ಟ್ ಪಂದ್ಯದಲ್ಲಿ ಈ ಆಟಗಾರರಿಗೆ ಅವಕಾಶ ನೀಡಿದ ನಾಯಕ ರೋಹಿತ್ ಶರ್ಮಾ

IND vs AUS:  ನಾಗ್ಪುರದಲ್ಲಿ ನಡೆಯುತ್ತಿರುವ ಈ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಆಸ್ಟ್ರೇಲಿಯ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಓಪನರ್ ಆಗಿ ಕೆಎಲ್ ರಾಹುಲ್ ಜೊತೆಗೆ  ನಾಯಕ ರೋಹಿತ್ ಶರ್ಮಾ ಫೀಲ್ಡಿಗೆ ಇಳಿಯಲಿದ್ದಾರೆ.  

Written by - Ranjitha R K | Last Updated : Feb 9, 2023, 09:41 AM IST
  • ನಾಗ್ಪುರದ VCA ಸ್ಟೇಡಿಯಂನಲ್ಲಿ ಸರಣಿಯ ಮೊದಲ ಟೆಸ್ಟ್ ಪಂದ್ಯ
  • ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್
  • ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಲಿರುವ ಆಟಗಾರರು
IND vs AUS: ಮೊದಲ ಟೆಸ್ಟ್ ಪಂದ್ಯದಲ್ಲಿ ಈ ಆಟಗಾರರಿಗೆ ಅವಕಾಶ ನೀಡಿದ ನಾಯಕ ರೋಹಿತ್ ಶರ್ಮಾ  title=

IND vs AUS: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಹೈ-ಪ್ರೊಫೈಲ್ ಬಾರ್ಡರ್ ಗವಾಸ್ಕರ್ ಸರಣಿಯ ಮೊದಲ ಟೆಸ್ಟ್ ಪಂದ್ಯ ನಾಗ್ಪುರದ VCA ಸ್ಟೇಡಿಯಂನಲ್ಲಿ ನಡೆಯುತ್ತಿದೆ. ನಾಗ್ಪುರದಲ್ಲಿ ನಡೆಯುತ್ತಿರುವ ಈ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.  ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ತಮ್ಮ ಅತ್ಯುತ್ತಮ ಆಟಗಾರರನ್ನು ಕಣಕ್ಕಿಳಿಸಿದ್ದಾರೆ. 

ಟೀಮ್ ಇಂಡಿಯಾ ಓಪನರ್ :
ಆಸ್ಟ್ರೇಲಿಯ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಓಪನರ್ ಆಗಿ ಕೆಎಲ್ ರಾಹುಲ್ ಜೊತೆಗೆ  ನಾಯಕ ರೋಹಿತ್ ಶರ್ಮಾ ಫೀಲ್ಡಿಗೆ ಇಳಿಯಲಿದ್ದಾರೆ.  ರೋಹಿತ್ ಶರ್ಮಾ ಭಾರತದ ನೆಲದಲ್ಲಿ ಅತ್ಯಂತ ಅಪಾಯಕಾರಿಯಾಗಬಲ್ಲರು ಎನ್ನುವುದನ್ನು ಈಗಾಗಲೇ ಸಾಬೀತುಪಡಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಸಿಡಿಸುವ ಶಕ್ತಿಯೂ ಅವರಿಗಿದೆ. 

ಇದನ್ನೂ ಓದಿ : IND vs AUS : ಮೊದಲ ಟೆಸ್ಟ್ ಪಂದ್ಯನಿಂದ ಶುಭಮನ್ - ಸೂರ್ಯಕುಮಾರ್ ಔಟ್? ಕ್ಯಾಪ್ಟನ್'ನಿಂದ ಮಹತ್ವದ ಮಾಹಿತಿ

ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕ :
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ 3ನೇ ಕ್ರಮಾಂಕದಲ್ಲಿ  ಬಂದರೆ, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಸೂರ್ಯಕುಮಾರ್ ಯಾದವ್ 5ನೇ ಕ್ರಮಾಂಕದಲ್ಲಿ  ಅಂಗಣಕ್ಕೆ ಇಳಿಯಲಿದ್ದಾರೆ. ಶುಭಮನ್ ಗಿಲ್ ಮತ್ತು ಇಶಾನ್ ಕಿಶನ್ ಅವರನ್ನು XI ನಿಂದ ಕೈಬಿಡಲಾಗಿದೆ. ಆಲ್ ರೌಂಡರ್ ರವೀಂದ್ರ ಜಡೇಜಾ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ವಿಕೆಟ್ ಕೀಪರ್ ಕೆಎಸ್ ಭರತ್ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. 

 ಅಲ್ ರೌಂಡರ್ ಮತ್ತು ಸ್ಪಿನ್ನರ್ :
ಆಸ್ಟ್ರೇಲಿಯ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನಾಗ್ಪುರದ ಪಿಚ್  ಸ್ಪಿನ್ನರ್‌ಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೆರವಾಗಲಿದೆ. ಹಾಗಾಗಿ ನಾಯಕ ರೋಹಿತ್ ಶರ್ಮಾ ಅಕ್ಷರ್ ಪಟೇಲ್ ಮತ್ತು ರವಿಚಂದ್ರನ್ ಅಶ್ವಿನ್ ಇಬ್ಬರನ್ನೂ  ಪ್ಲೇಯಿಂಗ್  XIನಲ್ಲಿ ಅವಕಾಶ ನೀಡಿದ್ದಾರೆ. ಅಕ್ಷರ್ ಪಟೇಲ್ ಮತ್ತು ರವಿಚಂದ್ರನ್ ಅಶ್ವಿನ್  ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಟೀಂ ಇಂಡಿಯಾವನ್ನು ಬಲಿಷ್ಠಗೊಳಿಸಲಿದ್ದಾರೆ. ಸ್ಪಿನ್ನರ್ ಕುಲದೀಪ್ ಯಾದವ್ ಅವರನ್ನು ಆಡುವ XI ನಿಂದ  ಹೊರಗಿಡಲಾಗಿದೆ. 

ಇದನ್ನೂ ಓದಿ : IND vs AUS : ಆಸ್ಟ್ರೇಲಿಯಾ ಮೇಲೆ ಈ ಬ್ರಹ್ಮಾಸ್ತ್ರ ಪ್ರಯೋಗಿಸಲು ರೆಡಿಯಾದ ಟೀಂ ಇಂಡಿಯಾ!
 
ಫಾಸ್ಟ್ ಬೌಲರ್ : 
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಪ್ಲೇಯಿಂಗ್  XIನಲ್ಲಿ ವೇಗದ ಬೌಲರ್‌ಗಳಾಗಿ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಅವರೂ ಸ್ಥಾನ ಪಡೆದುಕೊಂಡಿದ್ದಾರೆ.  ಉಮೇಶ್ ಯಾದವ್ ಮತ್ತು ಜಯದೇವ್ ಉನದ್ಕತ್ ಅವರನ್ನು ನಾಯಕ ರೋಹಿತ್ ಶರ್ಮಾ ಪ್ಲೇಯಿಂಗ್  XI ನಿಂದ ಕೈಬಿಟ್ಟಿದ್ದಾರೆ.

ಭಾರತದ ಮೊದಲ ಟೆಸ್ಟ್ ಪಂದ್ಯಕ್ಕೆ ಪ್ಲೇಯಿಂಗ್  XI : 
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕೆಎಸ್ ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News