ಮರುಮೌಲ್ಯಮಾಪನದ ವೇಳೆ ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣನೆ: ಮಾರ್ಚ್ ನಲ್ಲಿಯೇ ಹೊಸ ನಿಯಮ ಅನ್ವಯ

Education Minister BC Nagesh: ಹಾಲಿ ಇರುವ ನಿಯಮದ ಪ್ರಕಾರ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗೆ ಪತ್ರಿಕೆಯ ಒಟ್ಟು ಅಂಕದ ಶೇ.6ರಷ್ಟು ಅಂಕ ಅಥವಾ ಅದಕ್ಕಿಂತ ಹೆಚ್ಚು ಅಂಕಗಳು ಬಂದಲ್ಲಿ ಮಾತ್ರ ಪರಿಗಣಿಸಲಾಗುತ್ತಿತ್ತು. ಶೇ.6ಕ್ಕಿಂತ ಕಡಿಮೆ ಅಂಕಗಳು ಬಂದಲ್ಲಿ ಪರಿಗಣಿಸುತ್ತಿರಲಿಲ್ಲ.

Written by - Manjunath Hosahalli | Edited by - Bhavishya Shetty | Last Updated : Feb 9, 2023, 11:17 PM IST
    • ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ
    • ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧಾರ
    • 2023ರ ಮಾರ್ಚ್‌ನಲ್ಲಿ ನಡೆಯುವ 'ವಾರ್ಷಿಕ ಪರೀಕ್ಷೆ'ಯಿಂದ ಈ ಹೊಸ ನಿಯಮ ಅನ್ವಯ
ಮರುಮೌಲ್ಯಮಾಪನದ ವೇಳೆ ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣನೆ: ಮಾರ್ಚ್ ನಲ್ಲಿಯೇ ಹೊಸ ನಿಯಮ ಅನ್ವಯ title=
Second PUC Main Examination

ಬೆಂಗಳೂರು: ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು  ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಇದನ್ನೂ ಓದಿ: ಚೀನಾ & ಅದಾನಿ ಪದಗಳು ಮೋದಿ ಬಾಯಿಯಿಂದ ಹೊರಬರಲು ಭಯಪಡುತ್ತಿರುವುದೇಕೆ?: ಕಾಂಗ್ರೆಸ್

2023ರ ಮಾರ್ಚ್‌ನಲ್ಲಿ ನಡೆಯುವ 'ವಾರ್ಷಿಕ ಪರೀಕ್ಷೆ'ಯಿಂದ ಈ ಹೊಸ ನಿಯಮ ಅನ್ವಯವಾಗಲಿದೆ.

ಹಾಲಿ ಇರುವ ನಿಯಮದ ಪ್ರಕಾರ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗೆ ಪತ್ರಿಕೆಯ ಒಟ್ಟು ಅಂಕದ ಶೇ.6ರಷ್ಟು ಅಂಕ ಅಥವಾ ಅದಕ್ಕಿಂತ ಹೆಚ್ಚು ಅಂಕಗಳು ಬಂದಲ್ಲಿ ಮಾತ್ರ ಪರಿಗಣಿಸಲಾಗುತ್ತಿತ್ತು. ಶೇ.6ಕ್ಕಿಂತ ಕಡಿಮೆ ಅಂಕಗಳು ಬಂದಲ್ಲಿ ಪರಿಗಣಿಸುತ್ತಿರಲಿಲ್ಲ.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಅಂಕವು ಮುಖ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ‘ಒಂದು ಅಂಕ’ವನ್ನೂ ಪರಿಗಣಿಸುವ ‘ವಿದ್ಯಾರ್ಥಿ ಸ್ನೇಹಿ’ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ & ಜನರ ಆಶೀರ್ವಾದದಿಂದ ಸಿಎಂ ಆಗಿದ್ದೇನೆ: ಬಿಎಸ್‍ವೈ ಹೆಸರು ಮರೆತ ಬೊಮ್ಮಾಯಿ

ಈ ಸಂಬಂಧ ಶೀಘ್ರದಲ್ಲೇ ‘ಕರ್ನಾಟಕ ಪದವಿಪೂರ್ವ ಶಿಕ್ಷಣ ರಾಜ್ಯ ಮಟ್ಟದ ಪಬ್ಲಿಕ್ ಪರೀಕ್ಷೆ ನಿಯಮಗಳು-1997’ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News