ಬೆಂಗಳೂರು : ಜ್ಯೋತಿಷ್ಯದಲ್ಲಿ, ಶುಕ್ರನನ್ನು ಕಲೆ, ಸಂಗೀತ ಮತ್ತು ಐಷಾರಾಮಿ ಅಂಶವೆಂದು ಕರೆಯಲಾಗುತ್ತದೆ. ಫೆಬ್ರವರಿ 15 ರಂದು ಶುಕ್ರನು ಮೀನ ರಾಶಿಯನ್ನು ಪ್ರವೇಶಿಸಲಿದ್ದಾನೆ. ಶುಕ್ರ ವೃಷಭ ಮತ್ತು ತುಲಾ ರಾಶಿಯ ಅಧಿಪತಿ. ಮೀನ ರಾಶಿಯನ್ನು ಪ್ರವೇಶಿಸುವ ಶುಕ್ರ ಈ ರಾಶಿಯವರ ಜೀವನವನ್ನು ಬೆಳಗಲಿದ್ದಾನೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಮೀನರಾಶಿಯಲ್ಲಿಯೇ ಶುಕ್ರ ಸಂಕ್ರಮಣ ನಡೆಯಲಿದೆ. ಈ ಸಮಯದಲ್ಲಿ ಜನರು ನಿಮ್ಮತ್ತ ಹೆಚ್ಚು ಹೆಚ್ಚು ಆಕರ್ಷಿತರಾಗುತ್ತಾರೆ. ನಿಮ್ಮ ಮಾತಿನ ಮೂಲಕವೇ ಎದುರಿಗಿರುವವರನ್ನು ನಿಯಂತ್ರಿಸುವುದು ಸಾಧ್ಯವಾಗುತ್ತದೆ. ಜೀವನ ಸಂಗಾತಿಯೊಂದಿಗಿನ ಸಂಬಂಧವು ಸುಮಧುರವಾಗಿರುತ್ತದೆ. ದಾಂಪತ್ಯ ಜೀವನದಲ್ಲಿ ಸಂತೋಷ ಇರುತ್ತದೆ. ತಮ್ಮ ವ್ಯವಹಾರವನ್ನು ವಿಸ್ತರಿಸುವ ಆಲೋಚನೆಯಲ್ಲಿರುವವರು, ಯಶಸ್ಸು ಪಡೆಯಲಿದ್ದಾರೆ.
ಕನ್ಯಾ ರಾಶಿಯ ಏಳನೇ ಮನೆಯಲ್ಲಿ ಶುಕ್ರನ ಸಂಕ್ರಮಣ ನಡೆಯಲಿದೆ. ಇದು ಪ್ರೀತಿಯ ಜೀವನದಲ್ಲಿ ಸಂತೋಷವನ್ನು ಹೆಚ್ಚಿಸುತ್ತದೆ. ಜೀವನ ಸಂಗಾತಿಯೊಂದಿಗಿನ ಸಂಬಂಧವೂ ಸುಧಾರಿಸುತ್ತದೆ. ಕೆಲಸದ ಸ್ಥಳದಲ್ಲಿ ಪರಿಸ್ಥಿತಿಗಳು ಸುಧಾರಿಸುತ್ತವೆ. ಜೀವನ ಸಂಗಾತಿಯ ಹೆಸರಿನಲ್ಲಿ ವ್ಯಾಪಾರ ಮಾಡಿದರೆ ಸಾಕಷ್ಟು ಯಶಸ್ಸು ಸಿಗುತ್ತದೆ. ಬಡ್ತಿಯ ಅವಕಾಶಗಳೂ ಸೃಷ್ಟಿಯಾಗುತ್ತಿವೆ.
ಶುಕ್ರನು ಈ ರಾಶಿಚಕ್ರದ ಎಂಟನೇ ಮನೆಯಲ್ಲಿ ಸಂಕ್ರಮಿಸಲಿದ್ದಾನೆ. ಈ ಸಮಯದಲ್ಲಿ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಈ ಅವಧಿಯಲ್ಲಿ, ಅಪಾರ ಹಣವನ್ನು ಗಳಿಸುವುದು ಸಾಧ್ಯವಾಗುತ್ತದೆ. ಈ ಹಿಂದೆ ಯಾವುದೇ ಹೂಡಿಕೆ ಮಾಡಿದ್ದರೆ, ಅದರ ಲಾಭವೂ ಸಿಗುತ್ತದೆ. ಈ ಅವಧಿಯು ಉದ್ಯಮಿಗಳಿಗೆ ಬಹಳ ಪ್ರಯೋಜನಕಾರಿಯಾಗಿರಲಿದೆ.
ಶುಕ್ರನು ಈ ರಾಶಿಚಕ್ರದ ಒಂಭತ್ತನೇ ಮನೆಗೆ ಪ್ರವೇಶಿಸುತ್ತಾನೆ. ಇದರಿಂದ ನಿಮ್ಮ ಅದೃಷ್ಟ ಹೆಚ್ಚಾಗುತ್ತದೆ. ಕಷ್ಟಗಳಿಂದ ಮುಕ್ತರಾಗುತ್ತೀರಿ. ಹಣದ ಸಮಸ್ಯೆಯಿಂದ ನಿಂತು ಹೋಗಿದ್ದ ಕೆಲಸಗಳನ್ನು ಮತ್ತೆ ಆರಂಭಿಸುವುದು ಸಾಧ್ಯವಾಗುತ್ತದೆ. ಈ ಸಮಯದಲ್ಲಿ ಏನೇ ಕೆಲಸ ಮಾಡಿದರೂ ಅದರಲ್ಲಿ ಯಶಸ್ಸು ಸಾಧಿಸುತ್ತೀರಿ. ಸ್ನೇಹಿತರೊಂದಿಗೆ ಉತ್ತಮ ಸಮಯವನ್ನು ಕಳೆಯುವುದು ಸಾಧ್ಯವಾಗುತ್ತದೆ.
ಶುಕ್ರ ಸಂಕ್ರಮದಿಂದ ವೃಷಭ ರಾಶಿಯವರ ಜೀವನ ಬೆಳಗಲಿದೆ. ಹೊಸ ವಾಹನ ಖರೀದಿಗೆ ಅವಕಾಶ ಸಿಗಲಿದೆ. ಉದ್ಯೋಗಿಗಳ ವೇತನದಲ್ಲಿ ಹೆಚ್ಚಳವಾಗಬಹುದು. ಮಾಡುವ ಎಲ್ಲಾ ಕೆಲಸಗಳೂ ಪೂರ್ಣಗೊಳ್ಳಲಿವೆ. ಪ್ರೇಮ ಜೀವನವೂ ಪ್ರಣಯದಿಂದ ಕೂಡಿರುತ್ತದೆ. ( ಸೂಚನೆ : ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)