ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

ನವಲಗುಂದ ತಾಲೂಕಿನಲ್ಲಿ ಹೆಬ್ಬಾಳ ಮತ್ತು ನಲವಡಿ ಗ್ರಾಮ ಪಂಚಾಯತಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ಹುದ್ದೆಗಳು ಖಾಲಿ ಇದ್ದು, ಅರ್ಹತೆ ಹೊಂದಿರುವ ವಿಕಲಚೇತನರು ನಿಗದಿತ ಅರ್ಜಿ ನಮೂನೆಗಳನ್ನು ತಾಲೂಕಾ ಪಂಚಾಯತಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂಆರ್‍ಡಬ್ಲ್ಯೂ) ಇವರಿಂದ ಪಡೆದು ಭರ್ತಿ ಮಾಡಿ ಫೆ.24ರೊಳಗೆ ಸಲ್ಲಿಸಬೇಕು. 

Written by - Zee Kannada News Desk | Last Updated : Feb 11, 2023, 10:49 PM IST
  • ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂಆರ್‍ಡಬ್ಲ್ಯೂ) ಇವರಿಂದ ಪಡೆದು ಭರ್ತಿ ಮಾಡಿ ಫೆ.24ರೊಳಗೆ ಸಲ್ಲಿಸಬೇಕು
  • 0836-2744474 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
  • ಇವರಿಂದ ಪಡೆದು ಭರ್ತಿ ಮಾಡಿ ಫೆ.24ರೊಳಗೆ ಸಲ್ಲಿಸಬೇಕು.
ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ title=

ಧಾರವಾಡ: ರಾಷ್ಟ್ರೀಯ ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆ ಅಡಿಯಲ್ಲಿ ಇಲಾಖೆ ಮತ್ತು ಸರ್ಕಾರದಿಂದ ದೊರೆಯಲಾಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಲು ಹಾಗೂ ದೊರಕಿಸಿಕೊಡಲು ಪ್ರತಿ ಗ್ರಾಮ ಪಂಚಾಯತಿಗೆ ಒಬ್ಬರು ವಿಕಲಚೇತನರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತ (ವಿ.ಆರ್.ಡಬ್ಲ್ಯೂ) ರೆಂದು ಮಾಸಿಕ ರೂ.9,000/- ಗೌರವಧನ ಆಧಾರ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: “ಮಂಡ್ಯಕ್ಕೆ ದೇಶ ಬದಲಾವಣೆ ಮಾಡುವ ಶಕ್ತಿ ಇದೆ”

ನವಲಗುಂದ ತಾಲೂಕಿನಲ್ಲಿ ಹೆಬ್ಬಾಳ ಮತ್ತು ನಲವಡಿ ಗ್ರಾಮ ಪಂಚಾಯತಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ಹುದ್ದೆಗಳು ಖಾಲಿ ಇದ್ದು, ಅರ್ಹತೆ ಹೊಂದಿರುವ ವಿಕಲಚೇತನರು ನಿಗದಿತ ಅರ್ಜಿ ನಮೂನೆಗಳನ್ನು ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂಆರ್‍ಡಬ್ಲ್ಯೂ) ಇವರಿಂದ ಪಡೆದು ಭರ್ತಿ ಮಾಡಿ ಫೆ.24ರೊಳಗೆ ಸಲ್ಲಿಸಬೇಕು.

ಇದನ್ನೂ ಓದಿ : ಜನವರಿ ತಿಂಗಳಲ್ಲಿ 6,085 ಕೋಟಿ ರೂ. GST ಸಂಗ್ರಹ: ಸಿಎಂ ಬಸವರಾಜ ಬೊಮ್ಮಾಯಿ

ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತಗಳಲ್ಲಿಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ)ಗಳಾದ ನವಲಗುಂದ-9663271200 ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಧಾರವಾಡರವರ ಕಛೇರಿ ದೂರವಾಣಿ ಸಂಖ್ಯೆ:0836-2744474 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News