Women's T20 World Cup Group B Match: ವಿಶ್ವಕಪ್ ಪಂದ್ಯದಲ್ಲಿ ಪಾಕ್ ವಿರುದ್ಧ ಗೆದ್ದು ಬೀಗಿದ ಟೀಂ ಇಂಡಿಯಾ ಮಹಿಳಾಮಣಿಗಳು

Women's T20 World Cup Group B Match: ಮೊದಲು ಬ್ಯಾಟಿಂಗ್ ಮಾಡಿದ ಪಾಕ್ ತಂಡದ ನಾಯಕು ಬಿಸ್ಮಾ ಮರೂಫ್ ಅವರ ಅದ್ಭುತ ಇನ್ನಿಂಗ್ಸ್‌ನಿಂದಾಗಿ ಪಾಕಿಸ್ತಾನ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 149 ರನ್ ಗಳಿಸಿತು. ಮರೂಫ್ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಬಂದಿದ್ದು, 55 ಎಸೆತಗಳಲ್ಲಿ 68 ರನ್ ಗಳಿಸಿ ಅಜೇಯರಾಗಿ ಮರಳಿದರು. ಹರ್ಮನ್‌ಪ್ರೀತ್ ಕೌರ್ ಈ ಟೂರ್ನಿಯಲ್ಲಿ ಭಾರತ ಮಹಿಳಾ ತಂಡದ ನಾಯಕಿಯಾಗಿದ್ದಾರೆ.

Written by - Bhavishya Shetty | Last Updated : Feb 12, 2023, 09:41 PM IST
    • ಮಹಿಳೆಯರ T20 ವಿಶ್ವಕಪ್‌ ನ ಗುಂಪು-ಬಿ ಪಂದ್ಯ
    • ಗುಂಪು-ಬಿ ಪಂದ್ಯವು ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದಿದೆ
    • ಈ ಪಂದ್ಯದಲ್ಲಿ ಟೀಂ ಇಂಡಿಯಾ ಪಾಕಿಸ್ತಾನವನ್ನು ಮಣಿಸಿದೆ
Women's T20 World Cup Group B Match: ವಿಶ್ವಕಪ್ ಪಂದ್ಯದಲ್ಲಿ ಪಾಕ್ ವಿರುದ್ಧ ಗೆದ್ದು ಬೀಗಿದ ಟೀಂ ಇಂಡಿಯಾ ಮಹಿಳಾಮಣಿಗಳು title=
Women T20 World Cup

Women's T20 World Cup Group B Match: ಮಹಿಳೆಯರ T20 ವಿಶ್ವಕಪ್‌ ನ ಗುಂಪು-ಬಿ ಪಂದ್ಯವು ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಪಾಕಿಸ್ತಾನವನ್ನು ಮಣಿಸಿದೆ. ಟಾಸ್ ಗೆದ್ದಿದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಈ ವೇಳೆ ಪಾಕಿಸ್ತಾನ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 149 ರನ್ ಪೇರಿಸಿತು. ಈ ಗುರಿ ಬೆನ್ನತ್ತಿದ ಭಾರತ ತಂಡ 19 ಓವರ್ ನಲ್ಲಿ 151 ರನ್ ಕಲೆ ಹಾಕಿ ಗೆಲುವು ಸಾಧಿಸಿದೆ.

ಇದನ್ನೂ ಓದಿ: ಟೀಂ ಇಂಡಿಯಾಗೆ ‘RRR’ ಬಲ: ಸಖತ್ ವೈರಲ್ ಆಗ್ತಿರೋ ಸಚಿನ್ ತೆಂಡೂಲ್ಕರ್ ಟ್ವೀಟ್ ಹೇಳುತ್ತಿರೋದೇನು?

ಮೊದಲು ಬ್ಯಾಟಿಂಗ್ ಮಾಡಿದ ಪಾಕ್ ತಂಡದ ನಾಯಕು ಬಿಸ್ಮಾ ಮರೂಫ್ ಅವರ ಅದ್ಭುತ ಇನ್ನಿಂಗ್ಸ್‌ನಿಂದಾಗಿ ಪಾಕಿಸ್ತಾನ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 149 ರನ್ ಗಳಿಸಿತು. ಮರೂಫ್ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಬಂದಿದ್ದು, 55 ಎಸೆತಗಳಲ್ಲಿ 68 ರನ್ ಗಳಿಸಿ ಅಜೇಯರಾಗಿ ಮರಳಿದರು. ಹರ್ಮನ್‌ಪ್ರೀತ್ ಕೌರ್ ಈ ಟೂರ್ನಿಯಲ್ಲಿ ಭಾರತ ಮಹಿಳಾ ತಂಡದ ನಾಯಕಿಯಾಗಿದ್ದಾರೆ.

ಭಾರತ (ಪ್ಲೇಯಿಂಗ್-11): ಶೆಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ, ಜೆಮಿಮಾ ರಾಡ್ರಿಗಸ್, ಹರ್ಲೀನ್ ಡಿಯೋಲ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್‌ಕೀಪರ್), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ರಾಧಾ ಯಾದವ್, ರಾಜೇಶ್ವರಿ ಗಾಯಕ್ವಾಡ್ ಮತ್ತು ರೇಣುಕಾ ಠಾಕೂರ್

ಇದನ್ನೂ ಓದಿ: ‘ನನ್ನ ಮುಖ ಏನ್ ತೋರಿಸೋದು ಅಲ್ಲಿ ತೋರಿಸಿ’ ಮೈದಾನದಲ್ಲಿಯೇ ಕೋಪಗೊಂಡ Rohit Sharma ಬೈದಿದ್ದು ಯಾರಿಗೆ?

ಪಾಕಿಸ್ತಾನ (ಪ್ಲೇಯಿಂಗ್-11): ಜವೇರಿಯಾ ಖಾನ್, ಮುನೀಬಾ ಅಲಿ (ವಿಕೆಟ್ ಕೀಪರ್), ಬಿಸ್ಮಾ ಮರೂಫ್ (ನಾಯಕ), ನಿದಾ ದಾರ್, ಸಿದ್ರಾ ಅಮೀನ್, ಆಲಿಯಾ ರಿಯಾಜ್, ಆಯೇಶಾ ನಸೀಮ್, ಫಾತಿಮಾ ಸನಾ, ಐಮನ್ ಅನ್ವರ್, ನಶ್ರಾ ಸಂಧು ಮತ್ತು ಸಾದಿಯಾ ಇಕ್ಬಾಲ್

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News