ಬೆಂಗಳೂರು, ಫೆಬ್ರವರಿ 17- ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಹಿಂದಿನ ಮುಖ್ಯ ಕಾರ್ಯದರ್ಶಿ ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಲಾಗಿದ್ದು, ಇದಕ್ಕಾಗಿಯೇ ಬಜೆಟ್ ನಲ್ಲಿಯೇ 6 ಸಾವಿರ ಕೋಟಿ ರೂ.ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇದನ್ನೂ ಓದಿ: ರಾಜಧಾನಿಯಲ್ಲಿ10 ಲಕ್ಷಕ್ಕೂ ಅಧಿಕ ಡಿಜಿಟಲ್ ಮೀಟರ್ ಅಳವಡಿಕೆ : ಗ್ರಾಹಕರಿಗೆ ತಪ್ಪದ ಹೆಚ್ವಿನ ಹೊರೆ
ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಇದನ್ನೂ ಓದಿ:ಪರಿಸರ ಸ್ನೇಹಿ ವೇದಿಕೆ ಪರಿಕಲ್ಪನೆ; ವಿಲೇವಾರಿ ಮಾಡಬಹುದಾದ ರೂ.14 ಲಕ್ಷ ಮೊತ್ತದ ಪ್ಲಾಸ್ಟಿಕ್ ವಸ್ತುಗಳ ಬಳಕೆ
ಹೆಚ್ಚುವರಿ ಹಣ ಅವಶ್ಯವಿದ್ದಲ್ಲಿ ಪೂರಕ ಬಜೆಟ್ ನಲ್ಲಿ ಒದಗಿಸಲಾಗುವುದು ಎಂದು ವರದಿ ಶೀಘ್ರ ಬರಲಿದ್ದು,ಅದರನುಸಾರ ಕ್ರಮವಹಿಸಲಾಗುವುದು ಎಂದ ಮುಖ್ಯಮಂತ್ರಿಗಳು, 2023-24ನೇ ಸಾಲಿನಲ್ಲಿಯೇ ವೇತನ ಆಯೋಗದ ವರದಿಗಳನ್ನು ಅನುಷ್ಠಾನಗೊಳಿಸಲಾಗುವುದು.ಆಯೋಗ ಮಧ್ಯಂತರ ವರದಿ ನೀಡುವುದೋ ಅಥವಾ ಪೂರ್ಣ ವರದಿ ಸಲ್ಲಿಸುವುದೋ ಅದರನುಸಾರ ಸರಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ.ಇದಕ್ಕಾಗಿ ಅನುದಾನ ಮೀಸಲಿಟ್ಟಿರುವುದರಿಂದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.