“ಯಡಿಯೂರಪ್ಪನವರು ಶಿಕಾರಿಪುರದಿಂದಲೇ ಸ್ಪರ್ಧಿಸುವ ನಿರ್ಧಾರ ಕೈಗೊಂಡರೆ ಸಂತೋಷದಿಂದ ಸ್ವಾಗತಿಸುವೆ"

ಯಡಿಯೂರಪ್ಪನವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರದಿಂದಲೇ ಸ್ಪರ್ಧಿಸುವ ನಿರ್ಧಾರ ಕೈಗೊಂಡರೆ ಅದನ್ನು ಸಂತೋಷದಿಂದ ಸ್ವಾಗತಿಸುತ್ತೇನೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.

Written by - Zee Kannada News Desk | Last Updated : Feb 23, 2023, 03:51 PM IST
  • ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು
  • ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು. ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು
  • ಪರದೂಷಣೆಯಲ್ಲಿ ನಿರತರಾಗಿರುವ ಸಿ.ಟಿ.ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ಅವರು ಹೇಳಿದರು
“ಯಡಿಯೂರಪ್ಪನವರು ಶಿಕಾರಿಪುರದಿಂದಲೇ ಸ್ಪರ್ಧಿಸುವ ನಿರ್ಧಾರ ಕೈಗೊಂಡರೆ ಸಂತೋಷದಿಂದ ಸ್ವಾಗತಿಸುವೆ" title=
file photo

ಬೆಂಗಳೂರು:  ಯಡಿಯೂರಪ್ಪನವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರದಿಂದಲೇ ಸ್ಪರ್ಧಿಸುವ ನಿರ್ಧಾರ ಕೈಗೊಂಡರೆ ಅದನ್ನು ಸಂತೋಷದಿಂದ ಸ್ವಾಗತಿಸುತ್ತೇನೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನ್ನ ಮೇಲಿನ ಪ್ರೀತಿಯಿಂದ ಮುಂದಿನ ಚುನಾವಣೆಯಲ್ಲಿ ಬಾದಾಮಿಯಿಂದಲೇ ಸ್ಪರ್ಧೆ ಮಾಡುವಂತೆ ಸಲಹೆ ನೀಡಿದ್ದಾರೆ. ಅವರ ಸಲಹೆಗೆ ಧನ್ಯವಾದ.ನನ್ನ ಹಿತೈಷಿಯಂತಿರುವ ಯಡಿಯೂರಪ್ಪನವರಿಗೆ ದೇವರು ದೀರ್ಘ ಆಯಸ್ಸು, ಆರೋಗ್ಯ ಕರುಣಿಸಲಿ.

ಕಳೆದ 5 ವರ್ಷಗಳಿಂದ ಬಾದಾಮಿಯ ಶಾಸಕನಾಗಿ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು,ಕ್ಷೇತ್ರದ ಜನರ ಕಷ್ಟ ಸುಖಕ್ಕೆ ನೀಡಿದ ಸ್ಪಂದನೆಯೇ ಅಲ್ಲಿ ನನ್ನನ್ನು ಗರಿಷ್ಠ ಮತಗಳ ಅಂತರದಿಂದ ಗೆಲ್ಲಿಸಲಿದೆ ಎಂಬ ಪೂರ್ಣ ಭರವಸೆ ನನಗಿದೆ.

ಇದನ್ನೂ ಓದಿ: Crime News: ಬಡ್ಡಿ ಹಣ ಕೊಡಲಿಲ್ಲವೆಂದು ರಸ್ತೆಯಲ್ಲಿಯೇ ವ್ಯಕ್ತಿಗೆ ಥಳಿತ!

ಸೋಲುವ ಭಯದಿಂದ ಬಾದಾಮಿಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ ಎಂಬುದು ಕೆಲವರ ಭ್ರಮೆ ಅಷ್ಟೆ.ಮತ್ತೆ ಬಾದಾಮಿಯಿಂದಲೇ ಸ್ಪರ್ಧಿಸಿ ಶಾಸಕನಾದರೆ ವಾರಕ್ಕೊಮ್ಮೆಯಾದರೂ ಕ್ಷೇತ್ರಕ್ಕೆ ಭೇಟಿಕೊಟ್ಟು, ಜನರ ಕಷ್ಟದಲ್ಲಿ ಭಾಗಿಯಾಗಬೇಕು, ಅಭಿವೃದ್ಧಿ ಕಾರ್ಯಗಳ ಉಸ್ತುವಾರಿ ನೋಡಿಕೊಳ್ಳಬೇಕು. ಆದರೆ ವಯಸ್ಸು 75 ದಾಟಿದೆ, ದೂರದ ಪ್ರಯಾಣ ಕಷ್ಟವೆನಿಸಿ ಬೆಂಗಳೂರಿಗೆ ಸಮೀಪದ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದೇನೆ

ಕಳೆದ 5 ವರ್ಷದಿಂದ ಬಾದಾಮಿ ಕ್ಷೇತ್ರ ಹಿಂದೆಂದೂ ಕಾಣದ ಅಭಿವೃದ್ಧಿ ಕಾರ್ಯಗಳನ್ನು ಕಂಡಿದೆ. ನನಗೆ ಮತ ನೀಡಿ ಗೆಲ್ಲಿಸಿದ ಬಾದಾಮಿ ಜನರ ನಂಬಿಕೆಗೆ ಈ 5 ವರ್ಷಗಳಲ್ಲಿ ಚ್ಯುತಿ ಬಾರದಂತೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂಬ ಸಂತೃಪ್ತಿ ನನಗಿದೆ.ಬಾದಾಮಿಯ ಜನರ ಪ್ರೀತಿಗೆ ನಾನು ಸದಾ ಋಣಿ ಎಂದು ಹೇಳಿದರು.

ರಾಜ್ಯಾದ್ಯಂತ ಪ್ರವಾಸ ಮಾಡಿ ಮತ್ತೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿರುವ ಯಡಿಯೂರಪ್ಪನವರು ಮತ್ತೊಮ್ಮೆ ಶಾಸಕರಾಗಿ ಜನಸೇವೆ ಮಾಡಲು ದೈಹಿಕವಾಗಿ ಶಕ್ತರಿದ್ದಾರೆ, ಹೀಗಿದ್ದಾಗ ಚುನಾವಣಾ ರಾಜಕಾರಣದಿಂದ ಹಿಂದೆ ಸರಿದರೆ ದಶಕಗಳಿಂದ ಗೆಲ್ಲಿಸುತ್ತಾ ಬಂದಿರುವ ಶಿಕಾರಿಪುರದ ಜನರಿಗೆ ದ್ರೋಹ ಬಗೆದಂತಾಗುವುದಿಲ್ಲವೇ? ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: ಡಿ ರೂಪಾ ಗೆ ಲೀಗಲ್ ನೋಟೀಸ್ ಕಳಿಸಿದ ರೋಹಿಣಿ ಸಿಂಧೂರಿ

ಯಡಿಯೂರಪ್ಪನವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರದಿಂದಲೇ ಸ್ಪರ್ಧಿಸುವ ನಿರ್ಧಾರ ಕೈಗೊಂಡರೆ ಅದನ್ನು ಸಂತೋಷದಿಂದ ಸ್ವಾಗತಿಸುತ್ತೇನೆ. ನನ್ನ ಸಲಹೆಯನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತಾರೆಂದು ಭಾವಿಸಿದ್ದೇನೆ ಎಂದು ಅವರು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

 

 

Trending News