Curry Leaves Benefit : ಕರಿಬೇವಿನ ಎಲೆಗಳನ್ನು ಸಾಮಾನ್ಯವಾಗಿ ಒಗ್ಗರಣೆ ಸೊಪ್ಪು ಎಂದು ಕೂಡಾ ಕರೆಯಲಾಗುತ್ತದೆ. ಭಾರತೀಯ ಪಾಕಪದ್ಧತಿಯಲ್ಲಿ ಈ ಸೊಪ್ಪಿಗೆ ವಿಶೇಷ ಸ್ಥಾನವಿದೆ. ಇದರ ಸುವಾಸನೆ ಮತ್ತು ವಿಭಿನ್ನ ರುಚಿಯ ಕಾರಣದಿಂದ ಈ ಸೊಪ್ಪನ್ನು ಒಗ್ಗರಣೆಗೆ ಬಳಸಲಾಗುತ್ತದೆ. ಅಲ್ಲದೆ ಇದರ ಚಟ್ನಿ ಪುಡಿಯನ್ನು ಕೂಡಾ ತಯಾರಿಸಲಾಗುತ್ತದೆ. ಕರಿಬೇವಿನ ಎಲೆಗಳು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ.
ಕರಿಬೇವಿನ ಆರೋಗ್ಯ ಪ್ರಯೋಜನಗಳು:
ಜೀರ್ಣಕ್ರಿಯೆಯಲ್ಲಿ ಸಹಾಯ:
ಕರಿಬೇವಿನ ಎಲೆಗಳು ಅಧಿಕ ಪ್ರಮಾಣದಲ್ಲಿ ಫೈಬರ್ ಇರುತ್ತದೆ. ಇದು ಆರೋಗ್ಯಕರ ಜೀರ್ಣಕ್ರಿಯೆಗೆ ಅವಶ್ಯಕವಾಗಿದೆ. ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಫೈಬರ್ ಇರುವುದರಿಂದ ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ. ಇದು ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಜಠರಗರುಳಿನ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
ಇದನ್ನೂ ಓದಿ : ಪುಟ್ಟ ಮಗುವಿನ ನಾಲಗೆ ಸ್ವಚ್ಛ ಮಾಡುವ ಸುಲಭ ವಿಧಾನ ಇಲ್ಲಿದೆ !
ಹೃದಯದ ಆರೋಗ್ಯಕ್ಕೆ ಒಳ್ಳೆಯದು:
ಕರಿಬೇವಿನ ಎಲೆಗಳು ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತವೆ. ಇದು ಹೃದಯರಕ್ತನಾಳದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುವ ಸಂಯುಕ್ತಗಳನ್ನು ಈ ಎಲೆಗಳು ಹೊಂದಿರುತ್ತವೆ. ಅಪಧಮನಿಗಳಲ್ಲಿ ಪ್ಲೇಕ್ ಸಂಗ್ರಹವಾಗುವುದನ್ನು ಇದು ತಡೆಯುತ್ತದೆ. ಹೀಗಾಗಿ ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ :
ಕರಿಬೇವಿನ ಎಲೆಗಳು ವಿಟಮಿನ್ ಸಿ ಯ ಸಮೃದ್ಧ ಮೂಲವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ವಿಟಮಿನ್ ಸಿ ಬಿಳಿ ರಕ್ತ ಕಣಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ.
ಡಯಾಬಿಟೀಸ್ ನಿಯಂತ್ರಣಕ್ಕೆ ಸಹಕಾರಿ :
ಕರಿಬೇವಿನ ಎಲೆಗಳು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುವ ಸಂಯುಕ್ತಗಳನ್ನು ಹೊಂದಿರುತ್ತವೆ. ಇದು ಮಧುಮೇಹ ಹೊಂದಿರುವ ಜನರಿಗೆ ಅತ್ಯುತ್ತಮ ಆಯ್ಕೆಯಾಗಿದೆ. ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.
ಇದನ್ನೂ ಓದಿ : ಅಡುಗೆಗೆ ಬಳಸುವ ಈ ಒಂದು ವಸ್ತು ರಕ್ತದ ಸಕ್ಕರೆಯನ್ನು ಸಂಪೂರ್ಣವಾಗಿ ನಿಯಂತ್ರಿಸುತ್ತದೆ
ಕೂದಲು ಬೆಳೆಯಲು ಸಹಕಾರಿ :
ಕರಿಬೇವಿನ ಎಲೆಗಳು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ಕೂದಲು ಉದುರುವುದನ್ನು ತಡೆಯುತ್ತದೆ. ಕರಿಬೇವಿನ ಸೊಪ್ಪು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುವುದರಿಂದ ಕೂದಲು ಹಾನಿಯಾಗುವುದನ್ನು ತಡೆಯುತ್ತದೆ. ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ.
ತೂಕ ನಷ್ಟಕ್ಕೆ ಸಹಾಯಕ :
ಕರಿಬೇವಿನ ಎಲೆಗಳು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ಹೆಚ್ಚಿನ ಫೈಬರ್ ಅನ್ನು ಒಳಗೊಂಡಿರುತ್ತವೆ. ಇದು ತೂಕ ನಷ್ಟಕ್ಕಾಗಿ ಡಯೆಟ್ ಮಾಡುತ್ತಿರುವವರು ತಮ್ಮ ಡಯೆಟ್ ಲಿಸ್ಟ್ ನಲ್ಲಿ ಕರಿಬೇವಿನ ಸೊಪ್ಪನ್ನು ಸೇರಿಸಿಕೊಳ್ಳಬೇಕು.
ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು:
ಕರಿಬೇವಿನ ಎಲೆಗಳಲ್ಲಿ ವಿಟಮಿನ್ ಎ ಇದೆ. ಇದು ಕಣ್ಣುಗಳ ಆರೋಗ್ಯವನ್ನು ಕಾಪಾಡಿಕೊಳ್ಳಲು ಅವಶ್ಯಕವಾಗಿದೆ. ವಿಟಮಿನ್ ಎ ರಾತ್ರಿ ಕುರುಡುತನ, ಮ್ಯಾಕ್ಯುಲರ್ ಡಿಜೆನರೇಶನ್ ಮತ್ತು ಇತರ ಕಣ್ಣಿನ ಕಾಯಿಲೆಗಳನ್ನು ತಡೆಯಲು ಸಹಾಯ ಮಾಡುತ್ತದೆ.
ಕರಿಬೇವಿನ ಎಲೆಗಳನ್ನು ಹೇಗೆ ಬಳಸುವುದು ?:
ಕರಿಬೇವಿನ ಎಲೆಗಳನ್ನು ಅಡುಗೆಯಲ್ಲಿ ವಿವಿಧ ರೀತಿಯಲ್ಲಿ ಬಳಸಬಹುದು. ಅವುಗಳನ್ನು ಪರಿಮಳಕ್ಕಾಗಿ ಒಗ್ಗರಣೆ, ಸೂಪ್ ಮಾಡುವಾಗ, ಚಟ್ನಿ , ಸಲಾಡ್ ತಯಾರಿಸುವಾಗ ಬಳಸಬಹುದು.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.