ಪುಲ್ವಾಮಾದಲ್ಲಿ ಕಾಶ್ಮೀರಿ ಪಂಡಿತನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಉಗ್ರರು...! 

ಭಾನುವಾರ ಫೆ.26ರಂದು ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಬ್ಯಾಂಕ್‌ ಭದ್ರಾತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಲ್ಲಿ ಸಂಜಯ್ ಶರ್ಮಾ ಎಂಬುವರು ಮೃತ ಪಟ್ಟಿದ್ದಾರೆ. ದಾಳಿಯಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಪುಲ್ವಾಮಾದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರು ಕಾಶ್ಮೀರಿ ಪಂಡಿತ್‌ ಗುಂಪಿಗೆ ಸೇರಿದವರಾಗಿದ್ದು, ಕಳೆದ 40 ವರ್ಷಗಳಿಂದ ಬ್ಯಾಂಕ್‌ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

Written by - Krishna N K | Last Updated : Feb 26, 2023, 03:18 PM IST
  • ಭಯೋತ್ಪಾದಕರ ಗುಂಡಿನ ದಾಳಿ ಕಾಶ್ಮೀರಿ ಪಂಡಿತ ಸಾವು.
  • ಫೆ.26ರಂದು ನಡೆದ ಭಯೋತ್ಪಾದಕರ ಗುಂಡಿನ ದಾಳಿ.
  • ಉಗ್ರರ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ ಕಾಶ್ಮೀರಿ ಪೊಲೀಸ್‌ ಪಡೆ.
ಪುಲ್ವಾಮಾದಲ್ಲಿ ಕಾಶ್ಮೀರಿ ಪಂಡಿತನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಉಗ್ರರು...!  title=

ಪುಲ್ವಾಮಾ : ಭಾನುವಾರ ಫೆ.26ರಂದು ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಬ್ಯಾಂಕ್‌ ಭದ್ರಾತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಲ್ಲಿ ಸಂಜಯ್ ಶರ್ಮಾ ಎಂಬುವರು ಮೃತ ಪಟ್ಟಿದ್ದಾರೆ. ದಾಳಿಯಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಪುಲ್ವಾಮಾದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರು ಕಾಶ್ಮೀರಿ ಪಂಡಿತ್‌ ಗುಂಪಿಗೆ ಸೇರಿದವರಾಗಿದ್ದು, ಕಳೆದ 40 ವರ್ಷಗಳಿಂದ ಬ್ಯಾಂಕ್‌ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಸ್ಥಳೀಯ ಮಾರುಕಟ್ಟೆಗೆ ತೆರಳುತ್ತಿದ್ದ ಸಂಜಯ್‌ ಎಂಬುವರ ಮೇಲೆ ಭಯೋತ್ಪಾದರು ಗುಂಡಿನ ದಾಳಿ ನಡೆಸಿದ್ದಾರೆ. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದ್ರೆ ತೀರ್ವ ರಕ್ತಸ್ರಾವದಿಂದಾಗಿ ಸಾವನ್ನಪ್ಪಿದ್ದಾರೆ. ಕಾರ್ಯಚರಣೆ ನಡಸಲಾಗುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಕಳೆದ ವಾರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಹಿಜ್ಬ್-ಉಲ್-ಮುಜಾಹಿದ್ದೀನ್ ಸಂಘಟನೆಯ ಮೂವರು ಭಯೋತ್ಪಾದಕ ಸಹಚರರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: Delhi Liquor Scam : ಮದ್ಯ ಹಗರಣ ಪ್ರಕರಣದಲ್ಲಿ ಅರೆಸ್ಟ್‌ ಆಗ್ತಾರಾ ಮನೀಶ್ ಸಿಸೋಡಿಯಾ?

ಪಿಸಿ ಹತಿಪೋರಾ ಮತ್ತು ಬೆಹಿಬಾಗ್ ಪೊಲೀಸ್ ಠಾಣೆಯ ಪೊಲೀಸರು ನಿನ್ನೆ ಸಂಜೆ ಅವರನ್ನು ಬಂಧಿಸಿದ್ದರು. ಪೊಲೀಸ್ ವಕ್ತಾರರ ಪ್ರಕಾರ, ಅಕ್ರಮ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಾಗಿಸುವ ದೇಶವಿರೋಧಿ ಅಂಶಗಳ ಬಗ್ಗೆ ನಂಬಲರ್ಹವಾದ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆಯನ್ನು ನಡೆಸಲಾಯಿತು ಮತ್ತು ಕುಲ್ಗಾಮ್ ಪೊಲೀಸರು ಅವರನ್ನು ಹಿಡಿಯಲು ದಾದರ್‌ಕೂಟ್, ಅಲಂಗಂಜ್ ಕ್ರಾಸಿಂಗ್‌ನಲ್ಲಿ ನಿರ್ದಿಷ್ಟ ನಾಕಾವನ್ನು ಸ್ಥಾಪಿಸಿದರು. 

ಅಲ್ಲದೆ, ಆರೋಪಿಗಳಿಂದ 1 ಪಿಸ್ತೂಲ್, 2 ಪಿಸ್ತೂಲ್ ಮ್ಯಾಗಜೀನ್ ಮತ್ತು 13 ಜೀವಂತ ಪಿಸ್ತೂಲ್ ಸುತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೂವರನ್ನು ಬಂಧಿಸಲಾಗಿದ್ದು, ಪ್ರಾಥಮಿಕ ತನಿಖೆಯಿಂದ ಅವರು ಭಯೋತ್ಪಾದಕ ಅಪರಾಧಗಳಲ್ಲಿ ಭಾಗಿಯಾಗಿದ್ದರು ಮತ್ತು ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ ನೀಡುತ್ತಿದ್ದರು ಎಂದು ತಿಳಿದುಬಂದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News