Deve Gowda: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು ಅನಾರೋಗ್ಯ ಹಿನ್ನಲೆಯಲ್ಲಿ ಆಸ್ಪತ್ರೆ ಗೆ ದಾಖಲಾಗಿದ್ದಾರೆ. ಕಾಲು ಊತ ಜಾಸ್ತಿ ಆಗಿದ್ದ ಕಾರಣ ಜನರಲ್ ಚೆಕಪ್ಗೆ ಎಂದು ದೇವೇಗೌಡರು ಆಸ್ಪತ್ರೆಗೆ ತೆರಳಿದ್ದಾರೆ.
ಹೆಚ್ಡಿಡಿ ಆರೋಗ್ಯ ಪರಿಶೀಲನೆ ನಡೆಸಿದ್ದ ವೈದ್ಯರು, ಸ್ವಲ್ಪ ದಿನದ ಮಟ್ಟಿಗೆ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ವೈದ್ಯರ ಸೂಚನೆ ಮೇರೆಗೆ ದೇವೇಗೌಡರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಬೆಳಗ್ಗೆ ಹೆಚ್ಡಿಡಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಮೂಲಗಳು ತಿಳಿಸಿವೆ .
ಇದನ್ನೂ ಓದಿ: Government Employees Strike: ನಾಳೆಯಿಂದ ರಾಜ್ಯ ಸರ್ಕಾರಿ ನೌಕರರ ಅನಿರ್ಧಿಷ್ಟಾವದಿ ಮುಷ್ಕರ
ಈ ಹಿನ್ನೆಲೆ ರಾಜಕೀಯ ಕಾರ್ಯಕ್ರಮದಿಂದ ಸದ್ಯದ ಮಟ್ಟಿಗೆ ದೂರ ಉಳಿಯುದಾಗಿ ತಿಳಿಸಿದ್ದಾರೆ. ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ಇನ್ನೆರಡು ಮೂರು ದಿನಗಳಲ್ಲಿ ಡಿಸ್ಚಾರ್ಜ್ ಆಗಬಹುದು ಎಂದು ಮಾಹಿತಿ ನೀಡಿದ್ದಾರೆ. ಸದ್ಯ ಅವರು ಖಾಸಗಿ ಆಸ್ಪತ್ರೆ ಯಲ್ಲಿ ಪಡೆಯುತ್ತಿದ್ದಾರೆ.
ಕುಟುಂಬಸ್ಥರು ಇವರ ಅಭಿಮಾನಿಗಳಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಯಾವುದೇ ಗೊಂದಲ ಪಡುವುದು ಬೇಡ ಎಂದಿದ್ದಾರೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.