ಮನೆಯಲ್ಲಿ ಸುಖ-ಸಂತೋಷ-ಸಮೃದ್ಧಿಗಾಗಿ ಹೋಳಿಯಲ್ಲಿ ಈ ವಸ್ತುಗಳನ್ನು ಮನೆಗೆ ತನ್ನಿ

Vasti Tips: ವಾಸ್ತು ಪ್ರಕಾರ, ಹೋಳಿ ಸಮಯದಲ್ಲಿ ಕೆಲವು ವಸ್ತುಗಳನ್ನು ಮನೆಗೆ ತರುವುದು ತುಂಬಾ ಶುಭ. ಇದರಿಂದ ಮನೆಯಲ್ಲಿ ಎಂದಿಗೂ ಹಣಕ ಕೊರತೆ ಎದುರಾಗುವುದಿಲ್ಲ ಎಂದು ನಂಬಲಾಗಿದೆ.

Vasti Tips: ವಾಸ್ತು ಶಾಸ್ತ್ರದಲ್ಲಿ ಕುಟುಂಬದ ಸುಖ-ಸಂತೋಷ-ಸಮೃದ್ಧಿಗಾಗಿ ಹಲವು ವಿಷಯಗಳನ್ನು ಉಲ್ಲೇಖಿಸಲಾಗಿದೆ. ವಾಸ್ತು ಪ್ರಕಾರ, ಹೋಳಿ ಸಮಯದಲ್ಲಿ ಕೆಲವು ವಸ್ತುಗಳನ್ನು ಮನೆಗೆ ತರುವುದು ತುಂಬಾ ಶುಭ. ಇದರಿಂದ ಮನೆಯಲ್ಲಿ ಎಂದಿಗೂ ಹಣಕ ಕೊರತೆ ಎದುರಾಗುವುದಿಲ್ಲ ಎಂದು ನಂಬಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ವಾಸ್ತು ಶಾಸ್ತ್ರದ ಪ್ರಕಾರ, ಹೋಳಿ ಸಮಯದಲ್ಲಿ ಮನೆಗೆ ಕೆಲವು ವಸ್ತುಗಳನ್ನು ತರುವುದರಿಂದ ಮನೆಯಲ್ಲಿ ಸಕಾರಾತ್ಮಕತೆಯನ್ನು ಪ್ರವೇಶಿಸುತ್ತದೆ. ಇದರಿಂದ ಮನೆಯಲ್ಲಿ ಎಂದಿಗೂ ಹಣದ ಕೊರತೆ ಇರುವುದಿಲ್ಲ ಎಂದು ಹೇಳಲಾಗುತ್ತದೆ.

2 /5

ಹೋಳಿ ದಹನದ ಸಂದರ್ಭದಲ್ಲಿ ಮನೆಯ ಮುಖ್ಯ ದ್ವಾರಕ್ಕೆ ತೋರಣ ಕಟ್ಟುವುದರಿಂದ ವಾಸ್ತು ದೋಷ ನಿವಾರಣೆ ಆಗುತ್ತದೆ. ಬಳಿಕ ನಿಮ್ಮ ಪ್ರತಿ ಕೆಲಸದಲ್ಲೂ ಯಶಸ್ಸು ಕೈ ಹಿಡಿಯಲಿದೆ ಎಂದು ಹೇಳಲಾಗುತ್ತದೆ.

3 /5

ವಾಸ್ತು ಶಾಸ್ತ್ರದ ಪ್ರಕಾರ, ಸಂಪತ್ತಿನ ದೇವರು ಕುಬೇರನ ದಿಕ್ಕು ಎಂದು ಪರಿಗಣಿಸಲ್ಪಡುವ ಮನೆಯ ಉತ್ತರ ಅಥವಾ ಈಶಾನ್ಯ ದಿಕ್ಕಿನಲ್ಲಿ ಫಿಶ್ ಅಕ್ವೇರಿಯಂ ಅನ್ನು ಇಡುವುದು ತುಂಬಾ ಶುಭ. ಅದರಲ್ಲೂ ನೀವು ಬಣ್ಣಗಳ ಹಬ್ಬ ಹೋಳಿಯಲ್ಲಿ ಈ ದಿಕ್ಕಿನಲ್ಲಿ ಅಕ್ವೇರಿಯಂ ಇಡುವುದರಿಂದ ಮನೆಯಲ್ಲಿ ಸುಖ-ಸಂತೋಷದ ಜೊತೆಗೆ ಸಮೃದ್ಧಿಯೂ ಉಂಟಾಗುತ್ತದೆ ಎಂದು ಹೇಳಲಾಗುತ್ತದೆ.

4 /5

ಇತ್ತೀಚಿನ ದಿನಗಳಲ್ಲಿ ಮನಿ ಪ್ಲಾಂಟ್ ಟ್ರೆಂಡ್ ತುಂಬಾ ಹೆಚ್ಚಾಗಿದೆ. ಮನಿ ಪ್ಲಾಂಟ್ ಅನ್ನು ವಾಷ್ಟು ಶಾಸ್ತ್ರದಲ್ಲಿ ಬಹಳ ಮಂಗಳಕರ ಸಸ್ಯವೆಂದು ಪರಿಗಣಿಸಲಾಗಿದೆ. ಈ ಸಸ್ಯವು ಮನೆಯಲ್ಲಿ ಋಣಾತ್ಮಕ ಶಕ್ತಿಯನ್ನು ದೂರವಾಗಿಸಿ ಸಕಾರಾತ್ಮಕತೆಯನ್ನು ತುಂಬುತ್ತದೆ ಎಂದು ನಂಬಲಾಗಿದೆ.  ಹೋಳಿಯ ಸಮಯದಲ್ಲಿ ಈ ಸಸ್ಯವನ್ನು ಮನೆಗೆ ತರುವುದು ತುಂಬಾ ಶುಭ ಎನ್ನಲಾಗುತ್ತದೆ.

5 /5

ಹೋಳಿಯ ಸಮಯದಲ್ಲಿ ಮನೆಗೆ ಸ್ಫಟಿಕದ ಆಮೆಯನ್ನು ತರುವುದು ತುಂಬಾ ಮಂಗಳಕರ. ಸ್ಪಟಿಕದ ಆಮೆಯನ್ನು ತಂದು ಮನೆಯಲ್ಲಿ ಇಡುವುದರಿಂದ ಧನಾತ್ಮಕ ಶಕ್ತಿಯು ಹರಡುತ್ತದೆ ಮತ್ತು  ಇದು ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ ಎಂದು ನಂಬಲಾಗಿದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಧಾರ್ಮಿಕ ನಂಬಿಕೆಗಳು ಮತ್ತು ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.