ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ, BWSSB ಚೀಫ್ ಅಕೌಂಟೆಂಟ್ ಪ್ರಶಾಂತ್ 40 ಲಕ್ಷ ರೂ. ಲಂಚ ಪಡೆಯುವಾಗಿ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಬೆಂಗಳೂರು ನೀರು ಸರಬರಾಜ & ಒಳಚರಂಡಿ ಮಂಡಳಿ ಚೀಫ್ ಅಕೌಂಟೆಂಟ್ ಆಗಿರುವ ಪ್ರಶಾಂತ್ ಟೆಂಡರ್ ವಿಚಾರವಾಗಿ 80 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಅದರಂತೆ ತಮ್ಮ ಕಚೇರಿಯಲ್ಲಿಯೇ 40 ಲಕ್ಷ ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.
ತಮ್ಮ ಪುತ್ರ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಬೆನ್ನಲ್ಲೇ KSDL ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ. ಇನ್ನು ಇದೇ ವಿಚಾರವಾಗಿ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ‘ಈ ಪ್ರಕರಣ ಸಂಬಂಧ ನಿಷ್ಪಕ್ಷಪಾತವಾಗಿ ತನಿಖೆ ಮಾಡಲಿ ಎಂಬುದು ನಮ್ಮ ಆಶಯವಾಗಿದೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಲೋಕಾಯುಕ್ತ ಸಂಸ್ಥೆ ಜನರ ಪರವಾಗಿದೆ, ಲಂಚ ಕೇಳಿದ್ರೆ ಮಾಹಿತಿ ನೀಡಿ: ನ್ಯಾ. ಬಿ.ಎಸ್.ಪಾಟೀಲ್
ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲ ಮಾಡಿದ್ದ ,ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಇಂತಹ ಎಷ್ಟೋ ಪ್ರಕರಣಗಳು ಮುಚ್ಚಿ ಹೋಗಿರುವ ಸಾಧ್ಯತೆ ಇದೆ.
2/2— Basavaraj S Bommai (@BSBommai) March 3, 2023
ಶುಕ್ರವಾ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ನಾವು ಲೋಕಾಯುಕ್ತವನ್ನು ಪುನಃ ಸ್ಥಾಪಿಸಿದ್ದೇ ಭ್ರಷ್ಟಾಚಾರ ನಿಗ್ರಹಿಸಲು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುಚ್ಚಲಾಗಿದ್ದ ಲೋಕಾಯುಕ್ತ ಸಂಸ್ಥೆಯನ್ನು, ನಾವು ರಾಜ್ಯದಲ್ಲಿ ಭ್ರಷ್ಟಾಚಾರವನ್ನು ಸಮಗ್ರವಾಗಿ ನಿಗ್ರಹಿಸುವ ಉದ್ದೇಶದಿಂದ ಪುನರಾರಂಭಿಸಿದ್ದೇವು. ಚನ್ನಗಿರಿ ಶಾಸಕರ ಪುತ್ರ ಹಣ ಪಡೆದ ವಿಚಾರದ ಬಗ್ಗೆ ಲೋಕಾಯುಕ್ತ ಸಂಸ್ಥೆ ಸ್ವತಂತ್ರವಾಗಿ, ನಿಷ್ಪಕ್ಷಪಾತವಾಗಿ ತನಿಖೆ ಮಾಡಲಿ ಎಂಬುದು ನಮ್ಮ ನಿಲುವಾಗಿದೆ’ ಎಂದು ಹೇಳಿದ್ದಾರೆ.
‘ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲ ಮಾಡಿದ್ದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಇಂತಹ ಎಷ್ಟೋ ಪ್ರಕರಣಗಳು ಮುಚ್ಚಿ ಹೋಗಿರುವ ಸಾಧ್ಯತೆ ಇದೆ. ಈ ಪ್ರಕರಣದಲ್ಲಿಯೂ ಕೂಡ ಸರ್ವಸ್ವತಂತ್ರ ಸಂಸ್ಥೆಯಾಗಿರುವ ಲೋಕಾಯಕ್ತ ಉನ್ನತ ಮಟ್ಟದ ತನಿಖೆ ಕೈಗೊಳ್ಳಲಿ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ. ನಮ್ಮ ಈ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ. ಈ ಪ್ರಕರಣದಲ್ಲಿ ಸಿಕ್ಕಿರುವ ಮಾಹಿತಿ, ಹಣ ಎಲ್ಲವೂ ಲೋಕಾಯುಕ್ತಕ್ಕೆ ದೊರೆತಿದೆ. ಮುಕ್ತವಾಗಿ ಮತ್ತು ನ್ಯಾಯಸಮ್ಮತವಾಗಿ ತನಿಖೆ ನಡೆಯಲಿ’ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಇದನ್ನೂ ಓದಿ: ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ!: ಕಾಂಗ್ರೆಸ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.