Bribe Case: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಲಂಚದ ಪ್ರಕರಣಕ್ಕೆ ಇಡಿ ಎಂಟ್ರಿ..!

Karnataka Bribe Case: ಲಂಚದ ಮಾಹಿತಿ ಕಲೆ ಹಾಕಿದ ಬಳಿಕ ಪ್ರಕರಣದ ಬಗ್ಗೆ ಇಡಿಗೆ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ. ಪ್ರಕರಣದ ಪ್ರಾಥಮಿಕ ತನಿಖೆಯ ವರದಿ ಸಹಿತ ಇಡಿಗೆ ಮಾಹಿತಿ ನೀಡಲಿದ್ದಾರೆಂದು ತಿಳಿದುಬಂದಿದೆ.

Written by - Puttaraj K Alur | Last Updated : Mar 4, 2023, 10:37 AM IST
  • ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಲಂಚದ ಪ್ರಕರಣಕ್ಕೆ ಇಡಿ ಎಂಟ್ರಿ
  • ಲಂಚ ಪ್ರಕರಣದಲ್ಲಿ ಅಕ್ರಮ ಹಣ ಪತ್ತೆಯಾಗಿರುವ ಹಿನ್ನೆಲೆ ಮಾಹಿತಿ ಕೋರಿ ಇಡಿ ಇ-ಮೇಲ್
  • ಲಂಚ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ಇಡಿ ಮನವಿ
Bribe Case: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಲಂಚದ ಪ್ರಕರಣಕ್ಕೆ ಇಡಿ ಎಂಟ್ರಿ..! title=
ಲಂಚದ ಪ್ರಕರಣಕ್ಕೆ ಇಡಿ ಎಂಟ್ರಿ!

ಬೆಂಗಳೂರು: ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಲಂಚದ ಪ್ರಕರಣಕ್ಕೆ ಇದೀಗ ಇಡಿ ಎಂಟ್ರಿ ಕೊಟ್ಟಿದೆ. ಪ್ರಕರಣ ಸಂಬಂಧ ಮಾಹಿತಿ ನೀಡುವಂತೆ ಇಡಿಯಿಂದ ಇ-ಮೇಲ್ ರವಾನಿಸಲಾಗಿದೆ. ಲಂಚ ಪ್ರಕರಣದಲ್ಲಿ ಅಕ್ರಮ ಹಣ ಪತ್ತೆಯಾಗಿರುವ ಹಿನ್ನೆಲೆ ಮಾಹಿತಿ ಕೋರಿ ಇಡಿ ಇ-ಮೇಲ್ ಮಾಡಿದೆ. ನೀವು ರಿಜಿಸ್ಟರ್ ಮಾಡಿರುವ ಪ್ರಕರಣದ ಬಗ್ಗೆ ಮಾಹಿತಿ ನೀಡಿ ಎಂದು ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ಇಡಿ ಇ-ಮೇಲ್ ರವಾನಿಸಿದೆ.

ಲಂಚದ ಮಾಹಿತಿ ಕಲೆ ಹಾಕಿದ ಬಳಿಕ ಪ್ರಕರಣದ ಬಗ್ಗೆ ಇಡಿಗೆ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ. ಪ್ರಕರಣದ ಪ್ರಾಥಮಿಕ ತನಿಖೆಯ ವರದಿ ಸಹಿತ ಇಡಿಗೆ ಮಾಹಿತಿ ನೀಡಲಿದ್ದಾರೆಂದು ತಿಳಿದುಬಂದಿದೆ. ಸದ್ಯ ಲೋಕಾಯುಕ್ತ ಸಂಕಷ್ಟದ ಜೊತೆಗೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಪ್ರಶಾಂತ್ ಇಡಿ ಸಂಕಷ್ಟಕ್ಕೆ ಗುರಿಯಾಗಿಲಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಯಾರ ಎಟಿಎಂ ಆಗಿದೆ? ಸರಣಿ ಟ್ವೀಟ್ ಮೂಲಕ ಅಮಿತ್ ಶಾರನ್ನು ಪ್ರಶ್ನಿಸಿದ ಹೆಚ್.ಡಿ. ಕುಮಾರಸ್ವಾಮಿ

ರೆಡ್‍ಹ್ಯಾಂಡ್‍ ಆಗಿ ಸಿಕ್ಕಿಬಿದ್ದ ಶಾಸಕ ಪುತ್ರ!

ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ 40 ಲಕ್ಷ ರೂ. ಲಂಚ ತೆಗೆದುಕೊಳ್ಳುವ ವೇಳೆ ರೆಡ್‍ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದ. ಅವರ ನಿವಾಸದಲ್ಲಿ ಪರಿಶೀಲನೆ ನಡೆಸಿದ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ 8 ಕೋಟಿ ರೂ. ನಗದು ಸಿಕ್ಕಿತ್ತು.

ಪ್ರಶಾಂತ್ ಮಾಡಾಳ್ ಟೆಂಡರ್ ಆಕಾಂಕ್ಷಿಯೊಬ್ಬರಿಂದ 80 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ 40 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ರೆಡ್‍ಹ್ಯಾಂಡ್‍ ಆಗಿ ಹಿಡಿದಿದ್ದರು. ಬಳಿಕ ಮನೆ ಪರಿಶೀಲಿಸಿದ್ದ ಲೋಕಾಯುಕ್ತ ಅಧಿಕಾರಿಗಳಿಗೆ ಕಂತೆ ಕಂತೆ ಹಣ ಪತ್ತೆಯಾಗಿತ್ತು. ಪ್ರಕರಣ ಸಂಬಂಧ ಪ್ರಶಾಂತ್ ಮಾಡಾಳ್, ಅವರ ಸಂಬಂಧಿ ಸಿದ್ದೇಶ್, ಅಕೌಂಟೆಂಟ್ ಸುರೇಂದ್ರ ಮತ್ತು ಹಣ ಕೊಡಲು ಬಂದಿದ್ದ ನೀಕೋಲಸ್ ಹಾಗೂ ಗಂಗಾಧರ್ ಎಂಬುವರನ್ನು ಬಂಧಿಸಲಾಗಿತ್ತು. ಬಂಧಿತ ಐವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿತ್ತು.

ಇದನ್ನೂ ಓದಿ: ʼಮಾಡಾಳ್‌ ಲೋಕಾಯುಕ್ತ ದಾಳಿʼ... 18 ಗಂಟೆ ಶೋಧ, 8.12 ಕೋಟಿ ಹಣ ಸೀಜ್..!

ಪುತ್ರನ ಲಂಚದ ಪ್ರಕರಣ ಬಹಿರಂಗವಾಗುತ್ತಲೇ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತ (KSDL) ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೇ ಪ್ರಕರಣ ಸಂಬಂಧ ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News