Man rapes dog : ನಾಯಿಯ ಮೇಲೆ ಅತ್ಯಾಚಾರ, ಕ್ಯಾಮರಾದಲ್ಲಿ ಸೆರೆಯಾಯ್ತು ಹೇಯ ಕೃತ್ಯ! ವಿಡಿಯೋ ವೈರಲ್

Man Rapes Dog in Delhi : ಭಯಾನಕ ಘಟನೆಯೊಂದು ಮತ್ತೊಮ್ಮೆ ರಾಷ್ಟ್ರ ರಾಜಧಾನಿಯನ್ನು ಬೆಚ್ಚಿ ಬೀಳಿಸಿದೆ. ದೆಹಲಿಯ ಇಂದರ್‌ಪುರಿ ಪ್ರದೇಶದ ವ್ಯಕ್ತಿಯೊಬ್ಬ ಹೆಣ್ಣು ನಾಯಿಯ ಮೇಲೆ ಅತ್ಯಾಚಾರ ಎಸಗುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. 

Written by - Chetana Devarmani | Last Updated : Mar 6, 2023, 08:31 AM IST
  • ಹೆಣ್ಣು ನಾಯಿಯ ಮೇಲೆ ಅತ್ಯಾಚಾರ
  • ಕ್ಯಾಮರಾದಲ್ಲಿ ಸೆರೆಯಾಯ್ತು ಹೇಯ ಕೃತ್ಯ
  • ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್
Man rapes dog : ನಾಯಿಯ ಮೇಲೆ ಅತ್ಯಾಚಾರ, ಕ್ಯಾಮರಾದಲ್ಲಿ ಸೆರೆಯಾಯ್ತು ಹೇಯ ಕೃತ್ಯ! ವಿಡಿಯೋ ವೈರಲ್  title=
Man Rapes Dog in Delhi

ನವದೆಹಲಿ : ಭಯಾನಕ ಘಟನೆಯೊಂದು ಮತ್ತೊಮ್ಮೆ ರಾಷ್ಟ್ರ ರಾಜಧಾನಿಯನ್ನು ಬೆಚ್ಚಿ ಬೀಳಿಸಿದೆ. ದೆಹಲಿಯ ಇಂದರ್‌ಪುರಿ ಪ್ರದೇಶದ ವ್ಯಕ್ತಿಯೊಬ್ಬ ಹೆಣ್ಣು ನಾಯಿಯ ಮೇಲೆ ಅತ್ಯಾಚಾರ ಎಸಗುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಪಿಯ ನೆರೆಹೊರೆಯವರು ಈ ಕೃತ್ಯವನ್ನು ಕ್ಯಾಮೆರಾದಲ್ಲಿ ಚಿತ್ರೀಕರಿಸಿ ಪೊಲೀಸರಿಗೆ ದೂರು ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ. 

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 377 (ಅಸ್ವಾಭಾವಿಕ ಅಪರಾಧಗಳು) ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಡಿಯೋ ಆಧರಿಸಿ ಪೊಲೀಸರು ಶನಿವಾರ ಆರೋಪಿಯನ್ನು ಬಂಧಿಸಿದ್ದಾರೆ.

 

 

ಇದನ್ನೂ ಓದಿ : ಗೆಳತಿಯ ಮಗನ ಮೇಲೆ ಮೋಹ.. ತನಗಿಂತ 68 ವರ್ಷ ಚಿಕ್ಕವನ ಜೊತೆ ಅಜ್ಜಿಯ ಮದುವೆ!

ಈ ಘಟನೆಯನ್ನು ಪೀಪಲ್ ಫಾರ್ ಅನಿಮಲ್ಸ್ ಸದಸ್ಯರಾದ ಸುರ್ಭಿ ರಾವತ್ ಅವರ ಗಮನಕ್ಕೆ ತರಲಾಯಿತು. ಸುರ್ಭಿ ಅವರು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಇಂದರ್‌ಪುರಿ ಎಸ್‌ಎಚ್‌ಒ ಅವರೊಂದಿಗೆ ಮಾತನಾಡಿದ್ದಾರೆ, ಅವರು ವಿಡಿಯೋವನ್ನು ವೀಕ್ಷಿಸಿದ ನಂತರ ಎಫ್‌ಐಆರ್ ದಾಖಲಿಸಲು ಒಪ್ಪಿಕೊಂಡರು. ಆರೋಪಿಯು ಒಂದು ತಿಂಗಳಿನಿಂದ ನಾಯಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಆ ವ್ಯಕ್ತಿಯೂ ಶಿಶುಕಾಮಿ ಎಂದು ತನಿಖೆಯ ವೇಳೆ ತಿಳಿದುಬಂದಿದೆ. ಅವನ ಮೇಲೆ ಸೆಕ್ಷನ್ 377 ಅನ್ನು ವಿಧಿಸಲಾಗಿದೆ, ಇದು ಪುರುಷ, ಮಹಿಳೆ, ಮಕ್ಕಳು ಅಥವಾ ಪ್ರಾಣಿಗಳೊಂದಿಗೆ ಅಸ್ವಾಭಾವಿಕ ಲೈಂಗಿಕತೆ ಹೊಂದಿರುವ ವಿರುದ್ಧದ ಕಾಯ್ದೆಯಾಗಿದೆ.

ಈ ಕುರಿತು ಮಾತನಾಡಿದ ಪ್ರಾಣಿ ಹಕ್ಕುಗಳ ಹೋರಾಟಗಾರ ಹಾಗೂ ವಕೀಲ ಆಶಿಶ್ ಶರ್ಮಾ, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ದೂರು ನೀಡಿದ ದಿನವೇ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಮಾದಕ ವ್ಯಸನಿಯಾಗಿದ್ದಾನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಅದಾನಿ ಷೇರುಗಳಿಂದ 2 ದಿನದಲ್ಲಿ ₹3,100 ಕೋಟಿ ಲಾಭ ಪಡೆದ ಎನ್‌ಆರ್‌ಐ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News