ಬೆಂಗಳೂರು: ‘ಇದು ಅತ್ಯಂತ ಮುಖ್ಯ ವಿಷಯ. ಬೆಂಗಳೂರು-ಮೈಸೂರು ನಗರಗಳ ನಡುವೆ ನಿರ್ಮಿಸಿರುವ ದಶಪಥ ಹೆದ್ದಾರಿ ಯಾರಿಗೆ ಉಪಯೋಗ? ಹಣ ಮಾಡಲು ಯಾರಿಗೆ ರಹದಾರಿ? ಎನ್ನುವುದು ನನ್ನ ಪ್ರಶ್ನೆ. ರಾಮನಗರ, ಮಂಡ್ಯ ಜಿಲ್ಲೆಗಳ ಜನರಿಗೆ, ಅದರಲ್ಲೂ ಬೆಂಗಳೂರು-ಮೈಸೂರು ನಡುವೆ ಆ ಹೆದ್ದಾರಿ ಉದ್ದಕ್ಕೂ ಜೀವಿಸುತ್ತಿರುವ ಜನರಿಗೆ ಇದರಿಂದ ನಯಾಪೈಸೆ ಉಪಯೋಗ ಇದೆಯಾ? ಇಲ್ಲ’ವೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಈ ಬಗ್ಗೆ ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಸ್ಥಳೀಯರಿಗೆ ದಶಪಥದಿಂದ ಉಪಯೋಗ ಇದೆಯಾ ಎಂದು ಇನ್ನೂ ಒಳಹೊಕ್ಕು ಲೆಕ್ಕ ಹಾಕಿದರೆ, ಉತ್ತರ ದೊಡ್ಡ ಸೊನ್ನೆ. ಕೇವಲ ಬೆಂಗಳೂರಿನಿಂದ ಮೈಸೂರಿಗೆ ಶರವೇಗದಲ್ಲಿ ನೇರವಾಗಿ ಸಂಚರಿಸುವವರಿಗೆ ಮಾತ್ರ ಲಾಭ. ಹಾಗಾದರೆ ರಾಮನಗರ, ಚನ್ನಪಟ್ಟಣ, ಮದ್ದೂರು, ಶ್ರೀರಂಗಪಟ್ಟಣದವರಿಗೆ ಉಪಯೋಗ ಇದೆಯಾ? ಎಳ್ಳಷ್ಟೂ ಇಲ್ಲ. ಈ ಸತ್ಯವನ್ನು ನಾವೆಲ್ಲರೂ ಅರಿಯಬೇಕಿದೆ’ ಎಂದು ಹೇಳಿದ್ದಾರೆ.
ಸ್ಥಳೀಯರಿಗೆ ದಶಪಥದಿಂದ ಉಪಯೋಗ ಇದೆಯಾ ಎಂದು ಇನ್ನೂ ಒಳಹೊಕ್ಕು ಲೆಕ್ಕ ಹಾಕಿದರೆ, ಉತ್ತರ ದೊಡ್ಡ ಸೊನ್ನೆ. ಕೇವಲ ಬೆಂಗಳೂರಿನಿಂದ ಮೈಸೂರಿಗೆ ಶರವೇಗದಲ್ಲಿ ನೇರವಾಗಿ ಸಂಚರಿಸುವವರಿಗೆ ಮಾತ್ರ ಲಾಭ. ಹಾಗಾದರೆ, ರಾಮನಗರ, ಚನ್ನಪಟ್ಟಣ, ಮದ್ದೂರು, ಶ್ರೀರಂಗಪಟ್ಟಣದವರಿಗೆ ಉಪಯೋಗ ಇದೆಯಾ? ಎಳ್ಳಷ್ಟೂ ಇಲ್ಲ. ಈ ಸತ್ಯವನ್ನು ನಾವೆಲ್ಲರೂ ಅರಿಯಬೇಕಿದೆ.2/15
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 12, 2023
ಇದನ್ನೂ ಓದಿ: ಕಿರಾಣಿ ಅಂಗಡಿಗಳು ನೀಡುವ ಸೇವೆ ಮಾಲ್’ಗಳು ನೀಡುವುದಿಲ್ಲ: ಸಿಎಂ ಬೊಮ್ಮಾಯಿ
‘ಕೆಲವರ ಪಾಲಿಗೆ ದೊಡ್ಡ ಎಟಿಎಂ ಆಗಿಬಿಟ್ಟ ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೆದ್ದಾರಿಯ ಅಸಲಿ ಅಂಶಗಳನ್ನು ಪಟ್ಟಿ ಮಾಡಿದರೆ ಕನ್ನಡಿಗರಿಗೆ ನಿರಾಶೆ, ನೋವು, ಹತಾಶೆ ಖಂಡಿತ. ಈ ಎಕ್ಸ್ ಪ್ರೆಸ್ ಹೆದ್ದಾರಿಯ ನಿಜವಾದ ಹಕ್ಕುದಾರರಾದ ರಾಮನಗರ, ಮಂಡ್ಯ ಜನರನ್ನು ಪರಾವಲಂಭಿಗಳನ್ನಾಗಿ ಮಾಡಿದ್ದಲ್ಲದೆ, ಭೂಮಿ ಕಳೆದುಕೊಂಡ ಬಡ ರೈತರು ಹೆದ್ದಾರಿ ಬದಿ ನಿಂತು ಭಿಕ್ಷೆ ಬೇಡುವಂಥ ದುಃಸ್ಥಿತಿಯನ್ನು ಕೇಂದ್ರ ಸರಕಾರ ಸೃಷ್ಟಿಸಿದೆ’ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ದಶಪಥ ಹೆದ್ದಾರಿ ಕಸಿದುಕೊಂಡ ಬದುಕಿಗೆ ಉತ್ತರದಾಯಿ ಯಾರು? ಅವರ ಜೀವನೋಪಾಯಕ್ಕೆ ಪರ್ಯಾಯ ದಾರಿ ಯಾವುದು? ಮಾನ್ಯ ಪ್ರಧಾನಮಂತ್ರಿಗಳು ಈ ಬಗ್ಗೆ ಜನರಿಗೆ ವಿಶ್ವಾಸ ತುಂಬಬೇಕು. ರೋಡ್ ಶೋ ಮಾಡುವುದಕ್ಕಿಂತ ತುರ್ತಾಗಿ ಮಾಡಬೇಕಿರುವುದು ಇದನ್ನು. ಅಬ್ಬರ, ಅರ್ಭಟದಲ್ಲಿ ಜನರ ಬದುಕು ಅವನತಿ ಆಗಬಾರದು ಎನ್ನುವುದು ನನ್ನ ಕಳಕಳಿ.13/15
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 12, 2023
‘ದಶಪಥ ಹೆದ್ದಾರಿ ಕಸಿದುಕೊಂಡ ಬದುಕಿಗೆ ಉತ್ತರದಾಯಿ ಯಾರು? ಅವರ ಜೀವನೋಪಾಯಕ್ಕೆ ಪರ್ಯಾಯ ದಾರಿ ಯಾವುದು? ಮಾನ್ಯ ಪ್ರಧಾನಮಂತ್ರಿಗಳು ಈ ಬಗ್ಗೆ ಜನರಿಗೆ ವಿಶ್ವಾಸ ತುಂಬಬೇಕು. ರೋಡ್ ಶೋ ಮಾಡುವುದಕ್ಕಿಂತ ತುರ್ತಾಗಿ ಮಾಡಬೇಕಿರುವುದು ಇದನ್ನು. ಅಬ್ಬರ, ಅರ್ಭಟದಲ್ಲಿ ಜನರ ಬದುಕು ಅವನತಿ ಆಗಬಾರದು ಎನ್ನುವುದು ನನ್ನ ಕಳಕಳಿ. ಹೊಸ ದಶಪಥ ಹೆದ್ದಾರಿ ಜನರ ಬದುಕು ಕಟ್ಟುವ ರಹದಾರಿಯಷ್ಟೇ ಆಗಲಿ. ಅದು ಬಿಟ್ಟು ಕೆಲವರ ಪಾಲಿನ ಎಟಿಎಂ ಆಗಿ, ಸ್ಥಳೀಯ ಜನರ ಬದುಕು ಕಸಿಯುವ ಹೆಮ್ಮಾರಿ ಆಗದಿರಲಿ’ ಎಂದು ಎಚ್ಡಿಕೆ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಮಹದಾಯಿ ನೀರು ಮಲಪ್ರಭಾ ನದಿಗೆ ಹರಿಸದೇ ವಿಶ್ರಮಿಸುವುದಿಲ್ಲ : ಸಿಎಂ ಬೊಮ್ಮಾಯಿ
ಕರ್ನಾಟಕ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ!
ಕರ್ನಾಟಕ ಕೇಂದ್ರದಿಂದ ಅತಿಹೆಚ್ಚು ನಿರ್ಲಕ್ಷ್ಯಕ್ಕೆ ಒಳಗಾದ ರಾಜ್ಯ!!
ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ, ಈ ನೀತಿಯ ಕೆನ್ನಾಲಿಗೆಗೆ ಸಿಕ್ಕಿ ಕನ್ನಡಿಗರು ಬೇಯುತ್ತಿದ್ದಾರೆ.
ಹೆದ್ದಾರಿ ಕನ್ನಡಿಗರದು, ಅದನ್ನು ಬಳಸುವ ಹಕ್ಕು ಕನ್ನಡಿಗರದು. ಕನ್ನಡಿಗರಿಗೆ ನ್ಯಾಯ ಬೇಕು.15/15— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 12, 2023
‘ಕರ್ನಾಟಕ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ! ಕರ್ನಾಟಕ ಕೇಂದ್ರದಿಂದ ಅತಿಹೆಚ್ಚು ನಿರ್ಲಕ್ಷ್ಯಕ್ಕೆ ಒಳಗಾದ ರಾಜ್ಯ!! ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ, ಈ ನೀತಿಯ ಕೆನ್ನಾಲಿಗೆಗೆ ಸಿಕ್ಕಿ ಕನ್ನಡಿಗರು ಬೇಯುತ್ತಿದ್ದಾರೆ. ಹೆದ್ದಾರಿ ಕನ್ನಡಿಗರದು, ಅದನ್ನು ಬಳಸುವ ಹಕ್ಕು ಕನ್ನಡಿಗರದು. ಕನ್ನಡಿಗರಿಗೆ ನ್ಯಾಯ ಬೇಕು’ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ