Karnataka : ಕರ್ನಾಟಕದ ಮಂಡ್ಯ ನಗರದ ರಸ್ತೆಗಳಲ್ಲಿ ನೂರಾರು ಜನರು ಸರತಿ ಸಾಲಿನಲ್ಲಿ ನಿಂತು ಪ್ರಧಾನಿ ಮೋದಿಯವರಿಗೆ ಪುಷ್ಪವೃಷ್ಟಿ ಮಾಡುವ ಮೂಲಕ ಸ್ವಾಗತಿಸಿದರು. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಉದ್ಘಾಟನಾ ಸಮಾರಂಭದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಬಡವರ ಬದುಕನ್ನು ಸುಗಮಗೊಳಿಸುವ ಕೆಲಸ ಮಾಡುತ್ತಿರುವಾಗ ಹಳೆಯ ಪಕ್ಷವು ಅವರ ಸಮಾಧಿಯನ್ನು ಅಗೆಯುವುದರಲ್ಲಿ ನಿರತವಾಗಿದೆ ಎಂದು ಹೇಳಿದರು. ಮೈಸೂರು-ಕುಶಾಲನಗರ 4 ಪಥದ ಹೆದ್ದಾರಿಗೂ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 92 ಕಿಲೋಮೀಟರ್ಗಳಷ್ಟು ವ್ಯಾಪಿಸಿರುವ ಈ ಯೋಜನೆಯನ್ನು ಸುಮಾರು 4,130 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.
Congress and their allies want to dig my grave, while I want to build top quality infrastructure for my fellow Indians.
They dream of digging my grave but they do not know that the people of India are my Suraksha Kavach. pic.twitter.com/II8SNNuA0t
— Narendra Modi (@narendramodi) March 12, 2023
ಇದನ್ನೂ ಓದಿ-R Dhruvanarayana Funeral : ಮಣ್ಣಲ್ಲಿ ಮಣ್ಣಾದ ಅಜಾತಶತ್ರು ಆರ್ ಧ್ರುವನಾರಾಯಣ
ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿಯ ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವರು. ಈ ಯೋಜನೆಗಳ ಒಟ್ಟು ಅಂದಾಜು ವೆಚ್ಚ ಸುಮಾರು 520 ಕೋಟಿ ರೂ. ಮೂಲಸೌಕರ್ಯ ಯೋಜನೆಗಳ ಅಭಿವೃದ್ಧಿಯ ವೇಗವು ದೇಶದಾದ್ಯಂತ ವಿಶ್ವ ದರ್ಜೆಯ ಸಂಪರ್ಕವನ್ನು ಖಚಿತಪಡಿಸಿಕೊಳ್ಳಲು ಪ್ರಧಾನಿಯವರ ದೂರದೃಷ್ಟಿಗೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಹೇಳಿದೆ. ಅಲ್ಲದೇ ಕರ್ನಾಟಕದಲ್ಲಿ ಈ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಪ್ರಧಾನಿ ತಿಳಿಸಿದರು.
ಇದನ್ನೂ ಓದಿ-ಮೋದಿಯವರೇ ಪೇಟಿಎಂ ಲೂಟಿಯಲ್ಲಿ ನಿಮಗೂ ಪಾಲಿದೆಯೇ...?; ಸಿದ್ದರಾಮಯ್ಯ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.