ಈ ವಿಚಾರವಾಗಿ ಸೋಮವಾರ ನ್ಯಾಯಾಲಯ ಮಾಡಾಳ್ ಅವರನ್ನು ಮೂರುದಿನಗಳ ಕಾಲ ಲೋಕಾಯುಕ್ತ ಪೋಲಿಸರ ವಶಕ್ಕೆ ಒಪ್ಪಿಸಿದೆ. ಈ ಹಿಂದೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಚನ್ನಗಿರಿಯ ಬಿಜೆಪಿ ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
40 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೋಲಿಸರು ಪ್ರಶಾಂತ್ ಮಾಡಾಳ್ರನ್ನು ಬಂಧಿಸಿದ್ದರು. ಬಳಿಕ ಅವರ ಮನೆಗೆ ಹೋಗಿ ನೋಡಿದಾಗ 6 ಕೋಟಿ ರೂ. ಅಕ್ರಮ ಹಣ ಪತ್ತೆಯಾಗಿತ್ತು. ಈ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮೊದಲ ಆರೋಪಿ ಎಂದು ಲೋಕಾಯುಕ್ತರು ಎಫ್ಐಆರ್ ದಾಖಲು ಮಾಡಿದ್ದಾರೆ. ಕರ್ನಾಟಕ ಹೈಕೋರ್ಟ್ ಶಾಸಕರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ.
ಇದನ್ನೂ ಓದಿ-Mandya: ನೆಚ್ಚಿನ ನಾಯಕನಿಗೆ ಹಾರ ಹಾಕುವ ಬರದಲ್ಲಿ ಅಭಿಮಾನಿಗಳಿಂದ ಎಡವಟ್ಟು!
ರಾಸಾಯನಿಕ ಪೊರೈಕೆ ಮಾಡುವ ಟೆಂಡರ್ ಗೆ ಪ್ರಶಾಂತ್ ಮಾಡಾಳ್ 80 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದರು. 40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತರ ಕೈಗೆ ಸಾಕ್ಷಿ ಸಮೇತವಾಗಿ ಸಿಕ್ಕಿಬಿದ್ದಿದ್ದಾರೆ. ಪ್ರಶಾಂತ್ ಮಾಡಾಳ್ ಜಲಮಂಡಳಿ ಮುಖ್ಯ ಲೆಕ್ಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದವರು, ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎನ್ನುವ ಆರೋಪವು ಅವರ ಮೇಲಿತ್ತು.
ಲಂಚ ಪ್ರಕರಣ ಹೊರಗೆ ಬಂದಾಗ ವಿರೂಪಾಕ್ಷಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಪ್ರಶಾಂತ್ ಮಾಡಾಳ್ ಅವರಿಗೆ ಮದ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಆದರೆ ಈಗ ಅದೇ ನ್ಯಾಯಾಲಯ ಈಗ ಮಾಡಾಳ್ರನ್ನು ಲೋಕಾಯುಕ್ತ ಪೋಲಿಸರ ವಶಕ್ಕೆ ಒಪ್ಪಸಿದೆ.
ಇದನ್ನೂ ಓದಿ-ಮೊಹಮ್ಮದ್ ಶಫಿ ಫೇಸ್ಬುಕ್ ಪೇಜ್ನಲ್ಲಿದ್ದ ಈ ವಿಡಿಯೋ ಫುಲ್ ವೈರಲ್ ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.