Rishabh Shetty in United Nations: ಸ್ಯಾಂಡಲ್‌ವುಡ್ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಈಗಾಗಲೇ ಕನ್ನಡ ಚಿತ್ರರಂಗಕ್ಕೆ ಹೆಮ್ಮೆ, ಕೀರ್ತಿಯನ್ನು ತಂದಿದ್ದಾರೆ. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ವಿಶ್ವಸಂಸ್ಥೆಯಲ್ಲಿ ಭಾರತವನ್ನು ಪ್ರತಿನಿಧಿಸುವುದಲ್ಲದೆ, ಕನ್ನಡದಲ್ಲೇ ಮಾತನಾಡಲಿದ್ದಾರೆ. ಈ ಬಗ್ಗೆ ಸಚಿವ ಮುರುಗೇಶ್ ನಿರಾಣಿ ಅವರು ಟ್ವೀಟ್ ಮಾಡಿದ್ದು, ಕನ್ನಡಿಗರು ಸಂತಸದಲ್ಲಿ ಕುಣಿದಾಡುತ್ತಿದ್ದಾರೆ.
ಇದನ್ನೂ ಓದಿ: ನಾನು ಬದುಕಿದ್ದೇ ಚಿರಂಜೀವಿ ಅಣ್ಣನಿಂದ..! ನಟನ ಕಷ್ಟಕ್ಕೆ ಮೆಗಾಸ್ಟಾರ್ ನೆರವು
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಟ್ವೀಟ್’ನಲ್ಲಿ “ಕಾಂತಾರ ಖ್ಯಾತಿಯ ಸುಪ್ರಸಿದ್ಧ ನಟ, ನಿರ್ದೇಶಕ, ಕರ್ನಾಟಕದ ಸುಪುತ್ರ ರಿಷಬ್ ಶೆಟ್ಟಿ ಅವರು ಪ್ರತಿಷ್ಠಿತ ವಿಶ್ವಸಂಸ್ಥೆಯಲ್ಲಿ ನಮ್ಮ ದೇಶವನ್ನು ಪ್ರತಿನಿಧಿಸುತ್ತಿದ್ದು, ಎಂದಿನಂತೆ ಅವರು ಕನ್ನಡದಲ್ಲೇ ಮಾತನಾಡಲಿದ್ದಾರೆ ಎಂಬುದು ಕನ್ನಡಿಗರಾದ ನಮಗೆ ಹೆಮ್ಮೆಯ ವಿಷಯವಾಗಿದೆ. ಅಭಿನಂದನೆಗಳು ರಿಷಬ್ ಶೆಟ್ಟಿ” ಎಂದು ಬರೆದುಕೊಂಡಿದ್ದಾರೆ.
ಕಾಂತಾರ ಖ್ಯಾತಿಯ ಸುಪ್ರಸಿದ್ಧ ನಟ, ನಿರ್ದೇಶಕ, ಕರ್ನಾಟಕದ ಸುಪುತ್ರ ರಿಷಬ್ ಶೆಟ್ಟಿ ಅವರು ಪ್ರತಿಷ್ಠಿತ ವಿಶ್ವಸಂಸ್ಥೆಯಲ್ಲಿ ನಮ್ಮ ದೇಶವನ್ನು ಪ್ರತಿನಿಧಿಸುತ್ತಿದ್ದು, ಎಂದಿನಂತೆ ಅವರು ಕನ್ನಡದಲ್ಲೇ ಮಾತನಾಡಲಿದ್ದಾರೆ ಎಂಬುದು ಕನ್ನಡಿಗರಾದ ನಮಗೆ ಹೆಮ್ಮೆಯ ವಿಷಯವಾಗಿದೆ.
ಅಭಿನಂದನೆಗಳು @shetty_rishab pic.twitter.com/JdV9qSY8rw
— Dr. Murugesh R Nirani (@NiraniMurugesh) March 15, 2023
ಕಾಂತಾರ ಚಿತ್ರದ ಮೂಲಕ ಕನ್ನಡ ಚಲನಚಿತ್ರೋದ್ಯಮವನ್ನು ಬಾನೆತ್ತರಕ್ಕೆ ಕೊಂಡೊಂಯ್ದ ಕೀರ್ತಿ ರಿಷಬ್ ಶೆಟ್ಟಿ ಅವರಿಗೆ ಸಲ್ಲುತ್ತದೆ. ಇತ್ತೀಚೆಗೆ ದಾದಾಸಾಹೇಬ್ ಫಾಲ್ಕೆ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ಸ್ 2023ರಲ್ಲಿ ಅತ್ಯಂತ ಭರವಸೆಯ ನಟ ಪ್ರಶಸ್ತಿಯನ್ನು ಸಹ ರಿಷಬ್ ಗೆದ್ದಿದ್ದಾರೆ. ಕಾಂತಾರ ಸಿನಿಮಾದಲ್ಲಿ ಅವರ ಅಭಿನಯ ಕಂಡು ಇಡೀ ವಿಶ್ವವೇ ನಿಬ್ಬೆರಗಾಗಿದೆ.
ಇತ್ತೀಚೆಗೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದ ಸಂದರ್ಭದಲ್ಲಿ ರಿಷಬ್ ಶೆಟ್ಟಿ ಸೇರಿದಂತೆ ಕನ್ನಡ ಸಿನಿರಂಗದ ಕಲಾವಿದರು ರಾಜಭವನದಲ್ಲಿ ಅವರೊಂದಿಗೆ ಮಾತುಕತೆ ನಡೆಸಿದ್ದರು. ಸದ್ಯ ವರದಿಯ ಪ್ರಕಾರ, ರಿಷಬ್ ಶೆಟ್ಟಿ ಕಾಂತಾರ -2 ಗಾಗಿ ಸಜ್ಜಾಗುತ್ತಿದ್ದಾರೆ. ಇದು 1900 ರ ದಶಕದ ಆರಂಭದ ಕಥೆಯನ್ನು ಒಳಗೊಂಡಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ:Nani Dasara movie: ರವಿಮಾಮನ ಮನೆಗೆ ʼದಸರಾʼ ಮಾಡೋಕೆ ಬಂದ ನಾನಿ..! ಫೋಟೋಸ್ ನೋಡಿ
ಇನ್ನು ಸಿನಿಮಾ ಮುಗಿದ ಬಳಿಕ ಸುಮ್ಮನಿರದ ರಿಷಬ್ ಶೆಟ್ಟಿ, ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಅರಣ್ಯ ಪ್ರದೇಶದ ಸುತ್ತಮುತ್ತ ವಾಸಿಸುತ್ತಿರುವ ರಾಜ್ಯದ ಜನರಿಗೆ ಉಂಟಾಗಬಹುದಾದ ಸಮಸ್ಯೆಗಳ ಪಟ್ಟಿಯನ್ನು ಸಲ್ಲಿಸಿದ್ದರು. ಮುಖ್ಯಮಂತ್ರಿಗಳು ತಮ್ಮ ಕಳವಳಗಳಿಗೆ ಶೀಘ್ರವಾಗಿ ಸ್ಪಂದಿಸಿದ್ದಾರೆ ಮತ್ತು ಕ್ರಿಯಾ ಯೋಜನೆಗೆ ಭರವಸೆ ನೀಡಿದ್ದಾರೆ ಎಂದು ಅವರು ಅದೇ ಸಂದರ್ಭದಲ್ಲಿ ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.