ಮೈಸೂರು: ಬಹುಜನ ಸಮಾಜ ಪಕ್ಷ (ಬಿಎಸ್ಪಿ) ನಾಯಕ ಮತ್ತು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್. ಮಹೇಶ್ ಸಮ್ಮಿಶ್ರ ಸರ್ಕಾರದ ಮೈತ್ರಿಯಿಂದ ಪಕ್ಷ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಶಾಸಕ ಎನ್. ಮಹೇಶ್, "ನನಗೆ ಬೆಂಬಲ ಹಿಂತೆಗೆದುಕೊಳ್ಳುವ ಯೋಜನೆ ಇದ್ದಿದ್ದರೆ ನಾನು ಮೈಸೂರಿನಲ್ಲಿರುತ್ತಿರಲಿಲ್ಲ, ದೆಹಲಿ ಅಥವಾ ಮುಂಬೈನಲ್ಲಿರುತ್ತಿದ್ದೆ ಎಂದು ಹೇಳಿದರು.
ಇದೇ ವೇಳೆ ಲೋಕಸಭಾ ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿದ ಮಹೇಶ್, ಬಿಎಸ್ಪಿ ಲೋಕಸಭೆ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.