ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ

ಅನಾರೋಗ್ಯದಿಂದ ಬಳಲುತ್ತಿದ್ದ ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶರಾಗಿದ್ದಾರೆ. 

Written by - Ranjitha R K | Last Updated : Mar 23, 2023, 11:05 AM IST
  • ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ
  • ಭಟ್ಟಾರಕ ಶ್ರೀಗಳ ಮೂಲ ಹೆಸರು ರತ್ನವರ್ಮ
  • ಶಿಕ್ಷಣ ಕ್ಷೇತ್ರಕ್ಕೆ ಇವರ ಸೇವೆ ಅಪಾರ
 ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ  title=

ಹಾಸನ : ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮುಂಜಾನೆ  ಇಹಲೋಕ ತ್ಯಜಿಸಿದ್ದಾರೆ. 

1949ರ ಮೇ 3ರಂದು ಜನಿಸಿದ ಚಾರುಕೀರ್ತಿ ಭಟ್ಟಾರಕ ಶ್ರೀಗಳ ಮೂಲ ಹೆಸರು  ರತ್ನವರ್ಮ. ಇವರು ಮೂಲತಃ ಕಾರ್ಕಳದ ವರಂಗ ಗ್ರಾಮದವರು. ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ತತ್ವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದ ಶ್ರೀಗಳು ಮೈಸೂರು ಯೂನಿವರ್ಸಿಟಿಯಲ್ಲಿ ಇತಿಹಾಸ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಕೂಡಾ ಪಡೆದಿದ್ದರು. ಮಾತ್ರವಲ್ಲ ಸಂಸ್ಕೃತ ಹಾಗೂ ಕನ್ನಡ ಭಾಷೆಯಲ್ಲಿ ಕೂಡಾ ಪಾಂಡಿತ್ಯ ಹೊಂದಿದ್ದರು. 

ಇದನ್ನೂ ಓದಿ : ಅಕ್ರಮ ಹಣ ಸಾಗಾಟ, ಅಂದಾಜು 1.90 ಕೋಟಿ ರೂ. ವಶ

1970ರಲ್ಲಿ ಮಠದ ಪೀಠಾಧಿಪತಿಗಳಾಗಿ ನೇಮಕಗೊಂಡಿದ್ದ ಶ್ರೀಗಳು ಅಪಾರ ಭಕ್ತವೃಂದವನ್ನು  ಹೊಂದಿದ್ದಾರೆ. ಶ್ರೀಗಳು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಕೂಡಾ ಅಪಾರ. ಇವರು ಪಾಲಿಟೆಕ್ನಿಕ್, ಇಂಜಿನಿಯರಿಂಗ್, ನರ್ಸಿಂಗ್, ಪ್ರಾಕೃತ ವಿವಿ ಸ್ಥಾಪನೆ ಮಾಡಿದ್ದರು. ಇವರು 12 ವರ್ಷ ವಾಹನ ಸಂಚಾರವನ್ನೇ ಮಾಡಿಲ್ಲ, ಇಲ್ಲಿಯವರೆಗೆ ಮೊಬೈಲ್ ಬಳಸಿಲ್ಲ ಅನ್ನುವುದು ವಿಶೇಷ.  1981ರ ಮಹಾಮಸ್ತಕಾಭಿಷೇಕ ಯಶಸ್ವಿಯಾಗಿ ನೆರವೇರಿಸಿರುವ ಕಾರಣಕ್ಕಾಗಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಇವರಿಗೆ ಕರ್ಮಯೋಗಿ ಎಂಬ ಬಿರುದನ್ನು ನೀಡಿ ಗೌರವಿಸಿದ್ದರು. 

ಇದನ್ನೂ ಓದಿ : ಮಾಜಿ ಸಿಎಂ ಎಸ್. ಎಂ.ಕೃಷ್ಣಾಗೆ ಪದ್ಮವಿಭೂಷಣ ಪ್ರಶಸ್ತಿ ಪ್ರಧಾನ

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News