ತಂದೆಯನ್ನು ಮರೆತಿದ್ದಕ್ಕೆ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ ಅನಂತ್ ಕುಮಾರ್ ಪುತ್ರಿ ವಿಜೇತಾ..!  

ಇತ್ತೀಚಿಗಷ್ಟೇ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಗೆ ನಟ ಅಂಬರೀಷ್ ಅವರ ಹೆಸರು ಹಾಗೂ 12 ಕಿ.ಮೀ. ಉದ್ದದ ಹೊರವರ್ತುಲ ರಸ್ತೆಗೆ ಪುನೀತ್ ರಾಜಕುಮಾರ್ ಹೆಸರು, ಜಯನಗರದ ರಸ್ತೆಗೆ ಖಳನಾಯಕ ವಜ್ರಮುನಿ ಅವರ ಹೆಸರನ್ನು ನಾಮಕರಣ ಮಾಡಿರುವ ಬಗ್ಗೆ ಪತ್ರಿಕಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.

Written by - Zee Kannada News Desk | Last Updated : Mar 28, 2023, 05:51 PM IST
  • ಅಪ್ಪಾ 1987ರಲ್ಲಿ ಔಪಚಾರಿಕವಾಗಿ ಬಿಜೆಪಿ ಸೇರಿದರು ಮತ್ತು ಕೊನೆಯ ಉಸಿರು ಇರುವವರೆಗೂ ಬಿಜೆಪಿಗಾಗಿ ದುಡಿದರು
  • ಅವರನ್ನು ಮರೆಯುತ್ತಿರುವ ಪಕ್ಷಕ್ಕೆ ಆತ್ಮಾವಲೋಕನ ಅಗತ್ಯ
  • ಅವರು ಬಹಿರಂಗವಾಗಿ ಬಿಜೆಪಿ ವಿರುದ್ಧ ಅಸಮಾಧಾನವನ್ನು ಹೊರಹಾಕಿದ್ದಾರೆ.
ತಂದೆಯನ್ನು ಮರೆತಿದ್ದಕ್ಕೆ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ ಅನಂತ್ ಕುಮಾರ್ ಪುತ್ರಿ ವಿಜೇತಾ..!   title=

ಬೆಂಗಳೂರು: ತಮ್ಮ ತಂದೆಯನ್ನು ಪಕ್ಷ ಮತ್ತು ಸರ್ಕಾರ ಮರೆತಿರುವುದಕ್ಕೆ ದಿವಂಗತ ಅನಂತಕುಮಾರ ಪುತ್ರಿ ವಿಜೇತಾ ಈಗ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Bollywood Actress: ಮದುವೆ ಬಳಿಕ ಕುಟುಂಬಕ್ಕಾಗಿ ಸಿನಿರಂಗವನ್ನೇ ತ್ಯಜಿಸಿದ ನಟಿಯರು; ಈಗ ವಿದೇಶದಲ್ಲಿ ಸೆಟಲ್!

ಈ ಕುರಿತಾಗಿ ಪತ್ರಿಕೆಯೊಂದರ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಅವರು "ಅಪ್ಪಾ 1987ರಲ್ಲಿ ಔಪಚಾರಿಕವಾಗಿ ಬಿಜೆಪಿ ಸೇರಿದರು ಮತ್ತು ಕೊನೆಯ ಉಸಿರು ಇರುವವರೆಗೂ ಬಿಜೆಪಿಗಾಗಿ ದುಡಿದರು.ಉದ್ಘಾಟನಾ ಕಾರ್ಯಕ್ರಮಗಳು, ರಸ್ತೆಗಳು, ರೈಲು ಮಾರ್ಗಗಳಲ್ಲಿ ಅವರ ಹೆಸರಿಡುವ ಮೂಲಕ ಅವರ ಕೊಡುಗೆಗಳನ್ನು ಗುರುತಿಸದಿರುವುದು ಕ್ಷುಲ್ಲಕವಾಗಿದೆ. ಅವರು ಲಕ್ಷಾಂತರ ಜನರ ಹೃದಯದಲ್ಲಿ ಜೀವಂತವಾಗಿದ್ದಾರೆ.ಅವರನ್ನು ಮರೆಯುತ್ತಿರುವ ಪಕ್ಷಕ್ಕೆ ಆತ್ಮಾವಲೋಕನ ಅಗತ್ಯ" ಎಂದು ಟ್ವೀಟ್ ಮಾಡುವ ಮೂಲಕ ಅವರು ಬಹಿರಂಗವಾಗಿ ಬಿಜೆಪಿ ವಿರುದ್ಧ ಅಸಮಾಧಾನವನ್ನು ಹೊರಹಾಕಿದ್ದಾರೆ.

ಇದನ್ನೂ ಓದಿ : ಈ ಅರಮನೆಯಲ್ಲಿದ್ದ ರಾಣಿಯರಿಗೆಂದೇ ಕಾಯುತ್ತಿದ್ದರು ಬ್ರಿಟಿಷರು; ಇವರನ್ನು ಆ ರೀತಿ ತೃಪ್ತಿಪಡಿಸಲು 20 ನಿಮಿಷ ಬೇಕಿತ್ತಂತೆ…!

ಇತ್ತೀಚಿಗಷ್ಟೇ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಗೆ ನಟ ಅಂಬರೀಷ್ ಅವರ ಹೆಸರು ಹಾಗೂ 12 ಕಿ.ಮೀ. ಉದ್ದದ ಹೊರವರ್ತುಲ ರಸ್ತೆಗೆ ಪುನೀತ್ ರಾಜಕುಮಾರ್ ಹೆಸರು, ಜಯನಗರದ ರಸ್ತೆಗೆ ಖಳನಾಯಕ ವಜ್ರಮುನಿ ಅವರ ಹೆಸರನ್ನು ನಾಮಕರಣ ಮಾಡಿರುವ ಬಗ್ಗೆ ಪತ್ರಿಕಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.ಈ ಹಿನ್ನೆಲೆಯಲ್ಲಿ ಪುತ್ರಿ ವಿಜೇತಾ ಅನಂತ್ ಕುಮಾರ್ ಪಕ್ಷವನ್ನು ಕಟ್ಟಿ ಬೆಳೆಸಿದ ತಮ್ಮ ತಂದೆಯನ್ನು ಬಿಜೆಪಿ  ಪಕ್ಷ ಮರೆತಿರುವುದಕ್ಕೆ ಅವರು ಬೇಸರ ವ್ಯಕ್ತಪಡಿಸಿ ಪಕ್ಷವು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News