ನಿನ್ನೆಯಿಂದ ಇಂಡಿಯನ್ ಪ್ರಿಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆರಂಭಗೊಳ್ಳಲಿದ್ದು, ಬೆಂಗಳೂರು ಕ್ರಿಕೆಟ್ ಅಭಿಮಾನಿಗಳಿಗೆ 'ನಮ್ಮ ಮೆಟ್ರೋ' ಖುಷಿ ಸುದ್ದಿಯೊಂದನ್ನು ನೀಡಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಬೆಂಗಳೂರಿನಲ್ಲಿ ರಾತ್ರಿ ಪಂದ್ಯಾವಳಿ ವೀಕ್ಷಣೆಗೆ ಬರುವವರಿಗೆ ಅನುಕೂಲಕ್ಕಾಗಿ ಮೆಟ್ರೋ ರೈಲು ಸಂಚಾರವನ್ನು ತಡರಾತ್ರಿ 1.30 ಗಂಟೆವರೆಗೂ ವಿಸ್ತರಣೆ ಮಾಡಿ ಆದೇಶ ಹೊರಡಿದೆ.