ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ತತ್ತರಿಸಿ ಹೋಗಿರುವ ಬಿಜೆಪಿ ನಾಯಕರು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ಕಾಂಗ್ರೆಸ್ ಅಭ್ಯರ್ಥಿಗಳು, ನಾಯಕರು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಬಗ್ಗೆ ಒಲವು ಹೊಂದಿರುವರ ಮೇಲೆ ದಾಳಿ ಮಾಡಿ ಬೆದರಿಸಲು ಕೇಂದ್ರ ಬಿಜೆಪಿ ಸರ್ಕಾರ ಸಾವಿರಕ್ಕೂ ಹೆಚ್ಚು ಐಟಿ, ಇಡಿ ಮತ್ತು ಸಿಬಿಐ ಅಧಿಕಾರಿಗಳನ್ನು ಕರ್ನಾಟಕಕ್ಕೆ ಕಳುಹಿಸಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳು, ನಾಯಕರು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಬಗ್ಗೆ ಒಲವು ಹೊಂದಿರುವರ ಮೇಲೆ ದಾಳಿ ಮಾಡಿ ಬೆದರಿಸಲು ಕೇಂದ್ರ @BJP4India ಸರ್ಕಾರ ಸಾವಿರಕ್ಕೂ ಹೆಚ್ಚು ಐ.ಟಿ, ಇ.ಡಿ ಮತ್ತು ಸಿಬಿಐ ಅಧಿಕಾರಿಗಳನ್ನು ಕರ್ನಾಟಕಕ್ಕೆ ಕಳುಹಿಸಿದೆ. 1/3
— Siddaramaiah (@siddaramaiah) April 4, 2023
ಇದನ್ನೂ ಓದಿ: ಗುರುವಾರದೊಳಗೆ ಜೆಡಿಎಸ್ 2ನೇ ಪಟ್ಟಿ: ಹೆಚ್.ಡಿ.ಕುಮಾರಸ್ವಾಮಿ
‘ಬಿಜೆಪಿ ನಾಯಕರು ಸೋಲಿನ ಭೀತಿಯಿಂದ ತತ್ತರಿಸಿಹೋಗಿದ್ದಾರೆ. ಅವರ ಪಕ್ಷದೊಳಗೆ ಜಗಳ-ಬಂಡಾಯಗಳು ಹೆಚ್ಚಿವೆ, ಅವರಲ್ಲಿ ಹಲವಾರು ಮಂದಿ ನಮ್ಮ ಪಕ್ಷ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಇದರಿಂದ ಭೀತಿಗೀಡಾಗಿರುವ ಬಿಜೆಪಿ ನಾಯಕರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ದಾಳಿಗಿಳಿದಿದ್ದಾರೆ’ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಬಿಜೆಪಿ ನಾಯಕರು ಸೋಲಿನ ಭೀತಿಯಿಂದ ತತ್ತರಿಸಿಹೋಗಿದ್ದಾರೆ. ಅವರ ಪಕ್ಷದೊಳಗೆ ಜಗಳ-ಬಂಡಾಯಗಳು ಹೆಚ್ಚಿವೆ, ಅವರಲ್ಲಿ ಹಲವಾರು ಮಂದಿ ನಮ್ಮ ಪಕ್ಷ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಇದರಿಂದ ಭೀತಿಗೀಡಾಗಿರುವ @BJP4India ನಾಯಕರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ದಾಳಿಗಿಳಿದಿದ್ದಾರೆ. 2/3
— Siddaramaiah (@siddaramaiah) April 4, 2023
‘ಬಿಜೆಪಿ ಸರ್ಕಾರದ ಈ ಷಡ್ಯಂತ್ರವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಹೋರಾಟದ ಮೂಲಕವೇ ಬಿಜೆಪಿ ಪಕ್ಷದ ಈ ದಮನಕಾರ್ಯವನ್ನು ಎದುರಿಸುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಭೀತಿಗೀಡಾಗದೆ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಬೇಕು’ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಬಿಜೆಪಿ ಸರ್ಕಾರದ ಈ ಷಡ್ಯಂತ್ರವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಹೋರಾಟದ ಮೂಲಕವೇ @BJP4India ಪಕ್ಷದ ಈ ದಮನಕಾರ್ಯವನ್ನು ಎದುರಿಸುತ್ತೇವೆ.
ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಭೀತಿಗೀಡಾಗದೆ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಬೇಕು. 3/3
— Siddaramaiah (@siddaramaiah) April 4, 2023
ಇದನ್ನೂ ಓದಿ: ಕಾಂಗ್ರೆಸ್ ಗೆಲ್ಲುವ ಮುನ್ಸೂಚನೆ ಇಲ್ಲದಿದ್ರೂ ಸಿದ್ದರಾಮಯ್ಯಗೆ ಸಿಎಂ ಕನವರಿಕೆ ನಿಂತಿಲ್ಲ: ಬಿಜೆಪಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.