ಬೆಂಗಳೂರು: ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಬಿಜೆಪಿಯ ಸಂಸದೀಯ ಮಂಡಳಿಯು ಇಂದು ನವದೆಹಲಿಯಲ್ಲಿ ಸಭೆ ನಡೆಸಲಿದೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ. ಪಕ್ಷದ ರಾಜ್ಯ ಚುನಾವಣಾ ಸಮಿತಿಯು ಚುನಾವಣೆಗೆ ಪ್ರತಿ ಕ್ಷೇತ್ರಕ್ಕೆ 3 ಹೆಸರನ್ನು ಶಾರ್ಟ್‌ಲಿಸ್ಟ್ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಮಾತನಾಡಿ, ‘2018ರ ಚುನಾವಣೆಯಲ್ಲಿ ಮಾಡಿದ ತಪ್ಪನ್ನು ಪುನರಾವರ್ತಿಸಬೇಡಿ. ಮೇ 10ರ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಒದಗಿಸುವಂತೆ ಕರ್ನಾಟಕದ ಜನರಿಗೆ ಮನವರಿಕೆ ಮಾಡಬೇಕು. ಕರ್ನಾಟಕದ ಜನತೆಯ ಕಲ್ಯಾಣಕ್ಕೆ ಬದ್ಧವಾಗಿರುವ ಮತ್ತು ಉತ್ತಮ ಆಡಳಿತ ನೀಡುವ ಬಲಿಷ್ಠ ಮತ್ತು ಏಕಪಕ್ಷೀಯ ಸರ್ಕಾರ
#WATCH | Delhi: Today an important meeting is to be held under the guidance of JP Nadda. During this meeting, discussion over 224 seats will be done and tomorrow (meeting of) Parliamentary board will be held: Karnataka CM B Bommai pic.twitter.com/VnA9AmLEMV
— ANI (@ANI) April 8, 2023
ವನ್ನು ಆಯ್ಕೆ ಮಾಡುವಂತೆ’ ಜನರಲ್ಲಿ ಮನವಿ ಮಾಡಿಕೊಂಡರು.
ಇದನ್ನೂ ಓದಿ: "ಈ ಬಾರಿ ಪರಮೇಶ್ವರ ಅವರನ್ನು ಸೋಲಿಸುತ್ತೇವೆ"
ಸುದ್ದಿಗಾರರ ಜೊತೆಗೆ ಮಾತನಾಡಿದ ಸಿಎಂ ಬೊಮ್ಮಾಯಿ, ‘ಇಂದು ಜೆಪಿ ನಡ್ಡಾರ ಮಾರ್ಗದರ್ಶನದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಈ ಸಭೆಯಲ್ಲಿ 224 ಸ್ಥಾನಗಳ ಕುರಿತು ಚರ್ಚೆ ನಡೆಯಲಿದೆ’ ಎಂದು ಹೇಳಿದ್ದಾರೆ.
ಮತ್ತೊಂದೆಡೆ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ 2ನೇ ಪಟ್ಟಿ ಘೋಷಣೆಯಾದ ಬೆನ್ನಲ್ಲಿಯೇ ಕರ್ನಾಟಕ ಕಾಂಗ್ರೆಸ್‌ನ ಒಂದು ವಿಭಾಗದಲ್ಲಿ ಅಸಮಾಧಾನವು ಹುದುಗಿದೆ. ಕೆಲವು ಟಿಕೆಟ್ ಆಕಾಂಕ್ಷಿಗಳು ಬಹಿರಂಗವಾಗಿ ಕಾಂಗ್ರೆಸ್ ಹಿರಿಯ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಲವರು ಪಕ್ಷವನ್ನು ತೊರೆಯಲು ನಿರ್ಧರಿಸಿದ್ದರೆ, ಇನ್ನೂ ಕೆಲವರು ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ಕ್ರಮದ ಬಗ್ಗೆ ನಿರ್ಧರಿಸುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ: Online Medicine: ಆನ್‌ಲೈನ್‌ನಲ್ಲಿ ಔಷಧಿ ಖರೀದಿಸುವವರೇ ಎಚ್ಚರ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.