ಬೆಂಗಳೂರು: ಕಾಂಗ್ರೆಸ್ ಈ ಬಾರಿ 130ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆಯಲ್ಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆಗೆ ಮಾತನಾಡಿರುವ ಅವರು, ರಾಜ್ಯದ ಜನರು ಕಾಂಗ್ರೆಸ್ ಪರ ಹೆಚ್ಚಿನ ಒಲವು ಹೊಂದಿದ್ದಾರೆ. 40% ಬಿಜೆಪಿ ಸರ್ಕಾರವನ್ನು ಸೋಲಿಸುವ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಲಿದ್ದಾರೆಂದು ಹೇಳಿದ್ದಾರೆ.
ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆ ತಮ್ಮ ಕೊನೆಯ ಚುನಾವಣಾ ಸಮರವಾಗಿದೆ. ಆ ಬಳಿಕ ನಾನು ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ನನ್ನ ಹುಟ್ಟೂರು ಈ ಕ್ಷೇತ್ರದ ವ್ಯಾಪ್ತಿಗೆ ಬರುವುದರಿಂದ ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ, ಇದು ನನ್ನ ಕೊನೆಯ ಚುನಾವಣೆ, ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ ಎಂದು ಅವರು ಹೇಳಿದರು.
ಇದನ್ನೂ ಓದಿ: Karnataka elections: ‘ಕೇಸರಿ’ ಕಲಿಗಳನ್ನು ಅಂತಿಮಗೊಳಿಸಲು ಇಂದು ಬಿಜೆಪಿ ಸಂಸದೀಯ ಮಂಡಳಿ ಸಭೆ
ನಾನು ಇನ್ನೂ ಸಕ್ರಿಯ ರಾಜಕಾರಣದಲ್ಲಿರುತ್ತೇನೆ, ಆದರೆ ಈ ಚುನಾವಣೆಯ ನಂತರ ದೆಹಲಿಯಲ್ಲಿ ಯಾವುದೇ ಹುದ್ದೆಗಳನ್ನು ಸ್ವೀಕರಿಸುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಪಕ್ಷದ ಹೈಕಮಾಂಡ್ ಅನುಮತಿ ನೀಡಿರುವುದರಿಂದ ನಾನು ವರುಣಾದಿಂದ ಸ್ಪರ್ಧಿಸುತ್ತಿದ್ದೇನೆ. ನಾನು ಸ್ಪರ್ಧಿಸಲು ಆಸಕ್ತಿ ಹೊಂದಿಲ್ಲ, ಆದರೆ ಕೋಲಾರದ ಜನರು ನಾನು ಅಲ್ಲಿಂದ ಸ್ಪರ್ಧಿಸಲು ಬಯಸುತ್ತಿದ್ದಾರೆ ಎಂದು ಅವರು ಹೇಳಿದರು.
ಇದನ್ನೂ ಓದಿ: ಅಮುಲ್ ವಿಚಾರದಲ್ಲಿ ರಾಜಕಾರಣ ಸಲ್ಲದು: ಸಿಎಂ ಬಸವರಾಜ್ ಬೊಮ್ಮಾಯಿ
ಡಿಕೆಶಿ ಜೊತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ!
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೊಂದಿಗಿನ ನನ್ನ ಸಂಬಂಧವು ಸೌಹಾರ್ದಯುತವಾಗಿದೆ. ಅವರ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲವೆಂದು ಸಿದ್ದರಾಮಯ್ಯ ಹೇಳಿದ್ದಾರೆ.
‘ಡಿಕೆ ಶಿವಕುಮಾರ್ ಅವರೊಂದಿಗಿನ ನನ್ನ ಸಂಬಂಧವು ಸೌಹಾರ್ದಯುತವಾಗಿದೆ, ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳಿವೆ, ಆದರೆ ಅದು ಪಕ್ಷದ ಹಿತಾಸಕ್ತಿಗೆ ಹಾನಿಯಾಗುವುದಿಲ್ಲ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.