ಮದುವೆಯಲ್ಲಿ ಮ್ಯೂಸಿಕ್ ಸ್ಥಗಿತಗೊಳಿಸಿದ್ದಕ್ಕೆ ಪೊಲೀಸ್ ಠಾಣೆಯಲ್ಲಿ ವಧು, ವರನ ಪ್ರತಿಭಟನೆ

ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ತಮ್ಮ ಮದುವೆಯಲ್ಲಿ ಡಿಜೆ ಸಂಗೀತ ನುಡಿಸುವುದನ್ನು ಕೆಲವು ಪೊಲೀಸರು ತಡೆದ ನಂತರ ದಂಪತಿಗಳು ಪೊಲೀಸ್ ಠಾಣೆಯಲ್ಲಿ ಧರಣಿ ಪ್ರತಿಭಟನೆ ನಡೆಸಿದರು ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ ಪೊಲೀಸ್ ಠಾಣೆಯಲ್ಲಿ ವಧು-ವರರು ಪ್ರತಿಭಟನೆಗೆ ಕುಳಿತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

Written by - Zee Kannada News Desk | Last Updated : Apr 8, 2023, 08:08 PM IST
  • ಪೊಲೀಸರು ತಮ್ಮ ಕುಟುಂಬದ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ
  • ಮತ್ತು ಅವರ ಮದುವೆಯನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿದರು.
  • ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ದಂಪತಿಗಳು ಆರಂಭದಲ್ಲಿ ಮದುವೆಗೆ ನಿರಾಕರಿಸಿದ್ದರು.
ಮದುವೆಯಲ್ಲಿ ಮ್ಯೂಸಿಕ್ ಸ್ಥಗಿತಗೊಳಿಸಿದ್ದಕ್ಕೆ  ಪೊಲೀಸ್ ಠಾಣೆಯಲ್ಲಿ ವಧು, ವರನ ಪ್ರತಿಭಟನೆ title=
ಸಾಂದರ್ಭಿಕ ಚಿತ್ರ

ನವದೆಹಲಿ: ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ತಮ್ಮ ಮದುವೆಯಲ್ಲಿ ಡಿಜೆ ಸಂಗೀತ ನುಡಿಸುವುದನ್ನು ಕೆಲವು ಪೊಲೀಸರು ತಡೆದ ನಂತರ ದಂಪತಿಗಳು ಪೊಲೀಸ್ ಠಾಣೆಯಲ್ಲಿ ಧರಣಿ ಪ್ರತಿಭಟನೆ ನಡೆಸಿದರು ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ ಪೊಲೀಸ್ ಠಾಣೆಯಲ್ಲಿ ವಧು-ವರರು ಪ್ರತಿಭಟನೆಗೆ ಕುಳಿತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಇದನ್ನೂ ಓದಿ: ಮಾಧ್ಯಮಗಳಲ್ಲಿ ಪ್ರಚಾರದ ಪ್ರಸಾರಕ್ಕೆ ಅನುಮತಿ ಕಡ್ಡಾಯ: ಉಲ್ಲಂಘನೆ ಆದ್ರೆ ಕಾನೂನು ಕ್ರಮ

ಗುರುವಾರದಂದು ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಇಬ್ಬರು ಪೊಲೀಸರು ಔದ್ಯೋಗಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದುವೆ ಸ್ಥಳಕ್ಕೆ ಆಗಮಿಸಿ ಸಂಗೀತ ನುಡಿಸುವುದನ್ನು ನಿಲ್ಲಿಸುವಂತೆ ಡಿಜೆಗೆ ಕೇಳಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಪ್ರತ್ಯಕ್ಷದರ್ಶಿಗಳ ಪ್ರಕಾರ, ಸ್ಥಳದಲ್ಲಿ ಪೊಲೀಸರು ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ದಂಪತಿಗಳು ತಮ್ಮ ಕುಟುಂಬ ಸದಸ್ಯರೊಂದಿಗೆ ಪೊಲೀಸ್ ಠಾಣೆಗೆ ತಲುಪಿ ಸುಮಾರು ಮೂರು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಚುನಾವಣೆಯ ಟಿಕೆಟ್ ಗಾಗಿ ಹೆಚ್ಚಾಯಿತು  ದೇಗುಲ, ಮಸೀದಿಯಲ್ಲಿ ವಿಶೇಷ ಪೂಜೆ

ಸುದ್ದಿಗಾರರೊಂದಿಗೆ ಮಾತನಾಡಿದ ವರ ಅಜಯ್ ಸೋಲಂಕಿ, ಪೊಲೀಸರು ತಮ್ಮ ಕುಟುಂಬದ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಮತ್ತು ಅವರ ಮದುವೆಯನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿದರು. ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ದಂಪತಿಗಳು ಆರಂಭದಲ್ಲಿ ಮದುವೆಗೆ ನಿರಾಕರಿಸಿದ್ದರು.

ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ವಧು-ವರರು ಮದುವೆ ಸ್ಥಳಕ್ಕೆ ಮರಳಿದರು ಎಂದು ಔದ್ಯೋಗಿಕ್ ಪೊಲೀಸ್ ಠಾಣೆ ಪ್ರಭಾರಿ ರಾಜೇಂದ್ರ ವರ್ಮಾ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News