/kannada/photo-gallery/englands-legendary-test-batsman-joe-root-will-break-sachin-tendulkar-4-world-records-249475 ಒಂದಲ್ಲ ಎರಡಲ್ಲ ಸಚಿನ್ ಅವರ 4 ವಿಶ್ವ ದಾಖಲೆಗಳನ್ನು ಬ್ರೇಕ್‌ ಮಾಡಲಿದ್ದಾರೆ ಈ 33 ವರ್ಷದ ಬ್ಯಾಟ್ಸ್‌ಮನ್‌!  ಒಂದಲ್ಲ ಎರಡಲ್ಲ ಸಚಿನ್ ಅವರ 4 ವಿಶ್ವ ದಾಖಲೆಗಳನ್ನು ಬ್ರೇಕ್‌ ಮಾಡಲಿದ್ದಾರೆ ಈ 33 ವರ್ಷದ ಬ್ಯಾಟ್ಸ್‌ಮನ್‌! 249475

ಶಿವಮೊಗ್ಗದಲ್ಲಿ ಭೂಕಂಪ..! ಭಯಭೀತರಾಗಿ ಮನೆಯಿಂದ ಹೊರಬಂದ ಜನ

ಮಧ್ಯರಾತ್ರಿ ಸುಮಾರು 30 ಸೆಕೆಂಡ್ ಕಾಲ ಕಂಪಿಸಿದ ಭೂಮಿ.

Last Updated : Feb 3, 2019, 02:38 PM IST
ಶಿವಮೊಗ್ಗದಲ್ಲಿ ಭೂಕಂಪ..! ಭಯಭೀತರಾಗಿ ಮನೆಯಿಂದ ಹೊರಬಂದ ಜನ title=

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಮತ್ತು ಹೊಸನಗರ ಭಾಗದಲ್ಲಿ ತಡರಾತ್ರಿ 1.30ರ ಸುಮಾರಿಗೆ ಭೂಕಂಪನದ ಅನುಭವವಾಗಿದೆ. ವರಾಹಿ ಜಲವಿದ್ಯುತ್ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಭೂಕಂಪದ ಅನುಭವವಾಗಿದೆ. 

ಭಾರೀ ಶಬ್ಧದೊಂದಿಗೆ ಭೂಮಿ ಕಂಪಿಸಿದ್ದು ಜನರು ಭಯಭೀತರಾಗಿ ಮನೆಯಿಂದ ಹೊರ ಬಂದಿದ್ದರು. ರಿಕ್ಟರ್ ಮಾಪಕದಲ್ಲಿ 2.2ರಷ್ಟು ತೀವ್ರತೆ ದಾಖಲಾಗಿದ್ದು, ಯಾವುದೇ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.

ಭೂಕಂಪನದ ಬಗ್ಗೆ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿರ್ದೇಶಕ ಡಾ.ಜಿ.ಶ್ರೀನಿವಾಸರೆಡ್ಡಿಯವರು ದೃಢಪಡಿಸಿದ್ದು, ಈ ಕುರಿತು ಜಿಲ್ಲೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.