ಎಚ್.ಡಿ.ದೇವೇಗೌಡರ ಸಾವು ಬಯಸಿದವರಿಗೆ ತಕ್ಕ ಪಾಠ ಕಲಿಸಬೇಕು: ಎಚ್‍ಡಿಕೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಾವಣದಾಲ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೆ.ಎನ್.ರಾಜಣ್ಣ, ‘ಈಗ ದೇವೇಗೌಡರು ಇಬ್ಬರ ಮೇಲೆ ಹಾಕಿಕೊಂಡು ಹೋಗ್ತಾರೆ. ನಾಲ್ವರ ಮೇಲೆ ಹೋಗುವ ಕಾಲ ಹತ್ತಿರದಲ್ಲಿದೆ’ ಎಂದು ಹೇಳಿದ್ದರು.

Written by - Puttaraj K Alur | Last Updated : Apr 9, 2023, 04:38 PM IST
  • ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಾವನ್ನು ಬಯಸಿದವರಿಗೆ ತಕ್ಕ ಪಾಠ ಕಲಿಸಬೇಕು
  • ದೇವೇಗೌಡರ ಆಶೀರ್ವಾದದಿಂದಲೇ ಗೆದ್ದ ಕೆ.ಎನ್.ರಾಜಣ್ಣ ಇದೀಗ ಅವರ ಸಾವನ್ನು ಬಯಸಿದ್ದಾರೆ
  • ದೇವೇಗೌಡರು ನಮ್ಮ ಜೊತೆ ಜೀವಂತವಾಗಿರಬೇಕಾದ್ರೆ ತುಮಕೂರಿನಲ್ಲಿ 11ಕ್ಕೆ 11 ಕ್ಷೇತ್ರಗಳಲ್ಲಿ ಗೆಲ್ಲಬೇಕು
ಎಚ್.ಡಿ.ದೇವೇಗೌಡರ ಸಾವು ಬಯಸಿದವರಿಗೆ ತಕ್ಕ ಪಾಠ ಕಲಿಸಬೇಕು: ಎಚ್‍ಡಿಕೆ title=
ಕೆ.ಎನ್.ರಾಜಣ್ಣ ವಿರುದ್ಧ HDK ಆಕ್ರೋಶ

ತುಮಕೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಾವನ್ನು ಬಯಸಿದವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಧುಗಿರಿ ತಾಲೂಕಿನ ಕೈಮರ ಗ್ರಾಮದಲ್ಲಿ ಕಾರ್ಯಕರ್ತರನ್ನುದೇಶಿ ಎಚ್‍ಡಿಕೆ ಮಾತನಾಡಿದ್ದಾರೆ.

ದೇವೇಗೌಡರ ಆಶೀರ್ವಾದದಿಂದಲೇ ಗೆದ್ದ ಕೆ.ಎನ್.ರಾಜಣ್ಣ ಇದೀಗ ಅವರ ಸಾವನ್ನು ಬಯಸಿದ್ದಾರೆ. ದೇವೇಗೌಡರನ್ನು ಕುತಂತ್ರ ರಾಜಕಾರಣದಿಂದ ತುಮಕೂರಲ್ಲಿ ಸೋಲಿಸಲಾಯಿತು. ಆ ನೋವಿನಿಂದಲೇ ಅವರು ಮಾನಸಿಕವಾಗಿ ಕುಗ್ಗಿ ಇವತ್ತು ಆರೋಗ್ಯ ತಪ್ಪಿದ್ದಾರೆ ಅಂತಾ ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: "ಖರ್ಗೆ ಅವರು ರಾಜ್ಯದ ಸಿಎಂ ಆದರೆ ಅವರ ಜತೆ ಕೆಲಸ ಮಾಡಲು ನಾನು ಸಿದ್ಧ"

ದೇವೇಗೌಡರು ಇನ್ನು ನಮ್ಮ ಜೊತೆ ಜೀವಂತವಾಗಿ ಇರಬೇಕಾದರೆ ಜೆಡಿಎಸ್ ತುಮಕೂರಿನಲ್ಲಿ 11ಕ್ಕೆ 11 ಕ್ಷೇತ್ರಗಳಲ್ಲಿ ಗೆಲ್ಲಬೇಕು. ತುಮಕೂರು ಜಿಲ್ಲೆಯ ಜನತೆ ಈ ಕೆಲಸ ಮಾಡಬೇಕಿದೆ. ದೇವೇಗೌಡರ ಸಾವನ್ನು ಬಯಸಿದವರಿಗೆ ತಕ್ಕ ಪಾಠ ಕಲಿಸಬೇಕು ಅಂತಾ ಎಚ್‍ಡಿಕೆ ಭಾವನಾತ್ಮಕವಾಗಿ ಹೇಳಿದರು.

ಕೆ.ಎನ್.ರಾಜಣ್ಣ ವಿವಾದಾತ್ಮಕ ಹೇಳಿಕೆ!

ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ಇತ್ತೀಚೆಗೆ ಮಾಜಿ ಪ್ರಧಾನಿ ಎಚ್.ಡಿದೇವೇಗೌಡರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಾವಣದಾಲ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೆ.ಎನ್.ರಾಜಣ್ಣ, ‘ಈಗ ದೇವೇಗೌಡರು ಇಬ್ಬರ ಮೇಲೆ ಹಾಕಿಕೊಂಡು ಹೋಗ್ತಾರೆ. ನಾಲ್ವರ ಮೇಲೆ ಹೋಗುವ ಕಾಲ ಹತ್ತಿರದಲ್ಲಿದೆ’ ಎಂದು ಹೇಳಿದ್ದರು.

ಇದನ್ನೂ ಓದಿ: Amul vs Nandini: "ಹಾಲುಂಡ ತವರಿಗೆ" ಏಕೆ ದ್ರೋಹ ಮಾಡುವಿರಿ? ಎಂದ ಕಾಂಗ್ರೆಸ್

ಕೆ.ಎನ್.ರಾಜಣ್ಣನವರ ವಿವಾದಾತ್ಮಕ ಹೇಳಿಕೆಗೆ  ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ರಾಜಣ್ಣ ನೀಡಿದ ಹೇಳಿಕೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿಯೂ ಸಖತ್ ವೈರಲ್ ಆಗಿತ್ತು. ಮಾಜಿ ಪ್ರಧಾನಿಗಳ ಬಗ್ಗೆ ಈ ರೀತಿ ಹೇಳಿಕೆ ನೀಡಿದ್ದು ಎಷ್ಟು ಸರಿ ಎಂದು ನೆಟ್ಟಿಗರು ಪ್ರಶ್ನೆ ಮಾಡಿ ಆಕ್ರೋಶ ಹೊರಹಾಕಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News