ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ

ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಏಕಾಏಕಿ ಚುನಾವಣಾ  ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.

Written by - Zee Kannada News Desk | Last Updated : Apr 11, 2023, 04:34 PM IST
  • ಇನ್ನೊಂದೆಡೆಗೆ ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದಂತೆ ಇದ್ದ ಕಡೆ ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ಧ ವ್ಯಂಗ್ಯವಾಡಿದೆ.
  • ಬಿಜೆಪಿ ಕಡೆಯಿಂದ ಅಭ್ಯರ್ಥಿಗಳ ಪಟ್ಟಿ ಹೊರಬರುವ ಬದಲು ರಾಜಕೀಯ ನಿವೃತ್ತಿ ಪಡೆಯುವವರ ಪಟ್ಟಿ ಹೊರಬರುತ್ತಿವೆ
  • ಟಿಕೆಟ್ ಘೋಷಣೆಯಾಗುವ ಬದಲು ವಿಕೆಟ್ ಬೀಳುತ್ತಿವೆ
ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ title=
file photo

ಬೆಂಗಳೂರು:ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಏಕಾಏಕಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.

ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ದಾಗೆ ಬರೆದಿರುವ ಪತ್ರವೊಂದರಲ್ಲಿ ತಾವು ಚುನಾವಣಾ ರಾಜಕೀಯದಿಂದ ಸ್ವಯಂ ನಿವೃತ್ತಿ ಕೈಗೋಳ್ಳುತ್ತಿದ್ದು ಆದ್ದರಿಂದ ತಮ್ಮ ಹೆಸರನ್ನು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.ಕಳೆದ ನಲವತ್ತು ವರ್ಷಗಳಲ್ಲಿ ಬೂತ್ ಮಟ್ಟದಿಂದ ಹಿಡಿದು ರಾಜ್ಯದ ಉಪಮುಖ್ಯಮಂತ್ರಿ ಸ್ಥಾನದವರೆಗೆ ಗೌರವ ನೀಡಿದ್ದಕ್ಕೆ ಅವರು ಪಕ್ಷಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿ- Highest Paid actors: ಅತಿ ಹೆಚ್ಚು ಸಂಭಾವನೆ ಪಡೆಯುವ ಟಾಪ್ 10 ಕನ್ನಡ ಹೀರೋಗಳು ಇವರೇ!

ಇದನ್ನೂ ಓದಿ- Rakhi Sawant: ರಾಖಿ ಸಾವಂತ್‌ಗೆ ಬಲವಂತದಿಂದ ಲಿಪ್ ಕಿಸ್ ಮಾಡಿದ್ದ ಸಿಂಗರ್! ಹೈಕೋರ್ಟ್ ಮೆಟ್ಟಿಲೇರಿದ ಗಾಯಕ

ಇನ್ನೊಂದೆಡೆಗೆ ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದಂತೆ ಇದ್ದ ಕಡೆ ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ಧ ವ್ಯಂಗ್ಯವಾಡಿದೆ. ಬಿಜೆಪಿ ಕಡೆಯಿಂದ ಅಭ್ಯರ್ಥಿಗಳ ಪಟ್ಟಿ ಹೊರಬರುವ ಬದಲು ರಾಜಕೀಯ ನಿವೃತ್ತಿ ಪಡೆಯುವವರ ಪಟ್ಟಿ ಹೊರಬರುತ್ತಿವೆ!ಟಿಕೆಟ್ ಘೋಷಣೆಯಾಗುವ ಬದಲು ವಿಕೆಟ್ ಬೀಳುತ್ತಿವೆ! ಮಂತ್ರಿಗಿರಿಗಾಗಿ ಲಾಭಿ ಮಾಡಿ ಸುಸ್ತಾದ ಈಶ್ವರಪ್ಪ ಈಗ ಟಿಕೆಟ್‌ಗೂ ಲಾಭಿ ನಡೆಸಿ ಸುಸ್ತಾದರು.ಬಿಜೆಪಿಯ ಅವಮಾನ ಸಹಿಸದೆ ರಾಜಕೀಯದಿಂದಲೇ ಪಲಾಯನ ಮಾಡಿದರು" ಎಂದು ಅದು ಲೇವಡಿ ಮಾಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News