ನವದೆಹಲಿ: ಹಲವು ದಿನಗಳ ತೀವ್ರ ಚರ್ಚೆಯ ನಂತರ ಬಿಜೆಪಿ ಮಂಗಳವಾರ ಅಂತಿಮವಾಗಿ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಯುವ ನಾಯಕತ್ವಕ್ಕೆ ಆದ್ಯತೆ ನೀಡಲಾಗಿದೆ ಎಂದು ರಾಜ್ಯ ಚುನಾವಣಾ ಉಸ್ತುವಾರಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
189 ಅಭ್ಯರ್ಥಿಗಳ ಪೈಕಿ 52 ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿದೆ. ಪಟ್ಟಿಯಲ್ಲಿ ಒಬಿಸಿ ಸಮುದಾಯದ 32, ಎಸ್‌ಸಿಯಿಂದ 30 ಮತ್ತು ಎಸ್‌ಟಿ ಸಮುದಾಯದ 16 ಅಭ್ಯರ್ಥಿಗಳು ಸೇರಿದ್ದಾರೆ. ಪಟ್ಟಿಯಲ್ಲಿ 31 ಪಿಎಚ್‌ಡಿ ಹೊಂದಿರುವವರು ಮತ್ತು ಸ್ನಾತಕೋತ್ತರ ಪದವಿ ಹೊಂದಿರುವ 31 ಅಭ್ಯರ್ಥಿಗಳು ಇದ್ದಾರೆ.ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಟ್ವಿಟ್ಟರ್ ನಲ್ಲಿ ಹೇಳಿಕೆ ನೀಡಿದ್ದು, ನವ ಕರ್ನಾಟಕದದಿಂದ ನವ ಭಾರತವನ್ನು ನಿರ್ಮಿಸಲು ಮತ್ತು ಸಮಗ್ರ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿಯ 189 ಸಮರ್ಥ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ರಾಜ್ಯದೆಲ್ಲೆಡೆ ಡಬಲ್ ಇಂಜಿನ್ ಸರ್ಕಾರದ ಆಡಳಿತದ ಪರವಾದ ವಾತಾವರಣವಿದ್ದು, ಈ ಬಾರಿ ಸಂಪೂರ್ಣ ಬಹುಮತದ ಸರ್ಕಾರವನ್ನು ನಾವು ರಚಿಸಲಿದ್ದೇವೆ. ಎಂದು ಹೇಳಿದ್ದಾರೆ.
ನವ ಕರ್ನಾಟಕದದಿಂದ ನವ ಭಾರತವನ್ನು ನಿರ್ಮಿಸಲು ಮತ್ತು ಸಮಗ್ರ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗಾಗಿ @BJP4Karnatakaದ 189 ಸಮರ್ಥ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ರಾಜ್ಯದೆಲ್ಲೆಡೆ ಡಬಲ್ ಇಂಜಿನ್ ಸರ್ಕಾರದ ಆಡಳಿತದ ಪರವಾದ ವಾತಾವರಣವಿದ್ದು, ಈ ಬಾರಿ ಸಂಪೂರ್ಣ ಬಹುಮತದ ಸರ್ಕಾರವನ್ನು ನಾವು ರಚಿಸಲಿದ್ದೇವೆ.
1/2 pic.twitter.com/MfGalhqUNs— Basavaraj S Bommai (@BSBommai) April 11, 2023
ಇದಲ್ಲದೇ 8 ಜನ ವೈದ್ಯರು, ಸಾಮಾಜಿಕ ಕಾರ್ಯಕರ್ತರು ಹಾಗೂ ಮಹಿಳೆಯರು ಪಟ್ಟಿಯಲ್ಲಿದ್ದಾರೆ. ನಿವೃತ್ತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗೂ ಪಕ್ಷ ಟಿಕೆಟ್ ನೀಡಿದೆ.ಮಾಜಿ ಐಪಿಎಸ್ ಮತ್ತು ಬೆಂಗಳೂರು ಕಮಿಷನರ್ ಆಗಿರುವ ಭಾಸ್ಕರ್ ರಾವ್ ಅವರು ಚಾಮರಾಜಪೇಟೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.ಕನಕಪುರ ಕ್ಷೇತ್ರದಲ್ಲಿ ಆರ್ ಅಶೋಕ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಕಣಕ್ಕಿಳಿಯಲಿದ್ದಾರೆ ಮತ್ತು ಸಿಪಿ ಯೋಗೇಶ್ವರ್ ಅವರು ಚನ್ನಪಟ್ಟಣದಿಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಸ್ಪರ್ಧಿಸಲಿದ್ದಾರೆ.
ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಥಣಿಯಿಂದ ಟಿಕೆಟ್ ಕೈ ತಪ್ಪಿದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಗ್ಗಾಂವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಮನ್ಸುಖ್ ಮಾಂಡವಿಯಾ ಮತ್ತು ಇತರ ಬಿಜೆಪಿ ನಾಯಕರು ಪಟ್ಟಿಯನ್ನು ಬಿಡುಗಡೆ ಮಾಡಿದರು.
ಈ ಮಧ್ಯೆ, ಕರ್ನಾಟಕ ಸರ್ವೋದಯ ಪಕ್ಷ ಸೇರಿದಂತೆ ಒಟ್ಟು 166 ಅಭ್ಯರ್ಥಿಗಳನ್ನು ಕಾಂಗ್ರೆಸ್ ಘೋಷಿಸಿದೆ. ಮೇಲುಕೋಟೆ ಕ್ಷೇತ್ರದಲ್ಲಿ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಕಾಂಗ್ರೆಸ್ ಬೆಂಬಲ ನೀಡಿದೆ. ಜೆಡಿಎಸ್ 93 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.