ಬೆಂಗಳೂರು : ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.
ಇನ್ನು ಬೆಂಗಳೂರಿನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಇರುವ ಸಾಧ್ಯತೆ ಇದೆ. ಕೆಐಎಎಲ್ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಅಲ್ಲದೆ, ಕಲಬುರ್ಗಿಯಲ್ಲಿ 40.1 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ಸಾಧ್ಯತೆ ಇದೆ.
ಇದನ್ನೂ ಓದಿ:
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಭಾರಿ ಬದಲಾವಣೆಯಾಗುತ್ತಿರುವುದನ್ನು ಕಾಣಬಹುದು, ಬೆಳಿಗ್ಗೆ ಇದ್ದ ವಾತಾವರಣ ಸಂಜೆ ಹೊತ್ತಿಗೆ ಮಾಯವಾಗಿರುತ್ತದೆ. ಬಿಸಿಲಿನ ಬೆಗೆ ಹೆಚ್ಚಾಗುತ್ತಿದೆ. ಸೂರ್ಯನ ಶಾಖಕ್ಕೆ ಜನರು ತತ್ತರಿಸುತ್ತಿದ್ದಾರೆ. ಅಲ್ಲದೆ, ಇದೆ ವೇಳೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ನಿರೀಕ್ಷೆ ಇದೆ. ಇನ್ನು ಈ ಬಾರಿ 90ರಿಂದ ಶೇಕಡ 95ರಷ್ಟು ಮಳೆಯಾಗುವ ಸಾಧ್ಯತೆ ಇದೆ.
ಸ್ಕೈಮೆಟ್ ವೆದರ್ನ ಹವಾಮಾನ ವರದಿಯ ಪ್ರಕಾರ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಶೇಕಡ 90ರಿಂದ 95ರಷ್ಟಿದೆ. ಹೆಚ್ಚು ಮಳೆ ಸುರಿಯುವ ಸಾಧ್ಯತೆ ಶೇ. 0ರಷ್ಟಿದೆ. ಜೂನ್ ತಿಂಗಳಲ್ಲಿ ಎಲ್ಪಿಎಯ ಶೇಕಡ 99ರಷ್ಟು ಮುಂಗಾರು ಮಳೆಯಾಗಲಿದೆ. ಜುಲೈನಲ್ಲಿ ಶೇಕಡ 92 ಮತ್ತು ಆಗಸ್ಟ್ನಲ್ಲಿ ಶೇಕಡ 92ರಷ್ಟು ಮಳೆಯಾಗಲಿದೆ ಎಂದು ಸ್ಕೈಮೆಟ್ ವೆದರ್ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.