Karnataka Assembly Election 2023: ಬೊಮ್ಮಾಯಿ ಅವರು ಕಾಂಗ್ರೆಸ್ ಗೆ ಸೇರುತ್ತಿದ್ದರು ಎಂಬ ಸವದಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಈ ವಿಚಾರ ಅಪ್ರಸ್ತುತ. ನಾನು ನನ್ನ ಮನೆಯಲ್ಲಿ ಮಾತ್ರ ಕೂತಿದ್ದೆ. ನಾನು ಯಾವ ಪಕ್ಷಕ್ಕೂ ಹೋಗಿರಲಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅನಂತ ಕುಮಾರ್, ಸಿ.ಸಿ ಪಾಟೀಲ್, ಸವದಿ ಬಂದಿದ್ದು ನಿಜ. ಆದರೆ ಕಾಂಗ್ರೆಸ್ ಗೆ ನಾನು ಹೋಗುತ್ತಿರಲಿಲ್ಲ. ಮಹತ್ವಾಕಾಂಕ್ಷೆಗಳು ಇರಲಿಲ್ಲ, ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ರಾಜ್ಯದ 189 ಸ್ಥಳಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಎಲ್ಲರೂ ಬಹುಮತದಿಂದ ಆಯ್ಕೆಯಾಗಿ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ, ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಒಮ್ಮತದ ಸ್ವಾಗತ ದೊರೆತಿದೆ, ಎಂದರು.
ಇದನ್ನೂ ಓದಿ- ಟಿಕೆಟ್ ನಿರೀಕ್ಷೆಯಲ್ಲಿದ್ದವರಿಗೆ ಆಘಾತ ! ಮಂಡ್ಯದಲ್ಲಿ ಮೂಲ ಬಿಜೆಪಿಗರಿಂದ ಬಂಡಾಯ ಸಾಧ್ಯತೆ
ಕೆಲವು ಅಸಮಧಾನಿತರ ಜೊತೆ ಮಾತಾಡುವ ಕೆಲಸ ನಡೆದಿದೆ. ಲಕ್ಷ್ಮಣ ಸವದಿ ಅವರೊಂದಿಗೆ ಮಾತಾಡಿದ್ದು, ಯಾವುದೇ ದುಡುಕಿನ ನಿರ್ಧಾರ ಕೈಗೊಳ್ಳಬಾರದು ಎಂದು ತಿಳಿಸಿರುವುದಾಗಿ ಇದೇ ವೇಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಇದನ್ನೂ ಓದಿ- Karnataka Election 2023: "ನಾನು ಯಾವುದೇ ಸಂದರ್ಭದಲ್ಲಾದರೂ ರಾಜಕೀಯ ನಿವೃತ್ತಿ ಪಡೆಯಬಹುದು" : ಜಗದೀಶ್ ಶೆಟ್ಟರ್
ಸವದಿ ಜೊತೆ ಭಾವನಾತ್ಮಕವಾದ ಸಂಬಂಧ ಇದೆ. ಅವರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅವರು ಕಷ್ಟದಲ್ಲಿದ್ದಾಗ ಪಕ್ಷ ಕೈ ಹಿಡಿದಿದೆ. ಮುಂದೆಯೂ ಅವರ ಕೈ ಹಿಡಿಯುತ್ತದೆ. ಅವರ ಗೌರವ ಕಾಪಾಡಲು ಒಳ್ಳೆಯ ನಿರ್ಧಾರ ಮಾಡಲಾಗುತ್ತದೆ. ಅವರಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ ಎಂದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.