Hardik Pandya: ಪಬ್ಲಿಕ್’ನಲ್ಲಿಯೇ ಕಿಸ್ ಮಾಡಿ ಭಾರೀ ಚರ್ಚೆಗೆ ಸಿಲುಕಿದ ಹಾರ್ದಿಕ್ ಪಾಂಡ್ಯ!

Hardik Pandya Photo Viral: ಮೊಹಾಲಿಯಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಐಪಿಎಲ್ 16 ನೇ ಋತುವಿನ 18 ನೇ ಪಂದ್ಯ ನಡೆದಿದೆ. ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಪಂಜಾಬ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಈ ನಡುವೆ ಅವರ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Written by - Bhavishya Shetty | Last Updated : Apr 13, 2023, 10:56 PM IST
    • ಹಾರ್ದಿಕ್ ಪಾಂಡ್ಯ ಪ್ರಸ್ತುತ ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕತ್ವ ವಹಿಸಿದ್ದಾರೆ.
    • ಪಂದ್ಯಕ್ಕೂ ಮುನ್ನ ಅವರು ಸಹಆಟಗಾರನೊಬ್ಬನಿಗೆ ಮುತ್ತಿಟ್ಟ ದೃಶ್ಯ ಕಂಡು ಬಂದಿತ್ತು
    • ಈ ಆಟಗಾರ ಬೇರೆ ಯಾರೂ ಅಲ್ಲ ಟೀಂ ಇಂಡಿಯಾದ ಅನುಭವಿ ಆರಂಭಿಕ ಆಟಗಾರ ಶಿಖರ್ ಧವನ್.
Hardik Pandya: ಪಬ್ಲಿಕ್’ನಲ್ಲಿಯೇ ಕಿಸ್ ಮಾಡಿ ಭಾರೀ ಚರ್ಚೆಗೆ ಸಿಲುಕಿದ ಹಾರ್ದಿಕ್ ಪಾಂಡ್ಯ!  title=
Hardik Pandya Kiss

PBKS vs GT, Hardik Pandya Photo Viral: ಭಾರತೀಯ ಕ್ರಿಕೆಟ್ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಪ್ರಸ್ತುತ ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕತ್ವ ವಹಿಸಿದ್ದಾರೆ. ಇಂದು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಅವರು ಸಹಆಟಗಾರನೊಬ್ಬನಿಗೆ ಮುತ್ತಿಟ್ಟ ದೃಶ್ಯ ಕಂಡು ಬಂದಿತ್ತು.

ಇದನ್ನೂ ಓದಿ: ಬ್ರೆಟ್ ಲೀ ಕಾರ್ ಚೇಸ್ ಮಾಡಲು ಮುಂದಾದ ಆರ್ಸಿಬಿ ಫ್ಯಾನ್...!ಬ್ರೆಟ್ ಲೀ ಹೇಳಿದ್ದೇನು ಗೊತ್ತಾ?

ಮೊಹಾಲಿಯಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಐಪಿಎಲ್ 16 ನೇ ಋತುವಿನ 18 ನೇ ಪಂದ್ಯ ನಡೆದಿದೆ. ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಪಂಜಾಬ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಈ ನಡುವೆ ಅವರ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಧ್ಯಮ ಮೈದಾನದಲ್ಲಿ ಪಂದ್ಯಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ ಈ ಆಟಗಾರನಿಗೆ ಮುತ್ತಿಟ್ಟರು. ಈ ಆಟಗಾರ ಬೇರೆ ಯಾರೂ ಅಲ್ಲ ಟೀಂ ಇಂಡಿಯಾದ ಅನುಭವಿ ಆರಂಭಿಕ ಆಟಗಾರ ಶಿಖರ್ ಧವನ್. ಪ್ರಸ್ತುತ ಐಪಿಎಲ್ ಋತುವಿನಲ್ಲಿ ಧವನ್ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಚಿತ್ರವು ಟಾಸ್ ಸಂದರ್ಭದಲ್ಲಿ ಎರಡೂ ತಂಡಗಳ ನಾಯಕರು ಮೈದಾನದಲ್ಲಿದ್ದಾಗ ತೆಗೆದದ್ದು. ಈ ಚಿತ್ರಕ್ಕೆ ಸಂಬಂಧಿಸಿದಂತೆ ಬಳಕೆದಾರರು ಸಾಮಾಜಿಕ ಮಾಧ್ಯಮದಲ್ಲಿ ವಿಭಿನ್ನ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಒಬ್ಬ ಬಳಕೆದಾರರು ಬರೆದಿದ್ದಾರೆ  “ಎಂತಹ ಸಹೋದರತ್ವ” ಎಂದು ಹೇಳಿದರೆ, ಇನ್ನೊಬ್ಬ ಬಳಕೆದಾರ ಮಾತ್ರ “ಪಂದ್ಯದ ಮೊದಲು ಪ್ರೀತಿಯನ್ನು ಈ ರೀತಿ ವ್ಯಕ್ತಪಡಿಸಲಾಗುವುದು ಸಹ ತಪ್ಪು” ಎಂದು ಹೇಳಿದ್ದಾನೆ. ಇನ್ನು ಅನೇಕ ಬಳಕೆದಾರರು ಈ ಚಿತ್ರವನ್ನು ಮೆಚ್ಚಿದ್ದಾರೆ.

ಇದನ್ನೂ ಓದಿ: IPL 2023: ಈ ಯುವ ಆಟಗಾರನಿಗೆ ಮೋಸ ಮಾಡಿದ್ರಾ ಎಂ ಎಸ್ ಧೋನಿ?

ಈ ಪಂದ್ಯಕ್ಕಾಗಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಗುಜರಾತ್ ತಂಡಕ್ಕೆ ಮರಳಿದ್ದಾರೆ. ಅನಾರೋಗ್ಯದ ಕಾರಣ ಕಳೆದ ಪಂದ್ಯದಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಸ್ಪಿನ್ನರ್ ರಶೀದ್ ಖಾನ್ ನಾಯಕತ್ವ ವಹಿಸಿಕೊಂಡಿದ್ದರು. ಅಹಮದಾಬಾದ್‌’ನಲ್ಲಿ ನಡೆದ ಆ ಪಂದ್ಯದಲ್ಲಿ ಗುಜರಾತ್ ಕೊನೆಯ ಎಸೆತದಲ್ಲಿ ಸೋಲನುಭವಿಸಿತ್ತು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News