ಲೋಕಸಭಾ ಚುನಾವಣೆ 2019: ಫೆ.14, 21 ಕ್ಕೆ ರಾಜ್ಯಕ್ಕೆ ಅಮಿತ್ ಶಾ ಆಗಮನ

ಪ್ರಧಾನಮಂತ್ರಿ ನರೇಂದ್ರ ಮೋದಿ ಹುಬ್ಬಳ್ಳಿಯಲ್ಲಿ ಲೋಕಸಭಾ ಚುನಾವಣೆಗೆ ರಣಕಹಳೆ ಮೊಳಗಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ.

Last Updated : Feb 12, 2019, 09:13 AM IST
ಲೋಕಸಭಾ ಚುನಾವಣೆ 2019: ಫೆ.14, 21 ಕ್ಕೆ ರಾಜ್ಯಕ್ಕೆ ಅಮಿತ್ ಶಾ ಆಗಮನ title=
File Image

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಹುಬ್ಬಳ್ಳಿಯಲ್ಲಿ ಲೋಕಸಭಾ ಚುನಾವಣೆಗೆ ರಣಕಹಳೆ ಮೊಳಗಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿ ಭರ್ಜರಿ ತಯಾರಿ ನಡೆಯುತ್ತಿದ್ದು,  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಫೆ. 14 ಮತ್ತು 21 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.

ಫೆ. 14 ರಂದು ಸಿಂಧನೂರಿನಲ್ಲಿ ನಡೆಯುವ ಶಕ್ತಿಕೇಂದ್ರ ಪ್ರಮುಖರ ಸಭೆಯಲ್ಲಿ ಅಮಿತ್ ಶಾ ಭಾಗವಹಿಸಲಿದ್ದು, ಅದೇ ದಿನ ಸಂಜೆ ಹೊಸಪೇಟೆಯಲ್ಲಿ ಪ್ರಬುದ್ಧರ ಜತೆಗೆ ಚರ್ಚೆ ನಡೆಸಲಿದ್ದಾರೆ. 

ಫೆಬ್ರವರಿ 21 ರಂದು ಚಿಕ್ಕಬಳ್ಳಾಪುರದಲ್ಲಿ ಶಕ್ತಿಕೇಂದ್ರ ಪ್ರಮುಖರ ಜೊತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ.

Trending News