ಮೈಸೂರು: ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ಬಿಜೆಪಿಗೆ ಯಾವುದೇ ಸಮಸ್ಯೆಯಾಗುವುದಿಲ್ಲವೆಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆಯುತ್ತದೆ’ ಎಂದು ಹೇಳಿದ್ದಾರೆ.
ನಮ್ಮದು ಕಾರ್ಯಕರ್ತರ ಆಧಾರಿತ ಪಕ್ಷ. ಶೆಟ್ಟರ್ ಇಷ್ಟು ದಿನ ಸಜ್ಜನರ ಸಂಘದಲ್ಲಿದ್ದರು, ಈಗ ದುರ್ಜನರ ಸಂಘ ಮಾಡಿದ್ದಾರೆ. ಬಸವಣ್ಣ ದುರ್ಜನರ ಸಂಘ ಮಾಡಬೇಡಿ ಎಂದು ಹೇಳಿದ್ದರು. ಇದನ್ನು ಎಲ್ಲರೂ ನೆನಪಿಟ್ಟುಕೊಳ್ಳಿ. ಶೆಟ್ಟರ್ ಬಲಿಪಶು ಆಗುತ್ತಿದ್ದಾರೆ ಎಂಬ ಪದವನ್ನು ನಾನು ಬಳಸುವುದಿಲ್ಲ. ಆದರೆ ಅವರು ಈಗ ಮಾಡಿರುವ ಸಂಘ ಸರಿಯಿಲ್ಲ ಎಂದು ಹೇಳಿದರು.
ಇದನ್ನೂ ಓದಿ: "ಶೆಟ್ಟರ್ ಅವರನ್ನು ಬಿಜೆಪಿ ನಡೆಸಿಕೊಂಡಿರುವ ರೀತಿ ಯಾವುದೇ ನಾಯಕರಿಗೆ ಆಗಬಾರದು"
ವರುಣ ಕ್ಷೇತ್ರದಲ್ಲಿ ಫೈಟ್ ಬಹಳ ಬಿಗಿಯಾಗಿದೆ. ನಾವು ಕ್ಷೇತ್ರವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಕಾರಣಕ್ಕೆ ನಾವು ವಿ.ಸೋಮಣ್ಣನಂತಹ ನಾಯಕನನ್ನು ಅಲ್ಲಿ ಕಣಕ್ಕಿಳಿಸಿದ್ದೇವೆ. ರಾಜ್ಯ ಹಾಗೂ ರಾಷ್ಟ್ರ ನಾಯಕರು ಪ್ರಚಾರಕ್ಕೆ ಬರುತ್ತಾರೆ. ಮೋದಿ ಅವರ ಚುನಾವಣಾ ಪ್ರಚಾರದ ದಿನಾಂಕಗಳು ಇನ್ನೂ ನಿಗದಿಯಾಗಿಲ್ಲ. ಬಹುತೇಕ ನಾಮಪತ್ರ ಪ್ರಕ್ರಿಯೆ ಮುಗಿದ ಮೇಲೆ ದಿನಾಂಕಗಳು ನಿರ್ಧಾರವಾಗುತ್ತದೆ ಎಂದು ಸಿಎ ಬೊಮ್ಮಾಯಿ ತಿಳಿಸಿದರು.
ಕಾಂಗ್ರೆಸ್ನಲ್ಲಿ ಅಭ್ಯರ್ಥಿಗಳ ಕೊರತೆ ಬಹಳ ಇತ್ತು. 60ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅವರಿಗೆ ಅಭ್ಯರ್ಥಿಗಳೇ ಇರಲಿಲ್ಲ. ಮೊದಲ ಪಟ್ಟಿಯನ್ನು ಮಾತ್ರ ವೀರಾವೇಶದಿಂದ ಬಿಡುಗಡೆ ಮಾಡಿದರು. ಈಗ ಅವರ ಸ್ಥಿತಿಗತಿ ಗೊತ್ತಾಗುತ್ತಿದೆ. ಬಿಜೆಪಿ ರಾಜ್ಯದಲ್ಲಿ ಬಹುಮತ ಪಡೆಯುತ್ತದೆ. ನನ್ನ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದೇನೆ. ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡದೇ ಯಾವುದಕ್ಕೆ ಕಾಯುತ್ತಿದ್ದಾರೋ ಗೊತ್ತಿಲ್ಲ. ನನ್ನ ಕ್ಷೇತ್ರದ ಜನರ ಮೇಲೆ ನನಗೆ ವಿಶ್ವಾಸ ಇದೆ. ಜನರು ನನ್ನನ್ನು ಗೆಲ್ಲಿಸುತ್ತಾರೆ ಎಂದು ಅವರು ಹೇಳಿದರು.
ಇದನ್ನೂ ಓದಿ: 75 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದು ನಾಲ್ಕನೇ ಬಾರಿಗೆ ಗೆಲುವು ಸಾಧಿಸುತ್ತೇನೆ: ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.