ಮೈಸೂರು: ವಿ.ಸೋಮಣ್ಣನನ್ನು ಹರಕೆಯ ಕುರಿ ಮಾಡಲಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಂಗಳವಾರ ಮಾತನಾಡಿರುವ ಅವರು, ಸೋಮಣ್ಣ ಸ್ಪರ್ಧೆಗೆ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಒತ್ತಡವೇ ಕಾರಣವೆಂದು ಹೇಳಿದ್ದಾರೆ.
‘ದುಡ್ಡು ಇರುವ ಒಬ್ಬ ಅಭ್ಯರ್ಥಿ ಬೇಕು ಎಂದು ಸೋಮಣ್ಣನನ್ನು ಇಲ್ಲಿಗೆ ತಂದು ಹಾಕಲಾಗಿದೆ. ಸೋಮಣ್ಣ ಹೊರ ಜಿಲ್ಲೆಯವನು. ಸೋಮಣ್ಣನಿಗೆ ವರುಣ ಕ್ಷೇತ್ರದ ಬಗ್ಗೆ ಏನು ಗೊತ್ತಿದೆ? ರಾಮನಗರದಲ್ಲಿ ಹುಟ್ಟಿ ಬೆಂಗಳೂರಿನಲ್ಲಿ ರಾಜಕೀಯ ಮಾಡಿದವನು ಸೋಮಣ್ಣ. ಸೋಮಣ್ಣಗೂ ವರುಣಗೂ ಏನು ಸಂಬಂಧ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: Karnataka Election 2023: ಸುಡಾನ್ನಲ್ಲಿ ಸಿಲುಕಿರುವ ಹಕ್ಕಿ ಪಿಕ್ಕಿ ಜನರ ರಕ್ಷಣೆಗೆ ಸಿದ್ದರಾಮಯ್ಯ ಆಗ್ರಹ
ಸೋಮಣ್ಣ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ ವರುಣಗೆ ಒಂದೇ ಒಂದು ಮನೆ ಕೊಟ್ಟಿದ್ದನಾ? ಈಗ ಬಂದು ಅಭಿವೃದ್ಧಿ ಬಗ್ಗೆ ಮಾತನಾಡುತ್ತಾನೆ. ನನ್ನ ಮತ್ತು ವರುಣ ಕ್ಷೇತ್ರದ ಸಂಬಂಧವನ್ನು ಕಿತ್ತು ಹಾಕಲು ಯಾರಿಂದಲೂ ಸಾಧ್ಯವಿಲ್ಲ. ನನ್ನ ಬಗ್ಗೆ ವರುಣ ಜನಕ್ಕೆ ಅಪಾರ ಪ್ರೀತಿ ವಿಶ್ವಾಸ ಇದೆ’ ಎಂದು ಹೇಳಿದರು.
ಯಾರೇ ಬರಲಿ, ಯಾರೇ ಅಭ್ಯರ್ಥಿಗಳನ್ನು ಬದಲಾಯಿಸಲಿ ಏನೇ ಆದರೂ ನನ್ನ ಗೆಲ್ಲುವು ನಿಶ್ಚಿತ. ವರುಣದಲ್ಲಿ ಬಿಜೆಪಿ-ಜೆಡಿಎಸ್ ಒಳ ಒಪ್ಪಂದಗಳ ಬಗ್ಗೆ ಎರಡ್ಮೂರು ದಿನದಲ್ಲಿ ಹೇಳುತ್ತೇನೆ. ನಾನು ಇನ್ನೂ ಅವರಿವರ ಮುಖ ನೋಡಿಲ್ಲ. ಮುಖಗಳನ್ನು ನೋಡಿದರೆ ಆಗ ಅರ್ಥ ಆಗುತ್ತದೆ. ಆಗ ಎಲ್ಲವನ್ನು ಹೇಳುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: Karnataka Assembly Election: ಶೆಟ್ಟರ್ ಟಿಕೆಟ್ ತಪ್ಪಿಸಲು ನಡೆದಿತ್ತಾ ಷಡ್ಯಂತ್ರ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.