ಬಾಗಲಕೋಟೆ: ಜಿಲ್ಲೆಯಲ್ಲಿನ ತೇರದಾಳ ಕ್ಷೇತ್ರದಲ್ಲಿ ಈಗ ಚುನಾವಣಾ ರಂಗು ಕಾವೇರಿದೆ, ಹೌದು ಈಗ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದಿಂದ ಅತೃಪ್ತಗೊಂಡಿರುವವವರು ಈಗ ಸ್ವಾಮಿಜೀಯವರನ್ನು ಚುನಾವಣಾ ಕಣಕ್ಕೆ ನಿಲ್ಲಿಸಿದ್ದಾರೆ.
ನಿನ್ನೆ ರಾತ್ರಿ ರಬಕವಿ-ಬನಹಟ್ಟಿಯಲ್ಲಿ ನಿನ್ನೆ ರಾತ್ರಿ ಸಭೆ ನಡೆಸಿದ ವಿವಿಧ ಸಮಾಜಗಳ ಮುಖಂಡರು ಕುರುಹಿನಶೆಟ್ಟಿ ಗುರುಪೀಠದ ಶಿವಶಂಕರ ಶಿವಾಚಾರ್ಯ ಸ್ವಾಮೀಜಿ ಅವರನ್ನು ಕಣಕ್ಕೆ ಇಳಿಸಲು ಮುಂದಾಗಿದ್ದಾರೆ ಈ ಹಿನ್ನೆಲೆಯಲ್ಲಿ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ.ಬಿಜೆಪಿಯ ಟಿಕೆಟ್ ವಂಚಿತ ಎಂಟು ಜನ ಆಕಾಂಕ್ಷಿಗಳು, ಕಾಂಗ್ರೆಸ್ ನ ಮೂವರು ಒಟ್ಟಾಗಿ ನೇಕಾರ ಸಮುದಾಯದ ಸ್ವಾಮೀಜಿಗೆ ಬೆಂಬಲಿಸುವ ತೀರ್ಮಾನ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಈಗ ಚುನಾವಣಾ ಕಣಕ್ಕೆ ಸ್ವಾಮೀಜಿ ಎಂಟ್ರಿ ಕೊಟ್ಟಿರುವುದರಿಂದ ಕ್ಷೇತ್ರದಲ್ಲಿ ಪೈಪೋಟಿ ಇನ್ನೂ ತೀವ್ರಗೊಳ್ಳಲಿದೆ ಎನ್ನಲಾಗಿದೆ.ತೇರದಾಳ ಕ್ಷೇತ್ರದಲ್ಲಿ ನೇಕಾರರೆ ಅಧಿಕ ಸಂಖ್ಯೆಯಲ್ಲಿ ಇರುವುದರಿಂದ ಸ್ವಾಮೀಜಿ ನಿರ್ಣಾಯಕ ಸ್ಪರ್ಧೆ ಒಡ್ಡಲಿದ್ದಾರೆ ಎನ್ನಲಾಗಿದೆ.ಸದ್ಯ ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಾಲಿ ಶಾಸಕ ಸಿದ್ದು ಸವದಿ ,ಕಾಂಗ್ರೆಸ್ ನಿಂದ ಸಿದ್ದು ಕೊನ್ನುರ,ಜೊತೆಗೆ ಈಗ ಪಕ್ಷೇತರ ಅಭ್ಯರ್ಥಿಯಾಗಿ ಸ್ವಾಮಿಜಿ ಸ್ಪರ್ಧಿಸುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.