ರಂಗೇರಿದ ಚುನಾವಣಾ ಕಣ: ಜಯನಗರ ಬಿಜೆಪಿ ಅಭ್ಯರ್ಥಿ ಸಿಕೆ ರಾಮಮೂರ್ತಿ ನಾಮಪತ್ರ ಸಲ್ಲಿಕೆ

Karnataka Assembly Election: ನಾಮಪತ್ರ ಸಲ್ಲಿಕೆಗೂ ಮುನ್ನ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಬಳಿಕ ದೇವಸ್ಥಾನದಿಂದ ಜಯನಗರ ಬಿಡಿಎ ಕಾಂಪ್ಲೆಕ್ಸ್ ತನಕ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಾವಿರಾರು ಬೆಂಬಲಿಗರು ಹಾಗೂ ಕಾರ್ಯಕರ್ತರು ಹಾಜರಾಗಿ ಜೈಕಾರ ಕೂಗಿದ್ರು. 

Written by - Manjunath Hosahalli | Last Updated : Apr 19, 2023, 10:01 AM IST
  • ಜಯನಗರದ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಕೆ. ರಾಮಮೂರ್ತಿ ನಾಮಪತ್ರ ಸಲ್ಲಿಕೆ
  • ಈ ವೇಳೆ ಜೈಕಾರ ಕೂಗಿದ ಸಾವಿರಾರು ಬೆಂಬಲಿಗರು ಮತ್ತು ಕಾರ್ಯಕರ್ತರು
  • ಬಿಜೆಪಿ ಕೆಲ ಕಾರ್ಯಕರ್ತರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆವರ ಮುಖವಾಡ ಧರಿಸಿ ಬಂದಿದ್ದು ವಿಶೇಷವಾಗಿತ್ತು
ರಂಗೇರಿದ ಚುನಾವಣಾ ಕಣ: ಜಯನಗರ ಬಿಜೆಪಿ ಅಭ್ಯರ್ಥಿ ಸಿಕೆ ರಾಮಮೂರ್ತಿ ನಾಮಪತ್ರ ಸಲ್ಲಿಕೆ title=

Karnataka Assembly Election 2023: ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಕಣ ರಂಗೇರಿದೆ. ಜಯನಗರದ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಕೆ. ರಾಮಮೂರ್ತಿ ಏಪ್ರಿಲ್ 18ರಂದು  ನಾಮಪತ್ರ ಸಲ್ಲಿಸಿದರು. ಜಯನಗರ ಬಿಡಿಎ ಕಾಂಪ್ಲೆಕ್ಸ್ ನಲ್ಲಿರುವ ಬಿಬಿಎಂಪಿ ಕಚೇರಿಯಲ್ಲಿ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದ್ರು.

ನಾಮಪತ್ರ ಸಲ್ಲಿಕೆಗೂ ಮುನ್ನ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಬಳಿಕ ದೇವಸ್ಥಾನದಿಂದ ಜಯನಗರ ಬಿಡಿಎ ಕಾಂಪ್ಲೆಕ್ಸ್ ತನಕ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಾವಿರಾರು ಬೆಂಬಲಿಗರು ಹಾಗೂ ಕಾರ್ಯಕರ್ತರು ಹಾಜರಾಗಿ ಜೈಕಾರ ಕೂಗಿದ್ರು. ಬಿಜೆಪಿ ಕೆಲ ಕಾರ್ಯಕರ್ತರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆವರ ಮುಖವಾಡ ಧರಿಸಿ ಬಂದಿದ್ದು ವಿಶೇಷವಾಗಿತ್ತು. ಜೊತೆಗೆ ವಿನಾಯಕ ದೇವಾಲಯದ ಬಳಿ ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು.

ಇದನ್ನೂ ಓದಿ- ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು, ಕೋಟಿಗಟ್ಟಲೆ ಆಸ್ತಿ ಘೋಷಣೆ

ಇನ್ನು ಈ ಸಂದರ್ಭದಲ್ಲಿ ಮಾತನಾಡಿದ ಎಸ್ ಟಿ ಸೋಮಶೇಖರ್, ಭಾರತೀಯ ಜನತಾಪಕ್ಷ ಕಾರ್ಯಕರ್ತರ ಸಂಘಟನೆಯ ಪಕ್ಷ. ಒಬ್ಬರೋ ಇಬ್ಬರೋ ಪಕ್ಷದಿಂದ ಹೊರಕ್ಕೆ ಹೋದರೆ ಪಕ್ಷಕ್ಕೆ ಧಕ್ಕೆಯಾಗಲ್ಲ. ಈ ಪಕ್ಷದಲ್ಲಿ ಒಂದು ಸಂಘಟನೆ ಇದೆ. ವೀರಶೈವರು, ಲಿಂಗಾಯಿತರು ಮೊದಲಿನಿಂದಲೂ ಭಾರತೀಯ ಜನತಾಪಕ್ಷದ ನೇತೃತ್ವ ವಹಿಸಿದಂಥವರು. ಯಾರೇ ಹೋಗಲಿ ಪಕ್ಷದ ಸಂಘಟನೆ ಚೆನ್ನಾಗಿರುತ್ತದೆ ಎಂದು ಹೇಳಿದರು.

ಇದನ್ನೂ ಓದಿ- ಶಿಗ್ಗಾವಿಯಲ್ಲಿ ಇಂದು ಸಿಎಂ ಪರ ಪ್ರಚಾರಕ್ಕೆ ಚಿತ್ರನಟ ಸುದೀಪ್

ಈ ಸಂದರ್ಭದಲ್ಲಿ ಹಲವು ಸಾಂಸ್ಕೃತಿಕ ತಂಡಗಳಿಂದ ನೃತ್ಯ ಕಾರ್ಯಕ್ರಮ ನಡೆಯಿತು.  ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವು ಪ್ರಮುಖ ನಾಯಕಋ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News