Tips for healthy and black hair: ಇಂದಿನ ಅನಾರೋಗ್ಯಕರ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿ ಕೂದಲಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅತ್ಯಂತ ಸಣ್ಣ ವಯಸ್ಸಿನಲ್ಲಿಯೇ ಕೂದಲು ಬೆಳ್ಳಗಾಗುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಬಹುತೇಕರು ಎದುರಿಸುತ್ತಿರುವ ಸಮಸ್ಯೆಯಾಗಿದೆ. ಬಿಳಿ ಕೂದಲು ಮತ್ತೆ ಕಪ್ಪಾಗಿಸಲು ಮಾರುಕಟ್ಟೆಯಲ್ಲಿ ನಾನಾ ರೀತಿಯ ಹೇರ್ ಕಲರ್ ಗಳಿವೆ. ಆದರೆ ಅವುಗಳು ಕೂದಲಿನ ಆರೋಗ್ಯಕ್ಕೆ ಎಷ್ಟು ಸರಿ ಎನ್ನುವ ಪ್ರಶ್ನೆ ಕೂಡಾ ಏಳುತ್ತದೆ. ಅಲ್ಲದೆ ಈ ಹೇರ್ ಕಲರ್ ಗಳು ಶಾಶ್ವತ ಪರಿಹಾರ ಅಲ್ಲವೇ ಅಲ್ಲ. ಜೊತೆಗೆ ದುಬಾರಿ ಬೆಲೆ ಕೊಟ್ಟು ಅವುಗಳನ್ನು ಖರೀದಿಸಬೇಕಾಗುತ್ತದೆ. ಇದರ ಬದಲು ಕೆಳಗೆ ತಿಳಿಸಲಾದ 6 ಸೂಪರ್ಫುಡ್ಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಿ. ಇದರೊಂದಿಗೆ, ನಿಮ್ಮ ಕೂದಲು ನೈಸರ್ಗಿಕವಾಗಿ ಕಪ್ಪಾಗಿರುತ್ತದೆ.
ಪಾಲಕ್ ಸೊಪ್ಪು: ಪಾಲಕ್ ಸೊಪ್ಪಿನಲ್ಲಿ ಕಬ್ಬಿಣಾಂಶ, ವಿಟಮಿನ್ ಎ, ಸಿ ಮತ್ತು ಫೋಲೇಟ್ ಹೇರಳವಾಗಿರುತ್ತದೆ. ಈ ಎಲ್ಲಾ ಅಂಶಗಳು ಕೂದಲಿನ ಆರೋಗ್ಯಕ್ಕೆ ಬಹಳ ಸಹಕಾರಿ. ಇದು ಕೂದಲು ಉದುರುವುದನ್ನು ತಡೆಯುತ್ತದೆ. ಕೂದಲಿಗೆ ನೈಸರ್ಗಿಕ ಕಂಡಿಷನರ್ ಆಗಿ ಕಾರ್ಯ ನಿರ್ವಹಿಸುತ್ತದೆ.
ಇದನ್ನೂ ಓದಿ : Diabetes: ಬೇಸಿಗೆಯಲ್ಲಿ ಮಧುಮೇಹವನ್ನು ನಿಯಂತ್ರಿಸುವ 5 ಸುಲಭ ವಿಧಾನಗಳು
ಮೊಟ್ಟೆ: ಮೊಟ್ಟೆ ಪ್ರೋಟೀನ್ ಮತ್ತು ಬಯೋಟಿನ್ನ ಸಮೃದ್ಧ ಮೂಲವಾಗಿದೆ. ಇದು ಆರೋಗ್ಯಕರ ಕೂದಲಿನ ಬೆಳವಣಿಗೆಗೆ ಅವಶ್ಯಕವಾಗಿದೆ. ಮೊಟ್ಟೆ ವಿಟಮಿನ್ ಬಿ 5 ಮತ್ತು ಬಿ 12 ಅನ್ನು ಹೊಂದಿದೆ. ಇದು ನೆತ್ತಿಯಲ್ಲಿ ರಕ್ತ ಪರಿಚಲನೆ ಸುಧಾರಿಸಲು ಸಹಾಯ ಮಾಡುತ್ತದೆ. ಮೊಟ್ಟೆಯ ಸೇವನೆಯು ಕೂದಲು ಬಿಳಿಯಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ.
ಬಾದಾಮಿ: ಬಾದಾಮಿಯು ವಿಟಮಿನ್ ಇ ಯ ಉತ್ತಮ ಮೂಲವಾಗಿದೆ. ಇದು ಕೂದಲು ಅಕಾಲಿಕವಾಗಿ ಬಿಳಿಯಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ. ವಿಟಮಿನ್ ಇ ಒಂದು ಉತಮ ಆಂಟಿ ಒಕ್ಸಿಡೆಂಟ್ ಆಗಿದ್ದು, ಫ್ರೀ ರಾಡಿಕಲ್ ಗಳಿಂದ ಉಂಟಾಗುವ ಹಾನಿಯನ್ನು ತಡೆಯುತ್ತದೆ.
ಬೆರ್ರಿ ಹಣ್ಣುಗಳು: ಬೆರ್ರಿಗಳು ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ. ಇದು ಕೂದಲಿನ ಕಿರುಚೀಲಗಳನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಬೆರ್ರಿ ಹಣ್ಣುಗಳು ವಿಟಮಿನ್ ಸಿಯಲ್ಲಿ ಕೂಡಾ ಸಮೃದ್ಧವಾಗಿದೆ. ಇದು ಕಾಲಜನ್ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಕಾಲಜನ್ ಕೂದಲನ್ನು ದೃಢವಾಗಿ ಮತ್ತು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.
ಇದನ್ನೂ ಓದಿ : Sugarcane Juice: ಈ ಆರೋಗ್ಯ ಸಮಸ್ಯೆ ಇರುವವರು ತಪ್ಪಿಯೂ ಕುಡಿಯಬೇಡಿ ಕಬ್ಬಿನ ಜ್ಯೂಸ್!
ಸಿಹಿ ಗೆಣಸು: ಸಿಹಿ ಗೆಣಸು ಬೀಟಾ-ಕ್ಯಾರೋಟಿನ್ನಲ್ಲಿ ಸಮೃದ್ಧವಾಗಿದೆ. ಇದು ದೇಹದಲ್ಲಿ ವಿಟಮಿನ್ ಎ ಆಗಿ ಪರಿವರ್ತನೆಯಾಗುತ್ತದೆ. ವಿಟಮಿನ್ ಎ ಕೂದಲು ಆರೋಗ್ಯಕರವಾಗಿರಲು ಸಹಾಯ ಮಾಡುತ್ತದೆ. ಇದಲ್ಲದೆ, ಇದು ಕೂದಲು ಬೇಗನೆ ಬಿಳಿಯಾಗುವುದನ್ನು ತಡೆಯುತ್ತದೆ.
ಅಣಬೆ : ಆಹಾರದಲ್ಲಿ ಅಣಬೆಯನ್ನು ಸೇರಿಸಿಕೊಂಡರೆ ಬಿಳಿ ಕೂದಲಿನ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಬಹುದು. ಅಣಬೆಗಳು ಮೆಲನಿನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಇದರಿಂದ ಕೂದಲು ಬೇಗ ಬೆಳ್ಳಗಾಗುವುದಿಲ್ಲ.
( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಜ್ಞಾನವನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.